ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ

ಮಂಗಳೂರು: ಕೇಂದ್ರ ಸರ್ಕಾರದ ಬರ ಪರಿಹಾರ, ಬೆಳೆವಿಮೆ ಹಾಗೂ ಪಿ.ಎಂ. ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರಾಜ್ಯದ “ಫ್ರೂಟ್ಸ್” ಮಾದರಿಯಂತೆಯೇ ಕೇಂದ್ರ ಸರ್ಕಾರವು ‘ಕೇಂದ್ರ ರೈತ ಐಡಿ’ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಮಂಗಳೂರು ತಾಲೂಕಿನಲ್ಲಿ ಒಟ್ಟು ಎಫ್.ಐ.ಡಿ. ಹೊಂದಿರುವ 35,990 ರೈತರ ಪೈಕಿ ಇನ್ನು 14,520 ರೈತರು ನೋಂದಣಿಗೆ ಬಾಕಿ ಉಳಿದಿದ್ದಾರೆ. ರೈತರು ಮೊದಲು ಇ-ಕೆವೈಸಿ  ಮಾಡಿಸಿ, ಬಳಿಕ ವಿದ್ಯುನ್ಮಾನ ಸಹಮತಿ ಪತ್ರ ನೀಡುವುದು ಕಡ್ಡಾಯವಾಗಿದೆ. ಇದರ ನಂತರವಷ್ಟೇ ಕೇಂದ್ರದ ರೈತ ಐಡಿ ಸೃಜನೆಯಾಗುತ್ತದೆ. ಇನ್ನು ಕೆಲವೇ […]

ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು- ತರಬೇತಿ ಕಾರ್ಯಾಗಾರ

ಮಂಗಳೂರು:  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು” (Advanced Intellectual Property Rights (IPR)) ವಿಷಯದ ಮೇಲೆ ಜೂನ್ 16 ರಿಂದ ಜೂನ್ 20 ರವರೆಗೆ 5 ದಿನಗಳ ತರಬೇತಿ ಕಾರ್ಯಾಗಾರವನ್ನು ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಆಸಕ್ತ ವಿಜ್ಞಾನ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, […]

ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ! ಯಾರಿಗೆ ಸಿಗಲಿದೆ ಈ ಸೌಲಭ್ಯ?

ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್‌ಟಾಪ್ ಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಬದಲು ನೇರವಾಗಿ ₹50,000 ನಗದು ಬಹುಮಾನ ನೀಡಲಾಗುತ್ತದೆ. ಈ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣವನ್ನು ನೇರ ವರ್ಗಾವಣೆ (DBT) ಮೂಲಕ ಜಮಾ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಸ್ವಾತಂತ್ರ್ಯ ನೀಡುವುದು ಹಾಗೂ ಲ್ಯಾಪ್‌ಟಾಪ್ ವಿತರಣೆ ಸಂಬಂಧಿತ ತಾಂತ್ರಿಕ […]

“ಮಹಾತ್ಮಾ ಗಾಂಧಿ ನರೇಗಾ” ಬದಲಿಗೆ ಜೂ. 1 ರಿಂದ “ವಿಬಿ-ಜಿ ರಾಮ್ ಜಿ”; ಏನೆಲ್ಲಾ ಬದಲಾವಣೆ? ಮಾಹಿತಿ ಇಲ್ಲಿದೆ

ಗ್ರಾಮೀಣ ಉದ್ಯೋಗ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು 2005ರಲ್ಲಿ ಜಾರಿಗೆ ಬಂದಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ Mahatma Gandhi National Rural Employment Guarantee Act (MGNREGA/ನರೇಗಾ) ಕಾಯ್ದೆಯನ್ನು ರದ್ದುಗೊಳಿಸಿ, ಅದರ ಬದಲಿಗೆ ‘ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)’- (VB-G RAM G) ಕಾಯ್ದೆ, 2025 ಅನ್ನು ಜಾರಿಗೆ ತಂದಿದೆ. ಅಂದರೆ ಈ ಹೊಸ ಕಾಯ್ದೆಯು ಗ್ರಾಮೀಣ ಭಾಗದ ಆರ್ಥಿಕತೆಯನ್ನು ಬಲಪಡಿಸುವ ಮತ್ತು […]

ಮುರ್ಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಮಾರ್ಗದಲ್ಲಿ ಬದಲಾವಣೆ

ಉಡುಪಿ: ನೈರುತ್ಯ ರೈಲ್ವೇ ವತಿಯಿಂದ ಕೆ.ಎಸ್.ಆರ್. ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ KSR Bengaluru Railway Station ನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಿನ್ನೆಲೆ, ಮುರ್ಡೇಶ್ವರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ರೈಲು ಸಂಖ್ಯೆ 16586 ಎಕ್ಸ್‌ಪ್ರೆಸ್ ರೈಲಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಕೊಂಕಣ್ ರೈಲ್ವೇ Konkan Railway ಪ್ರಕಟಣೆ ತಿಳಿಸಿದೆ. ಮುಂದಿನ ಜುಲೈ 16 ಮತ್ತು 17ರಂದು ಸಂಚರಿಸುವ ಮುರ್ಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕೆ.ಎಸ್.ಆರ್. ಬೆಂಗಳೂರು, ಯಶವಂತಪುರ, ಹೆಬ್ಬಾಳ ಹಾಗೂ ಬಾಣಸವಾಡಿ ಮೂಲಕ ಸಂಚರಿಸಲಿದೆ. […]