ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಸಾಧಕ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಮತ್ತು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಮೈಸೂರು: ಮೈಸೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಾತಿಗೆ ಪಿ.ಜಿ.ಸಿ.ಇ.ಟಿ ಬರೆದಿರುವ /ಬರೆಯದ, ಬಿ.ಇ., ಮೆಕ್ಯಾನಿಕಲ್, ಇಂಡಸ್ಟಿçಯಲ್ ಪ್ರೊಡಕ್ಷನ್, ಆಟೋಮೊಬೈಲ್, ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಫ್ಲಾಟ್ ನಂ. 93 ಮತ್ತು 94, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಮೈಸೂರು […]

ತ್ಯಾಜ್ಯ ನಿರ್ವಹಣೆ ಕುರಿತ ಕಿರುಚಿತ್ರ ಸಲ್ಲಿಕೆಗೆ ಅವಕಾಶ

ಉಡುಪಿ: ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಜಿಲ್ಲೆಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆ ಚಟುವಟಿಕೆ ಅನುಷ್ಠಾನವಾಗುತ್ತಿದ್ದು, ಒಣಕಸ ಹಾಗೂ ಹಸಿಕಸ ನಿರ್ವಹಣೆಯನ್ನು ಮಾಡಲಾಗುತ್ತಿದೆ. ಈ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಲಾ 5 ನಿಮಿಷಗಳ ಅವಧಿಯ 3 ಕಿರುಚಿತ್ರಗಳನ್ನು ತಯಾರಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಕಚೇರಿ ಅಥವಾ ಮೊ.ನಂ: 9964443064 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಸಫಾಯಿ ಕರ್ಮಚಾರಿಗಳಿಗೆ ಸರಕು ಸಾಗಾಣಿಕೆ ವಾಹನಕ್ಕಾಗಿ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂಜರ್ಸ್   ಹಾಗೂ ಅವರ ಅವಲಂಬಿತರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ (ದ್ವಿ-ಚಕ್ರ / ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ) ಸಾಲ ಸೌಲಭ್ಯ ಪಡೆಯಲು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ […]

ಉಡುಪಿ ನಗರಸಭೆ ನಗರೋತ್ಥಾನ ಅನುದಾನದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ನಗರೋತ್ಥಾನ 4 ನೇ ಹಂತದ ಅನುದಾನದಡಿ ಶೇ.24.10, ಶೇ.7.25 ಮತ್ತು ಶೇ.5ಕ್ಕೆ ಮಂಜೂರಾದ ಮೊತ್ತದಲ್ಲಿ, ಪ.ಜಾತಿ, ಪ.ಪಂಗಡ, ಬಡಜನರು ಮತ್ತು ವಿಕಲಚೇತನರಿಗೆ ವಿವಿಧ ಸೌಲಭ್ಯಗಳಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದ್ದು, 2022-23 ನೇ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಪಡಿತರ ಚೀಟಿ ಪ್ರತಿ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಡಿಸೆಂಬರ್ 31 ರೊಳಗೆ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.