ಚಂದ್ರ ಇನ್ನು ನಮಗೆ ಹತ್ತಿರ!! ವಿಕ್ರಂ ಲ್ಯಾಂಡರ್ ಬೇರ್ಪಡಿಸುವಿಕೆ ಯಶಸ್ವಿ

ಭಾರತದ ಬಹುನಿರೀಕ್ಷಿತ ಚಂದ್ರಯಾನ – 3 ಮಿಷನ್‌ಗೆ ದೊಡ್ಡ ಯಶಸ್ಸು ಸಿಕ್ಕಿದ್ದು, ವಿಕ್ರಂ ಲ್ಯಾಂಡರ್ ನೌಕೆಯಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ. ಈ ಮೂಲಕ ವಿಕ್ರಂ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಇಳಿಯಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಮುಂದಿನ ಬುಧವಾರ ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕಾಲಿಡುವ ನಿರೀಕ್ಷೆ ಇದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಇಸ್ರೋ “LM ಅನ್ನು ಪ್ರೊಪಲ್ಷನ್ ಮಾಡ್ಯೂಲ್ (PM) ನಿಂದ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ನಾಳೆಗೆ ಯೋಜಿಸಲಾದ ಡೀಬೂಸ್ಟಿಂಗ್ ಮೇಲೆ […]
ಗುಜರಾತ್ TO ಮೇಘಾಲಯ ಪಾದಯಾತ್ರೆ: ಅಕ್ಟೋಬರ್ನಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ 2.0

ಲಖನೌ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು 2ನೇ ಹಂತದ ಭಾರತ್ ಜೋಡೋ ಯಾತ್ರೆಯನ್ನು ಅಕ್ಟೋಬರ್ನಲ್ಲಿ ಆರಂಭಿಸುವ ಸಾಧ್ಯತೆ ಇದೆ. ಉತ್ತರಪ್ರದೇಶದಲ್ಲಿ 2 ವಾರ ಯಾತ್ರೆ: ಉತ್ತರ ಪ್ರದೇಶದಲ್ಲಿ ಕನಿಷ್ಠ 15 ರಿಂದ 20 ದಿನಗಳ ಕಾಲ ರಾಹುಲ್ ಗಾಂಧಿ ಅವರ 2ನೇ ಹಂತದ ಭಾರತ್ ಜೋಡೋ ಯಾತ್ರೆಯು ಸಾಗಲಿದ್ದು, ರಾಜ್ಯ ಕಾಂಗ್ರೆಸ್ ಸಮಿತಿ ಸದಸ್ಯರು ಇದರ ಸಿದ್ಧತೆ ನಡೆಸಿದ್ದಾರೆ. ರಾಜ್ಯದ 30 ರಿಂದ 35 ಲೋಕಸಭಾ ಕ್ಷೇತ್ರಗಳಲ್ಲಿ ಯಾತ್ರೆಯು ಹಾದುಹೋಗಲಿದೆ. ಇದರ ಬಳಿಕ ಈ ಎಲ್ಲ […]
ಕೇಂದ್ರ ಸಚಿವ ಸಂಪುಟ ಒಪ್ಪಿಗೆ : ₹13 ಸಾವಿರ ಕೋಟಿ ವೆಚ್ಚದ ‘ಪಿಎಂ ವಿಶ್ವಕರ್ಮ ಯೋಜನೆ’ಗೆ

ನವದೆಹಲಿ :13 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಜಾರಿಯಾಗಲಿದ್ದು, ಕೌಶಲ್ಯಾಧರಿತ ಕುಶಲಕರ್ಮಿಗಳಿಗೆ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ 77ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ‘ಪಿಎಂ ವಿಶ್ವಕರ್ಮ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಇಂದು (ಬುಧವಾರ) ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ. ಇದು ವಿವಿಧ ವೃತ್ತಿಗಳ ಕೌಶಲ್ಯಾಧರಿತ […]
ಸಮುದ್ರದಾಳದಲ್ಲಿ ಹಾರಾಡಿತು ತ್ರಿವರ್ಣ ಧ್ವಜ: ಕೆಚ್ಚೆದೆಯ ಭಾರತೀಯ ಕೋಸ್ಟ್ ಗಾರ್ಡ್ ಗಳಿಂದ ಧ್ವಜವಂದನೆ

ಚೆನ್ನೈ: ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಭಾರತೀಯ ಕೋಸ್ಟ್ ಗಾರ್ಡ್ ಸದಸ್ಯರು ನೀರಿನ ಅಡಿಯಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ವಂದಿಸುವ ಮೂಲಕ ತಮ್ಮ ದೇಶಭಕ್ತಿಯ ಉತ್ಸಾಹವನ್ನು ಪ್ರದರ್ಶಿಸಿದರು. ತಮಿಳುನಾಡಿನ ರಾಮೇಶ್ವರಂ ಬಳಿ ಈ ಘಟನೆ ನಡೆದಿದ್ದು, ಈ ಮಹತ್ವದ ಕೃತ್ಯವನ್ನು ಸೆರೆಹಿಡಿಯುವ ವಿಡಿಯೋ ಆನ್‌ಲೈನ್‌ನಲ್ಲಿ ಜನಪ್ರಿಯತೆಯನ್ನು ಗಳಿಸಿದೆ. #WATCH | Underwater hoisting of national flag by Indian Coast Guard personnel near Rameshwaram, Tamil Nadu on Independence Day (Video […]
ಹಿಮಾಚಲ ಪ್ರದೇಶ: ವರುಣ ಪ್ರಕೋಪಕ್ಕೆ ದೇವಭೂಮಿ ತತ್ತರ; ಕನಿಷ್ಠ 66 ಜನ ಬಲಿ

ಶಿಮ್ಲಾ: ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಿರಂತರ ಮಳೆ ಮತ್ತು ಭೂಕುಸಿತದಿಂದ 66 ಜನರು ಸಾವನ್ನಪ್ಪಿದ್ದಾರೆ, ಗಾಯಾಳುಗಳನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆ ಕುಸಿತದಿಂದಾಗಿ ದೇಹಗಳನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರೆದಿದೆ. ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ, ಆಗಸ್ಟ್ 13 ರಂದು ಭಾರೀ ಮಳೆ ಪ್ರಾರಂಭವಾದಾಗಿನಿಂದ 60 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಮತ್ತು ಮುಂದಿನ ನಾಲ್ಕು ದಿನಗಳಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ […]