ಬೆಂಗೇರಿಯಲ್ಲಿ ಸಿದ್ಧವಾಗುತ್ತಿವೆ ಸಾವಿರಾರು ತ್ರಿವರ್ಣ ಧ್ವಜಗಳು : ರಾಷ್ಟ್ರ ಧ್ವಜಗಳಿಗೆ ಭಾರೀ ಬೇಡಿಕೆ

ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆ ಎಂದರೆ ಅದು ಹುಬ್ಬಳ್ಳಿಯ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ. ಕೋವಿಡ್ ನಂತರ ಮತ್ತೆ ಇಲ್ಲಿನ ರಾಷ್ಟ್ರಧ್ವಜಗಳಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸ್ಥೆಯು ಈ ವರ್ಷ ಮೂರು ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯನ್ನು ಹೊಂದಿದೆ. ಈ ಹಿಂದಿನ ದಿನಗಳಿಗೆ ಹೋಲಿಕೆ ಮಾಡಿದರೆ ರಾಷ್ಟ್ರಧ್ವಜಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಪ್ರತಿ ವರ್ಷದಿಂದ ವರ್ಷಕ್ಕೆ ಚೇತರಿಕೆಯನ್ನು ಕಂಡಿದೆ. ಕಳೆದ […]
ಚಂದ್ರಯಾನ-3 ಬಾಹ್ಯಾಕಾಶ ನೌಕೆಯಿಂದ ಚಂದ್ರನ ಚಿತ್ರವನ್ನು ಹಂಚಿಕೊಂಡ ಇಸ್ರೋ

ಆಗಸ್ಟ್ 5 ರಂದು ಚಂದ್ರನ ಆರ್ಬಿಟ್ ಅಳವಡಿಕೆಯ (LOI) ಸಮಯದಲ್ಲಿ ಚಂದ್ರಯಾನ-3 ಬಾಹ್ಯಾಕಾಶ ನೌಕೆಯಿಂದ ವೀಕ್ಷಿಸಿದ ಚಂದ್ರನ ಚಿತ್ರವನ್ನು ಇಸ್ರೋ ಹಂಚಿಕೊಂಡಿದೆ. ಶನಿವಾರದಂದು ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದೆ. https://twitter.com/i/status/1688215948531015681
ಪಾಕಿಸ್ತಾನದಲ್ಲಿ ‘ಹಜಾರಾ’ ರೈಲು ಹಳಿತಪ್ಪಿದ ಹಿನ್ನೆಲೆ : 30 ಸಾವು, 100 ಅಧಿಕ ಮಂದಿಗೆ ಗಾಯ

ಇಸ್ಲಾಮಾಬಾದ್: ಕರಾಚಿಯಿಂದ ರಾವಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ದುರಂತ ಜರುಗಿತು.ಪಾಕಿಸ್ತಾನದಲ್ಲಿ ಭಾನುವಾರ ಸಂಭವಿಸಿದ ಭೀಕರ ರೈಲು ಅವಘಡದಲ್ಲಿ 30 ಪ್ರಯಾಣಿಕರು ಅಸುನೀಗಿದ್ದಾರೆ. ಘಟನೆಯಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನದಲ್ಲಿ ಹಜಾರಾ ಎಂಬ ಹೆಸರಿನ ರೈಲು ಹಳಿ ತಪ್ಪಿದ್ದು, ಸಾವುನೋವು ಸಂಭವಿಸಿದೆ “ಶಹಜಾದ್‌ಪುರ ಮತ್ತು ನವಾಬ್‌ಶಾ ನಡುವಿನ ಸಹಾರಾ ರೈಲು ನಿಲ್ದಾಣದ ಬಳಿ ಹಜಾರಾ ರೈಲು ಹೊರಡುತ್ತಿದ್ದಾಗ ಅಚಾನಕ್ಕಾಗಿ ಹಳಿ ತಪ್ಪಿದೆ. 8 ರಿಂದ 10 ಬೋಗಿಗಳು ಅಪಘಾತಕ್ಕೀಡಾಗಿವೆ. ಕನಿಷ್ಠ 30 ಜನರು […]
ಪ್ರಧಾನಿ ಮೋದಿ ವಿದ್ಯುಕ್ತ ಚಾಲನೆ: ಕರ್ನಾಟಕದ 13 ಸೇರಿ 508 ರೈಲು ನಿಲ್ದಾಣಗಳ ನವೀಕರಣ

ನವದೆಹಲಿ: ಅಮೃತ್ ಯೋಜನೆಯಡಿ ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ ಆಧುನಿಕ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಒತ್ತು ನೀಡಲಾಯಿತು. ದೇಶದ ಜನರಿಗೆ ರೈಲ್ವೇ ಆದ್ಯತೆಯ ಸಾರಿಗೆಯಾಗಿದೆ ಎಂದು ಇದೇ ವೇಳೆ ಪ್ರಧಾನಿ ಮೋದಿ ಹೇಳಿದರು.ಅಮೃತ ಯೋಜನೆಯಡಿ ದೇಶಾದ್ಯಂತ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಇದೇ ವೇಳೆ ಅಭಿವೃದ್ಧಿ ಕಾರ್ಯಗಳನ್ನು ಟೀಕಿಸಿರುವ ವಿಪಕ್ಷಗಳ ಇಂಡಿಯಾ ಒಕ್ಕೂಟವನ್ನು ತರಾಟೆಗೆ […]
ಆಗಸ್ಟ್ 23 ರ ಲ್ಯಾಂಡಿಂಗ್ನದ್ದೇ ಕೌತುಕ: ಚಂದ್ರನ ಗುರುತ್ವದತ್ತ ಚಂದ್ರಯಾನ-3 ನೌಕೆ

ಕೋಲ್ಕತ್ತಾ (ಪಶ್ಚಿಮ ಬಂಗಾಳ) : ಚಂದ್ರನತ್ತ ಐತಿಹಾಸಿಕ ಪಯಣ ಆರಂಭಿಸಿರುವ ಇಸ್ರೋ ನಿನ್ನೆಯಷ್ಟೇ ಚಂದ್ರಯಾನ-3 ನೌಕೆಯನ್ನು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿ ವಿಕ್ರಮ ಮೆರೆದಿದೆ. ಚಂದ್ರನ ಕಕ್ಷೆ ಸೇರಿಸುವ ಕಾರ್ಯ ಮುಗಿದಿದ್ದು, ಆಗಸ್ಟ್ 6 (ಭಾನುವಾರ) ರಾತ್ರಿ 11 ಗಂಟೆಗೆ ಕಕ್ಷೆ ಇಳಿಸುವ ಯತ್ನ ನಡೆಸಲಾಗುವುದು. ಈ ಮೂಲಕ ಚಂದ್ರನಲ್ಲಿಗೆ ಇನ್ನೂ ಹತ್ತಿರಕ್ಕೆ ತೆರಳಲಿದೆ ಎಂದು ವಿಜ್ಞಾನಿಗಳು ತಿಳಿಸಿದರು. ಈಗ ಅದು ಚಂದ್ರನ ಪರಿಭ್ರಮಣೆ ಶುರು ಮಾಡಿದ್ದು, ಮೂರನೇ ಎರಡರಷ್ಟು ಹತ್ತಿರಕ್ಕೆ ತೆರಳಿದೆ ಎಂದು ಇಸ್ರೋ ತಿಳಿಸಿದೆ.ನಮ್ಮ […]