ದ್ವಿತೀಯ ಪಿ.ಯುಸಿ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಲಾದ ಪ್ರತಿಯನ್ನು ವಿದ್ಯಾರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಲು ಜುಲೈ 15 ರ ವರೆಗೆ ಹಾಗೂ ಮರುಮೌಲ್ಯಮಾಪನ ಮತ್ತು ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 18 ರ ವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವಕರಿಗೆ ಸೇನಾ ತರಬೇತಿ ನೀಡಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಸೇನೆಗೆ ಸೇರಬಯಸುವ ರಾಜ್ಯದ ಯುವ ಜನತೆಗೆ ಪೂರ್ವಭಾವಿ ತರಬೇತಿಯನ್ನು ನೀಡಲು ಓರ್ವ ಮಾಜಿ ಸೇನಾ ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ತರಬೇತಿ ಹೊಂದಿರುವ ಮೂರು ಮಾಜಿ ಸೈನಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ [email protected] ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 15 ರಿಂದ ಆಗಸ್ಟ್ 15 ರವರೆಗೆ ಜಿಲ್ಲಾ ಕಾರ್ಮಿಕ ಅದಾಲತ್ ಕಾರ್ಯಕ್ರಮ

  ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ ಮಂಡಳಿಗಳ ಮೂಲಕ ಅನುಷ್ಠಾನಗೊಳಿಸುವ ಯೋಜನೆಗಳಡಿ ಸ್ವೀಕೃತವಾಗಿರುವ, ಇತ್ಯರ್ಥವಾಗದೆ ಬಾಕಿ ಉಳಿದಿರುವ ಪ್ರಕರಣ, ಕಡತ ಹಾಗೂ ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಜುಲೈ 15 ರಿಂದ ಆಗಸ್ಟ್ 15 ರ ವರೆಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಹಾಗೂ ಉಡುಪಿ, ಕುಂದಾಪುರ, ಕಾರ್ಕಳ ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಕಾರ್ಮಿಕ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕಾರ್ಮಿಕರು, ಮಾಲೀಕರು ಹಾಗೂ […]

ಉಡುಪಿ: ತ್ವರಿತ ನ್ಯಾಯಕ್ಕಾಗಿ ಆಗಸ್ಟ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ

ಉಡುಪಿ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣದಲ್ಲಿ ಆಗಸ್ಟ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಸದರಿ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ಮೋಟಾರು ವಾಹನ ಅಪಘಾತ ಪರಿಹಾರ, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ […]

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881, 2573881 ಅನ್ನು […]