ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆ :ಕೇಂದ್ರದಿಂದ ಬಫರ್ ಸ್ಟಾಕ್ ಬಿಡುಗಡೆ ಆರಂಭ 

ನವದೆಹಲಿ: ದೇಶದ ಕೆಲ ಭಾಗಗಳಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿರುವ ವರದಿಗಳಿಂದ ಅಲರ್ಟ್​ ಆಗಿರುವ ಕೇಂದ್ರ ಸರ್ಕಾರ ತನ್ನ ಬಫರ್ ಸ್ಟಾಕ್​ನಿಂದ ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಪ್ರಾರಂಭಿಸಿದೆ. ಈ ಮೂಲಕ ಈರುಳ್ಳಿಯ ಬೆಲೆ ಏರಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ತ್ವರಿತವಾಗಿ ಮಧ್ಯ ಪ್ರವೇಶಿಸಿದೆ. ಈರುಳ್ಳಿ ಬೆಲೆಗಳು ಹೆಚ್ಚಾಗಬಹುದು ಎಂಬ ಅಂದಾಜಿನ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತವಾಗಿರುವ ಕೇಂದ್ರ ಸರ್ಕಾರ, ಈರುಳ್ಳಿ ಬಫರ್ ಸ್ಟಾಕ್​ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾರಂಭಿಸಿದೆ. ಸರ್ಕಾರದ ಕೃಷಿ ಮಾರುಕಟ್ಟೆ ಏಜೆನ್ಸಿಗಳಾದ ರಾಷ್ಟ್ರೀಯ ಕೃಷಿ ಸಹಕಾರ […]

BSE 366 & Nifty 115 ಅಂಕ ಇಳಿಕೆ

ಮುಂಬೈ : ಭಾರತೀಯ ಶೇರು ಸೂಚ್ಯಂಕಗಳು ಶುಕ್ರವಾರ ಸತತ ಎರಡನೇ ದಿನಕ್ಕೆ ಕುಸಿತವನ್ನು ಮುಂದುವರಿಸಿವೆ. 30 ಶೇರುಗಳ ಬಿಎಸ್‌ಇ ಸೆನ್ಸೆಕ್ಸ್ 366 ಪಾಯಿಂಟ್ಸ್ ಅಥವಾ ಶೇಕಡಾ 0.56 ರಷ್ಟು ಕುಸಿದು 65,323 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ ಸೂಚ್ಯಂಕ 115 ಪಾಯಿಂಟ್ಸ್ ಅಥವಾ ಶೇಕಡಾ 0.59 ರಷ್ಟು ಕುಸಿದು 19,428 ಕ್ಕೆ ತಲುಪಿದೆ. ಫಾರ್ಮಾ, ಹೆಲ್ತ್ ಕೇರ್, ಬ್ಯಾಂಕ್, ಹಣಕಾಸು, ಗ್ರಾಹಕ ಸರಕುಗಳು, ಲೋಹ ಮತ್ತು ಆಟೋಮೊಬೈಲ್ ಶೇರುಗಳು ದೇಶೀಯ ಸೂಚ್ಯಂಕಗಳನ್ನು ಕೆಳಮಟ್ಟಕ್ಕೆ ಇಳಿಸಿದವು. ಚಿಲ್ಲರೆ ಹಣದುಬ್ಬರ […]

ಲೋಕಸಭೆಯಲ್ಲಿ 22, ರಾಜ್ಯಸಭೆಯಲ್ಲಿ 25 ಮಸೂದೆ ಅಂಗೀಕಾರ : ಮುಂಗಾರು ಅಧಿವೇಶನ ಅಂತ್ಯ

ನವದೆಹಲಿ : ಸಂಸತ್ತಿನ ಉಭಯ ಸದನಗಳನ್ನು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಕೆಳಮನೆಯಲ್ಲಿ ಶೇ 45 ಮತ್ತು ಮೇಲ್ಮನೆಯಲ್ಲಿ ಶೇ 63ರಷ್ಟು ಉತ್ಪಾದಕತೆಯನ್ನು ದಾಖಲಿಸಿದ್ದ ಮುಂಗಾರು ಅಧಿವೇಶನಕ್ಕೆ ಅಂತ್ಯ ಹಾಡಲಾಗಿದೆ.ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, 23 ದಿನಗಳ ಸುದೀರ್ಘ ಅಧಿವೇಶನದಲ್ಲಿ ಒಟ್ಟು 17 ಅಧಿವೇಶನಗಳು (sittings) ನಡೆದಿವೆ ಎಂದು ಹೇಳಿದರು. ಸಂಸತ್​ ಕಲಾಪ ಇಂದು ಅಂತ್ಯಗೊಂಡಿದ್ದು, ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಲೋಕಸಭೆಯ ಉತ್ಪಾದಕತೆಯು ಶೇಕಡಾ 45 ಮತ್ತು ರಾಜ್ಯಸಭೆಯ ಉತ್ಪಾದಕತೆ […]

ಇಡೀ ದೇಶವೇ ಮಣಿಪುರದ ಮಹಿಳೆಯರ ಜೊತೆ ನಿಂತಿದೆ; ಶಾಂತಿ ಪುನಸ್ಥಾಪನೆ ಶತಸಿದ್ದ: ಮೋದಿ ಸರ್ಕಾರದ ಮೇಲೆ ಪುನಃಸ್ಥಾಪಿಸಿತು ವಿಶ್ವಾಸ

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಅವರು ತಮ್ಮ ಸರ್ಕಾರದ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರದಂದು ಉತ್ತರಿಸಿದರು. ಕಳೆದ ಎರಡು ದಿನಗಳಿಂದ, ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಾಯಕರು ಭಾರೀ ಚರ್ಚೆಗಳನ್ನು ಮಾಡುತ್ತಿದ್ದು, ಅವಿಶ್ವಾಸ ಮಂಡನೆಯ ಧ್ವನಿ ಮತದ ದಿನವಾದ ಗುರುವಾರದಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದ ಕಾಂಗ್ರೆಸ್ ಹಾಗೂ ಅದರ […]

ಇಂದು ವಿಶ್ವ ಸಿಂಹ ದಿನದ ಹಿನ್ನೆಲೆ : ಸಿಂಹಗಳ ಆವಾಸಸ್ಥಾನ ಸುರಕ್ಷತೆಗೆ ಶ್ರಮಿಸುತ್ತಿರುವವರ ಕಾರ್ಯಕ್ಕೆ ಪ್ರಧಾನಿ ಶ್ಲಾಘನೆ

ಭಾರತದಲ್ಲಿ ಕಳೆದ ಕೆಲವು ವರ್ಷಗಳಿಂದೀಚೆಗೆ ಸಿಂಹಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಟ್ವೀಟ್ ಮಾಡುವ​ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸಿಂಹಗಳ ಆವಾಸಸ್ಥಾನದ ಸುರಕ್ಷತೆಗೆ ಕೆಲಸ ಮಾಡುತ್ತಿರುವವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮುಂದಿನ ಪೀಳಿಗೆಗೆ ಸಿಂಹಗಳ ಸಂಖ್ಯೆ ಅಭಿವೃದ್ಧಿ ಆಗುತ್ತಿರುವುದ್ನು ಖಾತ್ರಿಪಡಿಸಿಕೊಳ್ಳುವುದರ ಮೂಲಕ ಸಿಂಹವನ್ನು ಗೌರವಿಸಿ, ರಕ್ಷಿಸುವುದನ್ನು ಮುಂದುವರಿಸೋಣ ಎಂದು ಪ್ರಧಾನಿ ಕರೆ ನೀಡಿದ್ದಾರೆ. ಇಂದು ವಿಶ್ವ ಸಿಂಹ ದಿನ. ಪರಿಸರದ ಸಮತೋಲನ ಕಾಪಾಡುವಲ್ಲಿ ಪ್ರಮುಖವಾಗಿರುವ ಸಿಂಹಗಳ ಸಂಖ್ಯೆ ಇಳಿಕೆಯಾಗಿದ್ದು, ಈ […]