ಮೀನುಗಾರರ ಮಕ್ಕಳ ಶಿಷ್ಯವೇತನ: ಐಡಿ ರಚನೆಗೆ ಡಿ. 15 ಕೊನೆ ದಿನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಡಿ 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಪ್ರೂಟ್ಸ್ ಐಡಿ ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 15 ರ ವರೆಗೆ […]

ಜಿಲ್ಲಾ ಯುವ ಮಂಡಳಿ ಪ್ರಶಸ್ತಿ: ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನ

ಉಡುಪಿ: ನೆಹರು ಯುವ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿ, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವ, 2021 ಏಪ್ರಿಲ್ 1 ರಿಂದ 2022 ಮಾರ್ಚ್ 31 ರ ಒಳಗೆ ಗ್ರಾಮ, ಪಟ್ಟಣ ಮತ್ತು ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರುವ ಜಿಲ್ಲೆಯ ಯುವಕ-ಯುವತಿ ಮಂಡಳಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ಯುವ ಮಂಡಳಗಳು 25,000 ರೂ. ಪ್ರಶಸ್ತಿ ಪತ್ರದ […]

ಹವಾಮಾನಾಧಾರಿತ ಬೆಳೆ ವಿಮೆ ಪಾವತಿ: ಜಮಾ ಆಗದ ಮೊತ್ತಕ್ಕಾಗಿ ವಿಮಾ ಶಾಖೆ ಸಂಪರ್ಕಿಸಿ

ಉಡುಪಿ: ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ 2021-22 ನೇ ಸಾಲಿನಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ನೊಂದಾವಣೆ ಮಾಡಿಸಿದ ರೈತರ ವಿಮಾ ಪ್ರಕರಣಗಳಲ್ಲಿ 4642 ವಿಮಾ ಪ್ರಕರಣಗಳಿಗೆ ರೂ 6,15,57,981 ಪರಿಹಾರ ಮೊತ್ತವು ಅಕ್ಟೋಬರ್ 31 ರಂದು ದಿನಾಂಕ 31-10-2022 ರಿಂದ ಅಗ್ರಿಕ್ಚರ್ ವಿಮಾ ಕಂಪನಿಯ ವತಿಯಿಂದ ಪಾವತಿಯಾಗುತ್ತಿದೆ. 2021-22 ನೇ ಸಾಲಿನಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಒಟ್ಟು 5734 ಪ್ರಕರಣಗಳು ನೋಂದಣಿಯಾಗಿದ್ದು 1092 ಪ್ರಕರಣಗಳು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಬೆಳೆ ತಾಳೆಯಾಗದ […]

ಮೀನುಗಾರರ ಮಕ್ಕಳ ಉನ್ನತ ಶಿಕ್ಷಣದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮುಖ್ಯಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ […]

ಪ.ಜಾ/ಪ.ಪ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 […]