ಸೂರತ್ ನ್ಯಾಯಾಲಯದಿಂದ ವಿಧಿಸಿದ ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ನಿಂದ ತಡೆ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ವಿಭಜಿಸಿ ಆಳುವ ರಾಜಕಾರಣದ ವಿರುದ್ಧ ರಾಹುಲ್ ಗಾಂಧಿ ಸಂಸತ್ತಿನಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದರು. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರವು ಅವರನ್ನು ರಾಜಕೀಯವಾಗಿ ಗುರಿಯಾಗಿಸಲು ಮತ್ತು ಸಂಸತ್ತಿನಲ್ಲಿ ಅವರ ಉಪಸ್ಥಿತಿಯನ್ನು ತಡೆಯಲು ಮತ್ತು 2024ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಸಂಚು ರೂಪಿಸಿದೆ. ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ನರೇಂದ್ರ ಮೋದಿ ನೇತೃತ್ವದ […]
ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ದೋಷಾರೋಪಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಹುಲ್ ಗಾಂಧಿ ಅವರ “ಎಲ್ಲಾ ಕಳ್ಳರಿಗೆ ಮೋದಿ ಉಪನಾಮ ಏಕಿದೆ” ಎಂಬ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೆಳನ್ಯಾಯಾಲಯವು ನೀಡಿದ ದೋಷಾರೋಪಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಅವರ ದೋಷಾರೋಪಣೆಯನ್ನು ತಡೆಹಿಡಿಯುವುದರೊಂದಿಗೆ, ರಾಹುಲ್ ಗಾಂಧಿಯ ಸಂಸದ ಸ್ಥಾನದ ಅನರ್ಹತೆ ಈಗ ಸ್ಥಗಿತಗೊಂಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಶಿಕ್ಷೆಯು ಗರಿಷ್ಠ ಎರಡು ವರ್ಷಗಳ ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ […]
ಚಂದ್ರಯಾನದ ಬಳಿಕ ಸಾಗರಯಾನಕ್ಕೆ ಸಜ್ಜು: 6000 ಮೀಟರ್ ಆಳಕ್ಕೆ ತೆರಳಿದ್ದಾರೆ ಮೂವರು ಸಾಗರಯಾನಿಗಳು!

ನವದೆಹಲಿ: ಆಳವಾದ ಸಾಗರ ಮತ್ತು ಅದರ ಸಂಪನ್ಮೂಲಗಳನ್ನು ಅನ್ವೇಷಿಸುವ ಗುರಿಯನ್ನು ಹೊಂದಿರುವ ಭಾರತದ ಮಹತ್ವಾಕಾಂಕ್ಷೆಯ ಸಮುದ್ರಯಾನ ಯೋಜನೆಯು ಸಬ್‌ಮರ್ಸಿಬಲ್ ವಾಹನದಲ್ಲಿ ಮೂರು ಸಿಬ್ಬಂದಿಯನ್ನು 6000 ಮೀಟರ್ ಆಳಕ್ಕೆ ಕಳುಹಿಸಲು ಸಿದ್ಧವಾಗಿದೆ. ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರು ಗುರುವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಘೋಷಣೆ ಮಾಡಿದ್ದಾರೆ. ಸಮುದ್ರಯಾನ ಯೋಜನೆ, ಭಾರತದ ಮೊದಲ ಮಾನವಸಹಿತ ಸಾಗರ ಮಿಷನ್ ಆಗಿದ್ದು ಆಳ ಸಮುದ್ರದ ಸಂಪನ್ಮೂಲಗಳನ್ನು ಅಧ್ಯಯನ ಮಾಡಲು ಮತ್ತು ಜೀವವೈವಿಧ್ಯ ಮೌಲ್ಯಮಾಪನಗಳನ್ನು ನಡೆಸಲು ವಿನ್ಯಾಸಗೊಳಿಸಲಾಗಿದೆ. ಸಬ್‌ಮರ್ಸಿಬಲ್ […]
ಲಾಭ 2 ಕೋಟಿ ರೂ. ,Zomato ಆದಾಯ 2,416 ಕೋಟಿ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಂಪನಿಯು 2 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, 2,416 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು Zomato ಹೇಳಿಕೊಂಡಿದೆ.ಆದಾಯವು ಹಿಂದಿನ ವರ್ಷಕ್ಕಿಂತ ಶೇಕಡಾ 70.9 ರಷ್ಟು ಹೆಚ್ಚಾಗಿದೆ. ಹಣಕಾಸು ವರ್ಷ 2024 ರಲ್ಲಿ ತ್ರೈಮಾಸಿಕ ನಿವ್ವಳ ಲಾಭ ಗಳಿಸುವ ಬಗ್ಗೆ ಜೊಮ್ಯಾಟೊ ಆಶಾವಾದಿಯಾಗಿದೆ. ಕಂಪನಿಯು ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಲು ಆಶಿಸುತ್ತಿದೆ. “…ನಮ್ಮ ವ್ಯವಹಾರವು ಮುಂದೆ ಲಾಭದಾಯಕವಾಗಿ ಮುಂದುವರಿಯಲಿದೆ ಎಂದು ನಾವು ನಿರೀಕ್ಷಿಸುತ್ತೇವೆ. ನಾವು ಕನಿಷ್ಠ ಮುಂದಿನ […]
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು. ಸಿದ್ದರಾಮಯ್ಯ ಅವರು ಮರದಲ್ಲಿ ತಯಾರಿಸಿದ ಆನೆಯ ವಿಗ್ರಹ ಮತ್ತು ಹಾರವನ್ನು ಪ್ರಧಾನಿ ಮೋದಿ ಅವರಿಗೆ ನೀಡಿದರು. ಪಿಎಂಒ ಟ್ವೀಟ್ ಮಾಡಿರುವ ಚಿತ್ರದಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕದ ಸಾಂಪ್ರದಾಯಿಕ ಪೇಟ ಮತ್ತು ಶಾಲನ್ನು ತೊಟ್ಟಿದ್ದಾರೆ. ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ […]