2024 – ಲೋಕಸಭಾ ಚುನಾವಣೆಗೆ ದಿನ ನಿಗದಿ: ಏ.19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ ಚುನಾವಣೆ; ಜೂನ್ 4 ರಂದು ಮತಎಣಿಕೆ
ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ದಿನಾಂಕಗಳನ್ನು ಘೋಷಿಸಿದರು. ಲೋಕಸಭೆ ಚುನಾವಣೆಯು ಏಳು ಹಂತಗಳಲ್ಲಿ ನಡೆಯಲಿದೆ. 1 ಹಂತ ಏ.19 ರಂದು, 2 ನೇ ಹಂತ ಏ.26 ರಂದು, 3ನೇ ಹಂತ ಮೇ 7 ರಂದು (ಕರ್ನಾಟಕ), 4ನೇ ಹಂತ ಮೇ 13ರಂದು, 5 ನೇ ಹಂತವು ಮೇ 20 ರಂದು, 6ನೇ ಹಂತ ಮೇ 25ರಂದು, 7ನೇ ಹಂತ ಜೂನ್ 1 ರಂದು ನಡೆಯಲಿದೆ. ಆಂಧ್ರ ಪ್ರದೇಶ […]
ಅಡುಗೆ ಅನಿಲ ಬಳಿಕ ಪೆಟ್ರೋಲ್-ಡೀಸೆಲ್ ಬೆಲೆ 2 ರೂ ಇಳಿಕೆ: ಗ್ರಾಹಕರು ಕೊಂಚ ನಿರಾಳ
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡಿದ್ದು, ಸುಮಾರು ಎರಡು ವರ್ಷಗಳ ಸುದೀರ್ಘ ಅವಧಿಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ 2 ರೂ. ಇಳಿಕೆ ಮಾಡಿದೆ. ಪರಿಷ್ಕೃತ ಬೆಲೆಯು ಮಾರ್ಚ್ 15ರ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಅನ್ವಯವಾಗಲಿದೆ ಎಂದು ತೈಲ ಸಚಿವಾಲಯ ಗುರುವಾರ ಸಂಜೆ ತಿಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಹೋಲಿಸಿದರೆ ಈಗ 94.72 ರೂ. ಆಗಲಿದೆ. ಹಾಗೆಯೇ ಡೀಸೆಲ್ ಬೆಲೆ ಪ್ರಸ್ತುತ […]
ಪಿಟ್ ಬುಲ್ , ಬುಲ್ ಡಾಗ್, ರಾಟ್ ವೀಲರ್ ಸೇರಿದಂತೆ 23 ತಳಿಯ ನಾಯಿಗಳ ಮಾರಾಟ ಹಾಗೂ ಸಾಕಾಣೆಗೆ ನಿಷೇಧ
ಹೊಸದಿಲ್ಲಿ: ಪಿಟ್ ಬುಲ್ ಟೆರಿಯರ್, ಅಮೆರಿಕನ್ ಬುಲ್ ಡಾಗ್, ರಾಟ್‌ವೀಲರ್ ಮತ್ತು ಮ್ಯಾಸ್ಟಿಫ್ಸ್ ಸೇರಿದಂತೆ 23 ತಳಿಯ ನಾಯಿಗಳ ಮಾರಾಟ ಮತ್ತು ಸಾಕಣೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾದ ನಿರ್ದೇಶನದಲ್ಲಿ ಜನರು 23 ತಳಿಗಳ ನಾಯಿಗಳನ್ನು ಸಾಕುಪ್ರಾಣಿಗಳಾಗಿ ಸಾಕುವುದನ್ನು ನಿರ್ಬಂಧಿಸುತ್ತದೆ. ಈಗಾಗಲೇ ಸಾಕು ಪ್ರಾಣಿಗಳಾಗಿ ಸಾಕಿರುವ ಈ ತಳಿಯ ನಾಯಿಗಳನ್ನು ಸಂತಾನಹರಣ ಚಿಕಿತ್ಸೆಗೆ ಒಳಪಡಿಸಿ ಮುಂದೆ ಸಂತಾನಾಭಿವೃದ್ಧಿ ಆಗದಂತೆ ನೋಡಿಕೊಳ್ಳಬೇಕು ಎಂದೂ ಕೇಂದ್ರ ಹೇಳಿದೆ. ಕೆಲವು ತಳಿಯ ನಾಯಿಗಳನ್ನು […]
ಒಂದು ರಾಷ್ಟ್ರ, ಒಂದು ಚುನಾವಣೆ: ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಿದ ಉನ್ನತ ಮಟ್ಟದ ಸಮಿತಿ
ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು 18,626 ಪುಟಗಳನ್ನು ಒಳಗೊಂಡ ವರದಿಯನ್ನು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಗುರುವಾರ ದೇಶಾದ್ಯಂತ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ತನ್ನ ವರದಿಯನ್ನು ಸಲ್ಲಿಸಿದೆ. ವರದಿಯು ಸೆಪ್ಟೆಂಬರ್ 2, 2023 ರಂದು ಸಮಿತಿ ರಚನೆಯಾದಾಗಿನಿಂದ 191 ದಿನಗಳವರೆಗೆ ಮಧ್ಯಸ್ಥಗಾರರು, ತಜ್ಞರು ಮತ್ತು […]
ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನಕ್ಕೆ ಹೋಗುವವರಿಗೆ ಸಲಹೆ ಸೂಚನೆ ಬಿಡುಗಡೆಗೊಳಿಸಿದ ಟ್ರಸ್ಟ್: ಹೋಗುವ ಮುನ್ನ ಇವುಗಳನ್ನು ಗಮನದಲ್ಲಿಡಿ
ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಭೇಟಿ ನೀಡುವ ಎಲ್ಲಾ ಭಕ್ತರ ಗಮನಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಲಹೆ ಸೂಚನೆಗಳನ್ನು ಹೊರಡಿಸಿದೆ. ಅವು ಇಂತಿವೆ