ಬೆಂಗಳೂರು: ವಿಜ್ಞಾನ ಮತ್ತು ಪತ್ರಿಕೋದ್ಯಮ ಪದವೀಧರರಿಗೆ ಪಠ್ಯಾನುವಾದ ಕಮ್ಮಟ

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆ ವಿಜ್ಞಾನ್ ಪ್ರಸಾರ್ ಮತ್ತು ಕುವೆಂಪು ಭಾಷಾ ಭಾರತಿ ಇವರ ಸಹಯೋಗದೊಂದಿಗೆ ವಿಜ್ಞಾನ ಮತ್ತು ಪತ್ರಿಕೋದ್ಯಮ ಪದವೀಧರರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಪಠ್ಯ ಅನುವಾದ ವಿಷಯದ ಕುರಿತು ಅಕ್ಟೋಬರ್ 18 ಮತ್ತು 19 ರಂದು ಎರಡು ದಿನಗಳ ಕಮ್ಮಟವನ್ನು ಬೆಂಗಳೂರು ವಿದ್ಯಾರಣ್ಯಪುರದಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗುವುದು. ಕಮ್ಮಟದಲ್ಲಿ ವಿಶೇಷ ಉಪನ್ಯಾಸ, ಅನುವಾದ ತಂತ್ರಗಳ ಟಿಪ್ಪಣಿ ಮತ್ತು ಅಭ್ಯಾಸ ಅಧಿವೇಶನಗಳನ್ನು ಏರ್ಪಡಿಸಲಾಗಿದ್ದು, ಭಾಗವಹಿಸಲು […]

ಡಾ. ಬಿ.ಆರ್.ಅಂಬೇಡ್ಕರ್ ದೀಕ್ಷಾಭೂಮಿ ಯಾತ್ರೆ: ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 26 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ […]

ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಬ್ಯಾಟರಿ ಚಾಲಿತ/ ಇತರೆ ದ್ವಿಚಕ್ರ ವಾಹನ ಯೋಜನೆ, ಪೌರಕಾರ್ಮಿಕ/ ಸಪಾಯಿ ಕರ್ಮಚಾರಿ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣಾ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತರಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು […]

ಪ.ಜಾತಿ-ಪ.ಪಂಗಡದ ಯುವಕರಿಗೆ ನಾರಾಯಣ ಹೃದಯಾಲಯದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಜನರಿಗೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ನಾರಾಯಣ ಹೃದಯಾಲಯದಲ್ಲಿ 6 ತಿಂಗಳ ಅವಧಿಗೆ ಆರೋಗ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, 18 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಾರಾಯಣ ಹೃದಯಾಲಯದ ಕೌಸಲ್ಯಾ ದೇವಿ ಮೊ.ನಂ: 8525808078, ವಿಕಾಸ್ ಮೊ.ನಂ:7018879650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್‌ನ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 29 ರ ಒಳಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹೆಸರನ್ನು ನೊಂದಾಯಿಸಲು ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.