ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಬ್ಯಾಟರಿ ಚಾಲಿತ/ ಇತರೆ ದ್ವಿಚಕ್ರ ವಾಹನ ಯೋಜನೆ, ಪೌರಕಾರ್ಮಿಕ/ ಸಪಾಯಿ ಕರ್ಮಚಾರಿ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣಾ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತರಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು […]

ಪ.ಜಾತಿ-ಪ.ಪಂಗಡದ ಯುವಕರಿಗೆ ನಾರಾಯಣ ಹೃದಯಾಲಯದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಜನರಿಗೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ನಾರಾಯಣ ಹೃದಯಾಲಯದಲ್ಲಿ 6 ತಿಂಗಳ ಅವಧಿಗೆ ಆರೋಗ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, 18 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಾರಾಯಣ ಹೃದಯಾಲಯದ ಕೌಸಲ್ಯಾ ದೇವಿ ಮೊ.ನಂ: 8525808078, ವಿಕಾಸ್ ಮೊ.ನಂ:7018879650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್‌ನ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 29 ರ ಒಳಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹೆಸರನ್ನು ನೊಂದಾಯಿಸಲು ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಶಿಕ್ಷಣ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್ kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 0820-2574882, ಮೊ.ನಂ: 9448451111 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ: ಯುವಕ ಯುವತಿಯರಿಂದ ಸ್ವ-ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತ 18 ವರ್ಷ ಮೇಲ್ಪಟ್ಟ ಯುವಕ-ಯುವತಿಯರಿಂದ ವೆಬ್‌ಸೈಟ್ http://www.kviconline.gov.in/pmegpeportal/jsp/pmegponline.jsp ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574855 […]