ಆಗಸ್ಟ್​ 23, ಸಂಜೆ 6.04 ನಿಮಿಷಕ್ಕೆ ಚಂದ್ರನ ಮೇಲೆ ಇಳಿಯುವ ‘ವಿಕ್ರಮ್​’

ನವದೆಹಲಿ : ಇನ್ನು ಮೂರೇ ದಿನಗಳಲ್ಲಿ ಭಾರತ ಐತಿಹಾಸಿಕ ದಾಖಲೆ ನಿರ್ಮಾಣಕ್ಕೆ ಸಜ್ಜಾಗಿದೆ.ಭಾರತ ಸೇರಿದಂತೆ ವಿಶ್ವವೇ ತುದಿಗಾಲ ಮೇಲೆ ನಿಂತು ಕಾಯುತ್ತಿರುವ ಚಂದ್ರಯಾನ-3 ನೌಕೆಯ ಲ್ಯಾಂಡಿಂಗ್​​ನ ದಿನ ಮತ್ತು ಸಮಯವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧಿಕೃತವಾಗಿ ಪ್ರಕಟಿಸಿದೆ.ಚಂದ್ರಯಾನ-3 ನೌಕೆಯನ್ನು ಚಂದಮಾಮನ ದಕ್ಷಿಣ ಧ್ರುವದ ಮೇಲೆ ಇಳಿಸುವ ದಿನಾಂಕ, ಮುಹೂರ್ತವನ್ನು ಇಸ್ರೋ ಅಧಿಕೃತವಾಗಿ ಘೋಷಿಸಿದೆ. ಐತಿಹಾಸಿಕ ಕ್ಷಣಗಳ ನೇರಪ್ರಸಾರ ಕೂಡ ಇರಲಿದೆ ಎಂದಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿಪಡಿಸಲಾದ ಜಾಗದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್​ ಆಗಸ್ಟ್ 23 […]

ಆಟಿಸಂ ಮಕ್ಕಳನ್ನು ಪ್ರೀತಿಸೋಣ: ಆಟಿಸಂ ಮಗುವಿನ ಪಾಲಕರಿಗೊಂದು ಕಿವಿಮಾತು!

ಆಟಿಸಂ (Autism)  ಮಗು ಬೆಳೆಯುವ ಹಂತದಲ್ಲಿ ಪೋಷಕರು  ತನ್ನ ಮಗು ಉಳಿದ ಮಕ್ಕಳಿಗಿಂತ ಭಿನ್ನವಾಗಿದೆ, ಎಂದು ತಿಳಿದನಂತರ ಪೋಷಕರಿಗೆ ಆ ಸತ್ಯವನ್ನು ಸ್ವೀಕರಿಸಲು ಮತ್ತು ತನ್ನ ಮಗುವನ್ನು ಬೆಳೆಸಲು ಸರಿಯಾದ  ವಿಧಾನ ಮತ್ತು ಸಂಬಂಧಿತ ಹೊಸ ವಿಷಯಗಳನ್ನು ಕಲಿತು (ಆಟಿಸಂ ಇರುವ ಮಕ್ಕಳನ್ನು ಬೆಳೆಸುವ ಮತ್ತು ಅವರನ್ನು ತರಬೇತಿ ನೀಡುವ ವಿಧಾನಗಳಿಂದ ) ಆ ಮಗುವನ್ನು ಬೆಳೆಸುವ ಅಗತ್ಯ ವಿರುತ್ತದೆ. ಮಗುವಿನ ಭವಿಷ್ಯಕ್ಕಾಗಿ ಪೋಷಕರ ಮತ್ತು ಕುಟುಂಬದವರು ತುಂಬಾ ಸಹಕರಿಸಬೇಕಾಗುತ್ತದೆ. ಆದರೆ ಹೆಚ್ಚಿನ ಪೋಷಕರು  ತನ್ನ ಮಗು […]

ಉಡುಪಿ ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆ ಪ್ರಕರಣ: ಎರಡು ಆಡಿಯೋ ಕ್ಲಿಪ್ ಬಹಿರಂಗ

ಉಡುಪಿ: ಎಸ್.ಎಸ್.ಎಲ್.ಸಿ ಪ್ರಶ್ನೆ ಪತ್ರಿಕೆ ಕೋಣೆಯ ಭದ್ರತಾ ಕರ್ತವ್ಯದಲ್ಲಿ ನಿರತರಾಗಿದ್ದಾಗಲೇ ತನ್ನ ಸೇವಾ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್ ಅವರ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರಾಜೇಶ್ ಕುಂದರ್ ತಮ್ಮ ಸಹೋದ್ಯೋಗಿಗಳ ಕಿರುಕುಳದ ವಿರುದ್ದ ದೂರು ನೀಡಿದ್ದಾರೆನ್ನಲಾಗುವ ಆಡಿಯೋ ಕ್ಲಿಪ್ ಗಳು ಪೋಲೀಸರ ವಶವಾಗಿದೆ. ಮೊದಲನೆ ಆಡಿಯೋದಲ್ಲಿ ಹಿಜಾಬ್ ಗಲಾಟೆ ಸಂದರ್ಭ ಗಂಗೊಳ್ಳಿ ಠಾಣೆಗೆ ಕ್ಷಿಪ್ರ ದಾಳಿ ಪಡೆ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ರಾಜೇಶ್ ಕೈಕೆಳಗೆ ಇಬ್ಬರು ಸಿಬ್ಬಂದಿ […]

ಉಡುಪಿ ಜಲಸಾರಿಗೆ ಇಲಾಖೆಯ ಟಿ ಟಿ ಎಸ್ ಫಾಯದೆರವರ ಬೀಳ್ಕೊಡುಗೆ ಸಮಾರಂಭ

ಉಡುಪಿ: ಜಲಸಾರಿಗೆ ಇಲಾಖೆ ಉಡುಪಿ ವಿಭಾಗ ವತಿಯಿಂದ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿಯಾದ ಟಿ ಟಿ ಎಸ್ ಫಾಯದೆರವರ ಬೀಳ್ಕೊಡುಗೆ ಸಮಾರಂಭ ಮಣಿಪಾಲದ ಕಂಟ್ರಿ ಇನ್ನ್ ಹೋಟೆಲ್ ಸಭಾಂಗಣದಲ್ಲಿ ಇತ್ತೀಚಿಗೆ ನೆಡೆಯಿತು. ಉಡುಪಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಲ್ಲಿ ಸುಮಾರು 35 ವರ್ಷ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಕಾರ್ಯ ನಿರ್ವಾಹಕ ಇಂಜಿನಿಯರ್ ಟಿ ಟಿ ಎಸ್ ಫಾಯದೆರವರನ್ನು ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಲಸಾರಿಗೆ ಮಂಡಳಿ ಕಾರವಾರದ ಮುಖ್ಯ […]

ದಟ್ಟ ಕಾಡಿನಲ್ಲಿ “ಗೊರಂಕ್’ ಎಂಬ ಶಬ್ಧ ಕೇಳಿದಾಗ: ಸಂದೇಶ್ ಸಾಲ್ಯಾನ್ ಬರೆದ ಹಂಟಿಂಗ್ ಪ್ರಸಂಗ

ಶಿಕಾರಿಗೆ ಹೊರಟವರನ್ನು ನೋಡುವಾಗ ನನಗೆ ಅದೆಂಥದೋ ಖುಷಿ-ಕುತೂಹಲ. ಕೇಪಿನ ಕೋವಿಯ ನಳಿಕೆಗೆ ತೆಂಗಿನ ಒಣಸಿಪ್ಪೆಯ ನಾರಿನ ಜತೆಗೆ ಗುಂಡುಗಳನ್ನು ತುಂಬಿ ಕಬ್ಬಿಣದ ಸರಳಿನಿಂದ ಒಳಗೆ ತಳ್ಳುವ ಪ್ರಕ್ರಿಯೆಯಲ್ಲಿ ಬೇಟೆಗಾರನಲ್ಲಿ ಕಂಡುಬರುವ ತನ್ಮಯತೆ ಬಹಳ ಸುಂದರವಾಗಿರುತ್ತದೆ. ಭರ್ಜರಿ ಊಟದ ಬಳಿಕ ತಾಂಬೂಲ ಹಾಕಿಕೊಳ್ಳುವವರ ಹಾಗೆ. ಸಾಮಾನ್ಯವಾಗಿ ಬೇಟೆಗಾರರು ಬೇರೆಯವರ ಕೈಗೆ ತಮ್ಮ ಕೋವಿಯನ್ನು ಕೊಡುವುದಿಲ್ಲ. ಆದರೂ ನನ್ನ ಕುತೂಹಲ ನೋಡಿ ನನ್ನ ಪರಿಚಯಸ್ಥರೊಬ್ಬರು ನನ್ನ ಕೈಗೆ ಖಾಲಿ ಕೋವಿ ಕೊಟ್ಟಿದ್ದರು. ಬಹಳ ಖುಷಿಯಿಂದ ಎತ್ತಿಕೊಂಡು, ಸುಮ್ಮನೆ ಒಂದೆಡೆ ಗುರಿ […]