ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸ್ವ-ಉದ್ಯೋಗ ಆರಂಭಿಸಲು ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ ರೂ. 50.00 ಲಕ್ಷ ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ ರೂ. 20.00 ಲಕ್ಷ ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದ್ದು, […]
ವಿವಿಧೆಡೆ ಐ.ಟಿ.ಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೈಂದೂರು ಬೈಂದೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಎನ್.ಸಿ.ವಿ.ಟಿ ಸಂಯೋಜನೆ ಹೊಂದಿರುವ ಎಲೆಕ್ಟ್ರಿಷಿಯನ್ ಮತ್ತು ಫಿಟ್ಟರ್ ವೃತ್ತಿಗಳಿಗೆ ಹಾಗೂ ಉದ್ಯೋಗ ಯೋಜನೆಯ ಟಾಟಾ ಟೆಕ್ನಾಲಜೀಸ್ ಸಹಯೋಗದೊಂದಿಗೆ ಇಂಡಸ್ಟ್ರಿಯಲ್ ರೋಬೋಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಮತ್ತು ಮೆಷಿನ್ ಎಲೆಕ್ಟ್ರಿಕ್ ವೆಹಿಕಲ್ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ www.cite.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ […]
ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾರ್ಥಿ ಹಾಗೂ ಉಪನ್ಯಾಸಕರಿಗೆ ಕಾರ್ಯಾಗಾರ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಇವರ ಸಹಯೋಗದೊಂದಿಗೆ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಇಂಟಲೆಕ್ಚುವಲ್ ಪ್ರೋಪರ್ಟಿ ರೈಟ್ಸ್ ಅಂಡ್ ಎಂಟರ್‌ಪ್ರೆನೋರ್‌ಶಿಪ್ ಡೆವಲಪ್‌ಮೆಂಟ್ ವಿಷಯದ ಕುರಿತು ಕಾರ್ಯಾಗಾರವು ಜೂನ್ 19 ರಿಂದ 23 ರ ವರೆಗೆ ಬೆಂಗಳೂರಿನ ಜಿ.ಕೆ.ವಿ.ಕೆ ಆವರಣದ ಪ್ರೊ. ಯು.ಆರ್ ರಾವ್ ವಿಜ್ಞಾನ ಭವನದ […]
ಮಲ್ಪೆ: ಸರಕಾರಿ ಜಾಗ ಅತಿಕ್ರಮಣ ಮಾಡಿದಲ್ಲಿ ಕಾನೂನು ಕ್ರಮ

ಮಲ್ಪೆ: ಮಲ್ಪೆ ಬೀಚ್ ಉತ್ತರ ಭಾಗದ ಪ್ರದೇಶದಲ್ಲಿರುವ ಸರಕಾರಕ್ಕೆ ಸೇರಿದಂತಹ ಖಾಲಿ ಜಾಗದ ಸರ್ವೇ ಪ್ರಕ್ರಿಯೆಯು ಈಗಾಗಲೇ ಮುಕ್ತಾಯಗೊಂಡಿದ್ದು, ಸದರಿ ಪ್ರದೇಶದಲ್ಲಿ ಕೆಲವೊಂದು ವ್ಯಕ್ತಿಗಳು ಅನಧಿಕೃತವಾಗಿ ಮಣ್ಣನ್ನು ಹಾಕಿ ಜಾಗವನ್ನು ಸಮತಟ್ಟು ಮಾಡುತ್ತಿರುವುದು ಮತ್ತು ಸರ್ಕಾರಿ ಜಾಗ ಅತಿಕ್ರಮಣ ಮಾಡುತ್ತಿರುವುದು ಕಂಡುಬಂದಿದ್ದು, ಇದು ಸಿ.ಆರ್.ಝಡ್ ಇಲಾಖೆಯ ನಿಯಮ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ಸದರಿ ಪ್ರದೇಶದಲ್ಲಿ ಅನಧಿಕೃತವಾಗಿ ಯಾವುದೇ ಕಾಮಗಾರಿ ಕೈಗೊಂಡಲ್ಲಿ ಮುನ್ಸೂಚನೆ ನೀಡದೇ ತೆರವುಗೊಳಿಸಲಾಗುವುದು ಹಾಗೂ ಸರಕಾರಕ್ಕೆ ಸಂಬಂಧಿಸಿದ ಖಾಲಿ ಜಾಗದಲ್ಲಿ ಅನಧಿಕೃತವಾಗಿ ಕಾಮಗಾರಿ ಕೈಗೊಳ್ಳುವವರ ವಿರುದ್ಧ ಕಾನೂನು […]
ತಿರಸ್ಕೃತ ಬೆಳೆ ವಿಮೆ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಪೂರಕ ದಾಖಲೆ ಸಲ್ಲಿಸಿ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2021-22 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಯಾದ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆಯಾಗದ ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿ, ಅಂತಿಮವಾಗಿ ವಿಮಾ ಸಂಸ್ಥೆಯವರು ವಿಮೆ ನೋಂದಾಯಿಸಿದ ಬೆಳೆಗೂ ಹಾಗೂ ಬೆಳೆ ಸಮೀಕ್ಷಾ ವರದಿಗೂ ತಾಳೆಬಾರದಿರುವ ಹಿನ್ನೆಲೆ ತಿರಸ್ಕರಿಸಿರುತ್ತಾರೆ. ಈ ತಿರಸ್ಕೃತ ಪ್ರಕರಣಗಳ ಪಟ್ಟಿಯನ್ನು ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬ್ರಹ್ಮಾವರ ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಪಟ್ಟ […]