ಕೋಟ: ಜುಲೈ 8 ರಂದು ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಅಹವಾಲು ಸ್ವೀಕಾರ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 8 ರಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸಮಾಜ ಕಲ್ಯಾಣ ಇಲಾಖೆ: ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಎಸ್.ಸಿ-ಎಸ್.ಟಿ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಸ್ಪೃಶ್ಯತಾ ನಿವಾರಣೆ, ಎಸ್.ಸಿ. ಹಾಗೂ ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಇಲಾಖಾ ಕಾರ್ಯಕ್ರಮ ಹಾಗೂ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ, ಕಾರ್ಯಾಗಾರ ಮತ್ತು ಬೀದಿ ನಾಟಕಗಳಂತಹ ಕಾರ್ಯಕ್ರಮಗಳನ್ನು ನಡೆಸಲು ಅರ್ಹ ಎಸ್.ಸಿ ಹಾಗೂ ಎಸ್.ಟಿ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಕಾರ್ಯಕ್ರಮಗಳನ್ನು ನಡೆಸಲು ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ, ಪ್ರಸ್ತುತ ಸಂಸ್ಥೆಯ ನೋಂದಣಿ ಚಾಲ್ತಿಯಲ್ಲಿರುವ, ಪರಿಶಿಷ್ಟ ಜಾತಿ, ಪಂಗಡದ ಜನರ ಕಲ್ಯಾಣಕ್ಕಾಗಿ ಸೇವೆ […]

ಕಾರ್ಕಳ ಪುರಸಭೆ: ನಿರುದ್ಯೋಗಿ ಯುವಕ–ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಸಾಲ ಸೌಲಭ್ಯ

  ಉಡುಪಿ: ಕಾರ್ಕಳ ಪುರಸಭೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ ದಯಾಳ್ ಅಂತ್ಯೋದಯ ಯೋಜನೆಯ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ನಿರುದ್ಯೋಗಿ ಯುವಕ–ಯುವತಿಯರು ಸ್ವಯಂ-ಉದ್ಯೋಗ ಕೈಗೊಳ್ಳಲು ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿದರದಲ್ಲಿ 2 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುವುದು. ಮಹಿಳಾ ಉಳಿತಾಯ ಗುಂಪುಗಳ ರಚನೆ, ಈಗಾಗಲೇ ರಚಿಸಲಾಗಿರುವ ಮಹಿಳಾ ಉಳಿತಾಯ ಗುಂಪುಗಳಿಗೆ ಬ್ಯಾಂಕ್ ಲಿಂಕೇಜ್, ಉಳಿತಾಯ ಗುಂಪುಗಳ ಮಹಿಳೆಯರಿಗೆ ಆಹಾರ […]

ಭತ್ತದ ಬೆಳೆ ಸ್ಪರ್ಧೆಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಭತ್ತದ ಬೆಳೆ ಸ್ಪರ್ಧೆಗೆ ರೈತ ಹಾಗೂ ರೈತ ಮಹಿಳೆಯರಿಂದ ಪ್ರತ್ಯೇಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಯ್ಕೆ ಮಾಡಲಾದ ಬೆಳೆಗಳಲ್ಲಿ ಬೆಳೆ ಸ್ಫರ್ಧೆ ನಡೆಸಿ ಪ್ರತಿ ಹಂತದಲ್ಲಿ 3 ಬಹುಮಾನಗಳನ್ನು ನೀಡಲಾಗುತ್ತಿದ್ದು, ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ರೈತರು ಹಾಗೂ ರೈತ ಮಹಿಳೆಯರು ವಿವಿಧ ಹಂತದ ಬೆಳೆ ಸ್ಫರ್ಧೆಗೆ ನಿಗದಿತ ಪ್ರವೇಶ ಶುಲ್ಕವನ್ನು ಪಾವತಿಸಿ, ಪಹಣಿ, ಪರಿಶಿಷ್ಟ ಜಾತಿ […]

ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಚುನಾವಣಾಧಿಕಾರಿಗಳ ನೇಮಕ

ಉಡುಪಿ: ಬ್ರಹ್ಮಾವರ ತಾಲೂಕು ಹೆಗ್ಗುಂಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ ಹಾಗೂ ವಾರಂಬಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಉಪ್ಪೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಕೊಕ್ಕರ್ಣೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದೇವೇಂದ್ರ ಕೆ ಮೋಗೆರ, ನಾಲ್ಕೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಸೈಬ್ರಕಟ್ಟೆ ಪಶು […]