ಆಹಾರ ಪಾನೀಯಗಳಲ್ಲಿ ಬಳಸುವ ಕೃತಕ ಸಿಹಿ ಮನುಷ್ಯರಿಗೆ ಕ್ಯಾನ್ಸರ್ ಕಾರಕ: ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯಿಂದ ಘೋಷಣೆ ಸಾಧ್ಯತೆ

ಜಿನಿವಾ: ಕೋಕಾ-ಕೋಲಾ ಡಯಟ್ ಸೋಡಾಗಳಿಂದ ಹಿಡಿದು ಮಾರ್ಸ್‌ನ ಎಕ್ಸ್‌ಟ್ರಾ ಚೂಯಿಂಗ್ ಗಮ್ ಮತ್ತು ಕೆಲವು ಪೇಯ ಉತ್ಪನ್ನಗಳಲ್ಲಿ ಬಳಸಲಾಗುವ ಆಸ್ಪರ್ಟೇಮ್ ಅನ್ನುವ ಕೃತಕ ಸಿಹಿಯನ್ನು “ಮನುಷ್ಯರಿಗೆ ಕ್ಯಾನ್ಸರ್ ಕಾರಕ” ಎಂದು ಮೊದಲ ಬಾರಿಗೆ ಪಟ್ಟಿಮಾಡಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಕ್ಯಾನ್ಸರ್ ಸಂಶೋಧನಾ ವಿಭಾಗವಾದ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (IARC) ತಿಳಿಸಿದೆ. ಜುಲೈ ತಿಂಗಳಿನಲ್ಲಿ ಈ ಬಗ್ಗೆ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಗುಂಪಿನ ಬಾಹ್ಯ ತಜ್ಞರ ಸಭೆಯ ನಂತರ […]
ಸೇತುವೆ ಕೊಚ್ಚಿ ಹೋದ ಹಿನ್ನೆಲೆ ಬಿಹಾರದಲ್ಲಿ ನದಿಯ ಮಧ್ಯದಲ್ಲೇ ಸಿಲುಕಿದ ಜನತೆ!

ವೈಶಾಲಿ (ಬಿಹಾರ): ವೈಶಾಲಿ ಜಿಲ್ಲಾ ಕೇಂದ್ರದಿಂದ ರಘೋಪುರಕ್ಕೆ ಸಂಪರ್ಕ ಕಲ್ಪಿಸಲು ಗಂಗಾ ನದಿಗೆ ಅಡ್ಡಲಾಗಿ ತಾತ್ಕಾಲಿಕವಾದ ಈ ಪಿಪಾ ಸೇತುವೆ ನಿರ್ಮಿಸಲಾಗಿತ್ತು. ಆದರೆ, ಮಳೆ ಜೊತೆಗೆ ಬಲವಾದ ಗಾಳಿಗೆ ಅದು ಕೊಚ್ಚಿಕೊಂಡು ಹೋಗಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇತುವೆ ದಾಟುತ್ತಿದ್ದರು. ಏಕಾಏಕಿ ಉಂಟಾದ ಅವಘಡದಿಂದ ಜನರು ನದಿಯ ಮಧ್ಯದಲ್ಲೇ ಸಿಲುಕಿಕೊಂಡಿದ್ದರು. ಬಳಿಕ ಜಿಲ್ಲಾಡಳಿತ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಿದೆ. ಬಿಹಾರದಲ್ಲಿ ಮತ್ತೊಂದು ಸೇತುವೆ ಕೊಚ್ಚಿಕೊಂಡು ಹೋಗಿದೆ. ಭಾಗಲ್ಪುರ ಜಿಲ್ಲೆಯಲ್ಲಿ ಇತ್ತೀಚಿಗೆ ಬಹುಕೋಟಿ ವೆಚ್ಚದ […]
ಚಂದ್ರಯಾನ-3 ಉಡಾವಣೆ ಜುಲೈ13ರಂದು ಮಧ್ಯಾಹ್ನ 2.30ಕ್ಕೆ: ಇಸ್ರೋ ಘೋಷಣೆ

ನವದೆಹಲಿ: ಬಹುನಿರೀಕ್ಷಿತ ಚಂದ್ರಯಾನ-3 ನೌಕೆಯನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-III ಮೂಲಕ ಉಡಾವಣೆ ಮಾಡಲಾಗುವುದು. ಇದಕ್ಕಾಗಿ ಜುಲೈ 13ರಂದು ಮುಹೂರ್ತ ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಜುಲೈ 13ರಂದು ಮಧ್ಯಾಹ್ನ 2:30 ಕ್ಕೆ ಉಡಾವಣೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಘೋಷಿಸಿದೆ.ಇಸ್ರೋ ಮತ್ತೊಂದು ವಿಕ್ರಮಕ್ಕೆ ಸಜ್ಜಾಗಿದೆ. ಮುಂದಿನ ತಿಂಗಳಲ್ಲಿ ಚಂದ್ರಯಾನ ಸರಣಿಯ ಮೂರನೇ ನೌಕೆಯನ್ನು ನಭಕ್ಕೆ ಹಾರಿಸಲಿದೆ. ಇದು ಲ್ಯಾಂಡರ್ ಮತ್ತು ರೋವರ್ ಮಾದರಿಯನ್ನು […]
ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ರಕ್ತಸಿಕ್ತ ಸಂಘರ್ಷದಿಂದ ಗಾಯಗೊಂಡ ಗಂಡು ಚೀತಾ

ತೆರೆದ ಕುನೋ ಕಾಡಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಚೀತಾಗಳ ಎರಡು ಗುಂಪಿನ ನಡುವೆ ಸಂಘರ್ಷ ನಡೆದಿದ್ದು, ಪರಿಣಾಮ ಆಫ್ರಿಕನ್ ಗಂಡು ಚೀತಾ ಅಗ್ನಿ ಗಾಯಗೊಂಡಿದೆ. ಶಿಯೋಪುರ,ಮಧ್ಯಪ್ರದೇಶ: ಕುನೋ ರಾಷ್ಟ್ರೀಯ ಉದ್ಯಾನವನದ ತೆರೆದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರ ಮಾಡಿದ್ದ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದ ಚೀತಾಗಳ ನಡುವೆ ಕಾದಾಟ ನಡೆದಿದೆ.ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಕಾದಾಟದಲ್ಲಿ ಸ್ಥಳಾಂತರಗೊಂಡಿದ್ದ ಆಫ್ರಿಕನ್ ಗಂಡು ಚೀತಾ ಅಗ್ನಿ ಗಾಯಗೊಂಡಿದೆ. “ಸೋಮವಾರ ಸಂಜೆ ಕುನೋ ರಾಷ್ಟ್ರೀಯ ಉದ್ಯಾನವನದ ತೆರೆದ ಅರಣ್ಯ ಪ್ರದೇಶದಲ್ಲಿ ಎರಡು ಗುಂಪಿನ ಚೀತಾಗಳ […]
ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದ ಕರ್ನಾಟಕ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ನ ರಮೇಶ್ ಬಾಬು ದೂರು ನೀಡಿದ್ದಾರೆ. ಟ್ವಿಟರ್ ನಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್ಗಳ ಹಿನ್ನೆಲೆ ರಮೇಶ್ ಬಾಬು ದೂರು ನೀಡಿದ್ದಾರೆ. ಆ್ಯನಿಮೇಟೆಡ್ ವೀಡಿಯೋ ಒಂದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯ ಬಿಜೆಪಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ […]