ಭಾರತದಲ್ಲಿ ಮೊದಲ ‘ಮಂಕಿಪಾಕ್ಸ್’ ಪ್ರಕರಣ ಪತ್ತೆ: ಭಯ ಪಡುವ ಅಗತ್ಯವಿಲ್ಲ; ಕೇಂದ್ರ ಆರೋಗ್ಯ ಸಚಿವಾಲಯ.

ನವದೆಹಲಿ: ಇತ್ತೀಚಿಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಯೋರ್ವನಿಗೆ ‘ಮಂಕಿಪಾಕ್ಸ್ ‘ ತಗುಲಿರುವುದಾಗಿ ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ರೋಗಿಯನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಆತನ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಮಂಕಿಪಾಕ್ಸ್ ಇದೆಯೇ ಎಂಬುದನ್ನು ತಿಳಿಯಲು ರೋಗಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಪ್ರಕರಣವನ್ನು ನಿರ್ವಹಿಸಲಾಗುತ್ತಿದೆ ಮತ್ತು ಮಂಕಿಪಾಕ್ಸ್ ಮೂಲ ತಿಳಿಯಲು ಹಾಗೂ ದೇಶದೊಳಗೆ ಅದರ ಪರಿಣಾಮವನ್ನು ನಿರ್ಣಯಿಸಲು ಸಂಪರ್ಕ ಪತ್ತೆ […]

IC 814 ವೆಬ್ ಸೀರೀಸ್ ವಿವಾದ: ತಪ್ಪನ್ನು ಸರಿಪಡಿಸುವುದಾಗಿ ಭಾರತ ಸರ್ಕಾರಕ್ಕೆ Netflix India ಭರವಸೆ.

ನವದೆಹಲಿ: ಒಟಿಟಿ Netflix India “IC 814 ವೆಬ್ ಸೀರೀಸ್” ನ ಕಂಟೆಂಟ್ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ತಪ್ಪನ್ನು ಸರಿಪಡಿಸುವುದಾಗಿ ಭಾರತ ಸರ್ಕಾರಕ್ಕೆ ಭರವಸೆ ನೀಡಿದೆ. IC-814- ದಿ ಕಂದಹಾರ್ ಹೈಜಾಕ್ ಕುರಿತ ವೆಬ್ ಸೀರೀಸ್ ನಲ್ಲಿ ಹೈಜಾಕ್ ಮಾಡಿದವರನ್ನು ಚಿತ್ರಿಸಿದ ರೀತಿ ವಿವಾದಕ್ಕೀಡಾಗಿರುವ ಹಿನ್ನೆಲೆಯಲ್ಲಿ Netflix India ಮುಖ್ಯಸ್ಥರಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ್ದ Netflix India ಮುಖ್ಯಸ್ಥರು ಕಂಟೆಂಟ್ ನ್ನು ಪರಿಷ್ಕರಿಸುವುದಾಗಿ […]

ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನಲ್ಲಿ ಭಾರತಕ್ಕೆ ಐದನೇ ಪದಕ: ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್.

ಪ್ಯಾರಿಸ್: ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಶೂಟರ್‌ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದು, ರುಬಿನಾ ಫ್ರಾನ್ಸಿಸ್ ಅವರು ಮಹಿಳೆಯರ ಏರ್ ಪಿಸ್ತೂಲ್ SH1 ಸ್ಪರ್ಧೆಯ ಫೈನಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಶೂಟಿಂಗ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಹಾಗೂ ಒಟ್ಟಾರೆ ಪದಕಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಆ.31 ರಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. […]

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ.

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 27) ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 […]

ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: 15 ಮಂದಿ ಪ್ರಯಾಣಿಕರು ಸಾವು, 60 ಮಂದಿಗೆ ಗಾಯ

ಪಶ್ಚಿಮ ಬಂಗಾಳ: ಸೋಮವಾರ ಬೆಳಗ್ಗೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಅಸ್ಸಾಂನ ಸಿಲ್ಚಾರ್‌ನಿಂದ ಪಶ್ಚಿಮ ಬಂಗಾಳದ ಸೀಲ್ದಾಹ್‌ಗೆ ಪ್ರಯಾಣಿಸುತ್ತಿದ್ದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಬಂದು ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 60 ಮಂದಿ ಗಾಯಗೊಂಡಿದ್ದಾರೆ. ಅಪಘಾತವು ಬೆಳಿಗ್ಗೆ 8:30 ರ ಸುಮಾರಿಗೆ ಸಂಭವಿಸಿದೆ ಮತ್ತು ಉತ್ತರ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಸುಮಾರು 11 ಕಿಮೀ ದೂರದಲ್ಲಿ ಸಂಭವಿಸಿದೆ, ಇದು ಪೂರ್ವ ಮತ್ತು ಈಶಾನ್ಯ ಭಾರತದ ಈಶಾನ್ಯ ಫ್ರಾಂಟಿಯರ್ ರೈಲ್ವೇ ವಲಯದಲ್ಲಿನ […]