ಜುಲೈ 29 ರಂದು ಉಡುಪಿ ತಾ.ಪಂ ಸಾಮಾನ್ಯ ಸಭೆ

ಉಡುಪಿ: ಉಡುಪಿ ತಾಲೂಕು ಪಂಚಾಯತ್‌ನ ಸಾಮಾನ್ಯ ಸಭೆಯು ಜುಲೈ 29 ರಂದು ಬೆಳಗ್ಗೆ 11.30 ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಆಡಳಿತ ಅಧಿಕಾರಿ ಬಾಬು ಎಮ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಅರ್ಹತಾ ವಿದ್ಯಾರ್ಥಿವೇತನಕ್ಕೆ ವೆಬ್‌ಸೈಟ್ www.tw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಣಿಪಾಲ ದೂ.ಸಂಖ್ಯೆ: 0820-2574814, 2950198 ಅಥವಾ ಉಡುಪಿ ದೂ.ಸಂಖ್ಯೆ: 0820-258884, ಕುಂದಾಪುರ ದೂ.ಸಂಖ್ಯೆ: 08254-234609 ಹಾಗೂ ಕಾರ್ಕಳ ದೂ.ಸಂಖ್ಯೆ: 08258-232133 […]

ಆಗಸ್ಟ್ 1-8 ರವರೆಗೆ ಗಣಕ ಯಂತ್ರ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್ 1 ರಿಂದ 8 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, […]

ಉಡುಪಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-3 ಹುದ್ದೆ ಹಾಗೂ ಸಹಾಯಕಿಯರ-22 ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ http://udupi.nic.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿ ಗರಿಷ್ಠ 9 ನೇ ತರಗತಿ ವರೆಗೆ ವಿದ್ಯಾರ್ಹತೆ ಹೊಂದಿರುವ ಮಹಿಳಾ […]

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ: ಪ.ಜಾತಿಯ ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯ […]