ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಬುಧವಾರದಿಂದ ಕಾರ್ಯಾರಂಭ

ಬೆಂಗಳೂರು : ಶಿವಮೊಗ್ಗದಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಬುಧವಾರದಿಂದ ಆರಂಭವಾಗಲಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರವನ್ನು ತಲುಪಲಿದೆ. ಮೊದಲ ಯಾನದಲ್ಲಿ ತಾವೂ ಪ್ರಯಾಣಿಸಲಿದ್ದು, ಜೊತೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ […]
ಆದಿತ್ಯ ಎಲ್-1 ಭರದಿಂದ ಸಾಗಿದ ರಾಕೆಟ್ ಜೋಡಣೆ ಕಾರ್ಯ : ಸಿದ್ಧತೆ ಪೂರ್ಣ

ಬೆಂಗಳೂರು: ಸೂರ್ಯನ ಅಧ್ಯಯನ ತುಂಬಾ ಕ್ಲಿಷ್ಟಕರ, ಈ ಹಿನ್ನಲೆ ನಿರ್ದಿಷ್ಟ ಸ್ಥಳದಲ್ಲಿ ಅಂದರೆ, ಭೂಮಿಯಿಂದ 15 ಲಕ್ಷ ದೂರುದಲ್ಲಿ ಈ ಉಪಗ್ರಹ ನಿಂತು ಸೂರ್ಯನ ಅಧ್ಯಯನ ನಡೆಸಲಿದೆ. ಇದೇ ಶನಿವಾರ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆಗೆ ಸಜ್ಜಾಗಿದ್ದು, ಇದರ ಯಶಸ್ವಿ ಉಡ್ಡಯನಕ್ಕೆ ಸಿದ್ಧತೆ ಸರಾಗವಾಗಿ ನಡೆಸಲಾಗಿದೆ. ಇದಕ್ಕಾಗಿ ಪಿಎಸ್ಎಲ್ವಿ ರಾಕೆಟ್ ಜೋಡಣೆಯ ಕಡೆಯ ಹಂತದ ಪರಿಶೀಲನೆಯನ್ನು ತಂಡ ನಡೆಸಿದೆ ಎಂದು ರಕ್ಷಣಾ ಮತ್ತು ಬಾಹ್ಯಕಾಶ ತಜ್ಞ ಗಿರೀಶ್ ಲಿಂಗಣ್ಣ ತಿಳಿಸಿದ್ದಾರೆ.ಈ ಬಗ್ಗೆ ರಕ್ಷಣಾ ಮತ್ತು ಬಾಹ್ಯಕಾಶ […]
ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಲ್ಕು ದಿನಗಳ ಭಾರತ ಪ್ರವಾಸ: ನವದೆಹಲಿಯಲ್ಲಿ ಜಿ20 ಶೃಂಗ

ವಾಷಿಂಗ್ಟನ್: ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿರುವ G20 ಶೃಂಗಸಭೆ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಸ್ತಾಪಿಸುವ ವಿಷಯಗಳ ಬಗ್ಗೆ ಶ್ವೇತಭವನದ ವಕ್ತಾರರು ಮಾಹಿತಿ ನೀಡಿದ್ದಾರೆ. ಈ ಬಾರಿಯ ಜಿ-20 ಶೃಂಗಸಭೆಯಲ್ಲಿ ಉಕ್ರೇನ್ – ರಷ್ಯಾ ಯುದ್ಧದ ಸಾಮಾಜಿಕ ಪರಿಣಾಮಗಳು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಅಮೆರಿಕ ಅಧ್ಯಕ್ಷರು ಮಾತನಾಡಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಮಂಗಳವಾರ ಈ ಬಗ್ಗೆ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. […]
ಜಮ್ಮು ಕಾಶ್ಮೀರದ 35A ವಿಧಿಯು ಇತರ ನಾಗರಿಕರನ್ನು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿದೆ: ಜ. ಚಂದ್ರಚೂಡ್

ಹೊಸದಿಲ್ಲಿ: ಸಂವಿಧಾನದ 35A ವಿಧಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸದ ಜನರನ್ನು ಕೆಲವು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. “ಸಮಾನತೆಯ ಅವಕಾಶ, ರಾಜ್ಯ ಸರ್ಕಾರದಲ್ಲಿ ಉದ್ಯೋಗ ಮತ್ತು ಭೂಮಿ ಖರೀದಿಸುವ ಹಕ್ಕು -ಈ ವಿಧಿಯು ನಾಗರಿಕರಿಂದ ಇವೆಲ್ಲವನ್ನೂ ಕಸಿದುಕೊಳ್ಳುತ್ತದೆ. ಏಕೆಂದರೆ ನಿವಾಸಿಗಳು (ಜಮ್ಮು ಮತ್ತು ಕಾಶ್ಮೀರದ) ವಿಶೇಷ ಹಕ್ಕುಗಳನ್ನು ಹೊಂದಿದ್ದರಿಂದ, ಅನಿವಾಸಿಗಳನ್ನು ಹೊರಗಿಡಲಾಗಿತ್ತು” ಎಂದು ಅವರು ಹೇಳಿದ್ದಾರೆ. ಭಾರತೀಯ ಸಂವಿಧಾನವು “ಜಮ್ಮು ಮತ್ತು ಕಾಶ್ಮೀರದ ಸಂವಿಧಾನಕ್ಕಿಂತ ಉನ್ನತ […]
ಜನಧನ ಖಾತೆ : ‘ದೇಶದಲ್ಲೀಗ 50 ಕೋಟಿ ಗಳನ್ನು ಖಾತೆ ತೆರೆಯಲಾಗಿದೆ”: ನಿರ್ಮಲಾ ಸೀತಾರಾಮನ್ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಜನ್ ಧನ್” ದೇಶದಲ್ಲಿ ಡಿಜಿಟಲ್ ಕ್ರಾಂತಿಯನ್ನುಂಟು ಮಾಡಿದೆ ಎಂದು ಹಣಹಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. 50 ಕೋಟಿಗೂ ಹೆಚ್ಚು ಜನರನ್ನು ಔಪಚಾರಿಕವಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಕರೆ ತರಲಾಗಿದೆ.ಶೇ. 55.5 ರಷ್ಟು ಮಹಿಳೆಯರು ಬ್ಯಾಂಕ್ ಖಾತೆಗಳನ್ನು ತೆರೆದಿದ್ದಾರೆ. ಶೇ. 67 ರಷ್ಟು ಗ್ರಾಮೀಣ, ಅರೆ ನಗರ ಪ್ರದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.2 ಲಕ್ಷ ಕೋಟಿಗೂ ಅಧಿಕ ಸಂಚಿತ ಠೇವಣಿಯೊಂದಿಗೆ 50 ಕೋಟಿಗೂ ಹೆಚ್ಚು […]