ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಮಿಶ್ರ ರಿಲೇ ಓಟದಲ್ಲಿ ಚಿನ್ನ ಗೆದ್ದ ಭಾರತ

ಬ್ಯಾಂಕಾಕ್: 2023 ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ 4X400 ಮೀ. ಮಿಶ್ರ ರಿಲೇ ತಂಡವು ಚಿನ್ನದ ಪದಕವನ್ನು ಗೆದ್ದಿದೆ. Indian 4X400m mixed relay team wins a gold medal at the Asian Athletics Championships 2023. Rajesh Ramesh, Aishwarya Mishra, Amoj Jacob and Subha Venkatesan set a new record of 3 minutes, 14.70 seconds.@Media_SAI @YASMinistry pic.twitter.com/BJl7syXQQF — DD News (@DDNewslive) July […]
ಅಲಾಸ್ಕಾ ಪರ್ಯಾಯ ದ್ವೀಪ ಪ್ರದೇಶದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ

ಅಲಾಸ್ಕಾ: ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ ಅಲಾಸ್ಕಾ ಪರ್ಯಾಯ ದ್ವೀಪ ಪ್ರದೇಶದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ನಂತರ ಯುಎಸ್ ಸುನಾಮಿ ಎಚ್ಚರಿಕೆ ವ್ಯವಸ್ಥೆಯು ತೀರದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಭೂಕಂಪವು 9.3 ಕಿಮೀ (5.78 ಮೈಲುಗಳು) ಆಳದಲ್ಲಿದೆ ಎಂದು USGS ಹೇಳಿದೆ. ಎರಡು ವಾರಗಳ ಹಿಂದೆ ಅಲಾಸ್ಕಾದ ಆಂಕಾರೇಜ್‌ನಲ್ಲಿ ಲಘು ಭೂಕಂಪ ಸಂಭವಿಸಿದೆ. ಭೂಕಂಪವು ನಗರದ ದಕ್ಷಿಣಕ್ಕೆ 12 ಮೈಲುಗಳಷ್ಟು ಮತ್ತು ಈಗಲ್ ನದಿಯ ದಕ್ಷಿಣಕ್ಕೆ ಎರಡು ಮೈಲುಗಳಷ್ಟು ದೂರದಲ್ಲಿ ದಾಖಲಾಗಿದೆ. […]
ಚಂದ್ರಯಾನ 3- ಚಂದ್ರನ ಮೇಲೆ ಮಾನವ ವಾಸಸ್ಥಾನದ ಸಾಧ್ಯತೆ ಬಗ್ಗೆ ಅನ್ವೇಷಿಸಲಿದೆ ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಚೆನ್ನೈ (ತಮಿಳುನಾಡು): ಭಾರತದ ಚಂದ್ರಯಾನ 3 ಯೋಜನೆಯು ಚಂದ್ರನ ಮೇಲೆ ಮಾನವ ವಾಸಸ್ಥಾನದ ಸಾಧ್ಯತೆಗಳನ್ನು ಅನ್ವೇಷಿಸಲಿದೆ.ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ನಿಗದಿತ ಉಡಾವಣಾ ಸಮಯದ ಪ್ರಕಾರ, ಜಿಎಸ್ಎಲ್ವಿ ಮಾರ್ಕ್ 3 (ಎಲ್ವಿಎಂ 3) ಹೆವಿ ಲಿಫ್ಟ್ ಉಡಾವಣಾ ವಾಹನದಿಂದ ಚಂದ್ರಯಾನ-3 ಉಪಗ್ರಹ ಯಶಸ್ವಿಯಾಗಿ ಇಸ್ರೋ ವಿಜ್ಞಾನಿಗಳು ಉಡಾವಣೆ ಮಾಡಿದ್ದಾರೆ. ಇಂದು ತಮಿಳುನಾಡಿನ ಚೆನ್ನೈನಲ್ಲಿ ಮಾತನಾಡಿದ ಸಚಿವ ಜಿತೇಂದ್ರ ಸಿಂಗ್, ಚಂದ್ರಯಾನವು ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಭಾರತವನ್ನು ಪ್ರಮುಖ ಜಾಗತಿಕ ಆಟಗಾರನನ್ನಾಗಿ ಮಾಡಲಿದೆ ಎಂದು […]
ಚಂದ್ರಯಾನ-3ರ ಹಿಂದಿದ್ದಾರೆ ಭಾರತದ ‘ರಾಕೆಟ್ ಮಹಿಳೆ’ ಎಂದು ಖ್ಯಾತಿವೆತ್ತ ರಿತು ಕರಿದಾಲ್ ಶ್ರೀವಾಸ್ತವ

ಶ್ರೀಹರಿಕೋಟಾ: ಭಾರತದ ಮೂರನೇ ಚಂದ್ರಯಾನ ಅಭಿಯಾನ ‘ಚಂದ್ರಯಾನ-3’ ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಚಂದ್ರಯಾನ-3 ರ ಹಿಂದಿರುವ ನಾರೀಶಕ್ತಿ ಭಾರತದ ಸ್ವಂತ ‘ರಾಕೆಟ್ ಮಹಿಳೆ’ ಎಂದೇ ಖ್ಯಾತರಾದ ರಿತು ಕರಿದಾಲ್ ಶ್ರೀವಾಸ್ತವ. ಮಹಿಳಾ ಆರ್ಥಿಕ ವೇದಿಕೆ (ಡಬ್ಲ್ಯುಇಎಫ್) ಪ್ರಕಾರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯಲ್ಲಿ ರಿತು ಕರಿದಾಲ್ ಶ್ರೀವಾಸ್ತವ ಅವರು ಹಿರಿಯ ವಿಜ್ಞಾನಿಯಾಗಿದ್ದು, ಮಾರ್ಸ್ ಆರ್ಬಿಟರ್ ಮಿಷನ್ ಅನ್ನು ಸಾಕಾರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. […]
ಬೆಳಗಾವಿ ಯುವ ವಿಜ್ಞಾನಿ ಚಂದ್ರಯಾನ – 3 ಉಡಾವಣೆಯಲ್ಲಿ ಕಾರ್ಯ

ಬೆಳಗಾವಿ: ಇಸ್ರೋದಿಂದ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ.ಈ ಮಹತ್ಕಾರ್ಯದಲ್ಲಿ ಬೆಳಗಾವಿ ಜಿಲ್ಲೆ ಯುವಕನೊಬ್ಬ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ‘ಪ್ರಕಾಶ ಪೆಡ್ನೇಕರ್’ ಎಂಬ ಯುವ ವಿಜ್ಞಾನಿ ಚಂದ್ರಯಾನ- 3 ಮಿಷನ್ನಲ್ಲಿ ಕೆಲಸ ಮಾಡುತ್ತಿರುವವರು. ಚಂದ್ರಯಾನ-2 ರಲ್ಲಿಯೂ ಇವರು ಕೆಲಸ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ಪ್ರಕಾಶ ಪೆಡ್ನೇಕರ್ ಎಂಬ ಯುವ ವಿಜ್ಞಾನಿ ಚಂದ್ರಯಾನ – 3 ಮಿಷನ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶುಭ ಹಾರೈಸಿದ ಸ್ವಾಮೀಜಿ: […]