ನೇಪಾಳ ಪ್ರವಾಹದ ಅಬ್ಬರಕ್ಕೆ 160 ಮಂದಿ ಸಾವು; 300 ಭಾರತೀಯರು ಸೇರಿ 500 ವಿದೇಶಿಗರು ನಾಪತ್ತೆ,ಇನ್ನಷ್ಟು ಮಂದಿ ಸಂಕಷ್ಟದಲ್ಲಿ!

ನವದೆಹಲಿ: ಕೆಲವೇ ಗಂಟೆಗಳಲ್ಲಿ ನಗರಗಳೇ ಕೊಚ್ಚಿಹೋಗುವಷ್ಟು ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ ಸಂಭವಿಸಿದೆ. ರಸುವಾ ಪ್ರದೇಶದಲ್ಲಿ ಸಂಭವಿಸಿದ ಈ ದುರಂತದಲ್ಲಿ 160 ಮಂದಿ ಮೃತಪಟ್ಟಿದ್ದು, ಸಾವಿರಾರು ಜನರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ತಿಳಿಸಿದ್ದಾರೆ. ಕಠ್ಮಂಡುವಿನಲ್ಲಿ ನಡೆದ ಎನ್‌ಡಿಟಿವಿ ವರ್ಲ್ಡ್ ಅನ್ವೀಕ್ಷಾ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪ್ರವಾಹದಲ್ಲಿ ನಾಪತ್ತೆಯಾಗಿರುವವರಲ್ಲಿ ಹೆಚ್ಚಿನವರು ಮಾನಸ ಸರೋವರ ಯಾತ್ರಿಕರಾಗಿದ್ದಾರೆ ಎಂದು ಮಾಹಿತಿ ನೀಡಿದರು. 300 ಭಾರತೀಯರು ಸಂಪರ್ಕಕ್ಕೆ ಸಿಗುತ್ತಿಲ್ಲ ಪ್ರವಾಹ ಪೀಡಿತ ಮಾರ್ಗವನ್ನು ಭಾರತೀಯರು ಸೇರಿದಂತೆ ಹಲವು […]

ನೇಪಾಳ ಪ್ರವಾಹ: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ

ಬೆಂಗಳೂರು: ನೇಪಾಳ–ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ದುರಂತದಲ್ಲಿ ಕನ್ನಡಿಗರೂ ಸಿಲುಕಿಕೊಂಡಿದ್ದಾರೆ. ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ ನಾಲ್ವರು ಎನ್‌ಆರ್‌ಐ ಕನ್ನಡಿಗರು ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮೂಲತಃ ಬೆಂಗಳೂರಿನವರಾಗಿದ್ದು, ಸದ್ಯ ಅಮೆರಿಕದಲ್ಲಿ ನೆಲೆಸಿರುವ ನಾಲ್ವರು ಯಾತ್ರಿಕರು ಮಾನಸ ಸರೋವರ ಯಾತ್ರೆಗಾಗಿ ಅಮೆರಿಕದಿಂದ ನೇಪಾಳಕ್ಕೆ ಆಗಮಿಸಿದ್ದರು. ಪ್ರವಾಹ ಸಂಭವಿಸಿದ ಪ್ರದೇಶದಲ್ಲಿದ್ದ ಚೀನಾ ಎಂಬೆಸ್ಸಿಗೆ ತೆರಳಿದ್ದ ಅವರು, ದುರಂತದ ಬಳಿಕ ಸ್ನೇಹಿತರು ಹಾಗೂ ಕುಟುಂಬಸ್ಥರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ. ಈ ಕುರಿತು ಅವರ ಸ್ನೇಹಿತರು […]

ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾವು; 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭೋಟೆ ಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದ ಭಾರಿ ಅನಾಹುತ ಸಂಭವಿಸಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 41 ಭದ್ರತಾ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೋಟೆ ಕೋಶಿ ನದಿಯಲ್ಲಿ ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಹಠಾತ್ ಪ್ರವಾಹ ಉಂಟಾಗಿದೆ. ಪ್ರವಾಹದ ರಭಸಕ್ಕೆ ಹಲವು ಪ್ರದೇಶಗಳಲ್ಲಿ ಭಾರಿ ಹಾನಿಯಾಗಿದ್ದು, ನದಿ ದಡದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. 41 ಭದ್ರತಾ ಸಿಬ್ಬಂದಿ ನಾಪತ್ತೆ […]

ಭಾರತಕ್ಕೆ ಒಂದು ರೆಸಿಪಿ, ವಿದೇಶಕ್ಕೆ ಮತ್ತೊಂದು: ಜನಪ್ರಿಯ ಕಂಪೆನಿಗಳ ಆಹಾರ ಉತ್ಪನ್ನಗಳನ್ನು ತಿನ್ನುವ ಮೊದಲು ಎಚ್ಚರ, ಭಾರತದ ಜನರಿಗೆ ಕಳಪೆ ಗುಣಮಟ್ಟದ ಆಹಾರ ಏಕೆ?

ಸಕ್ಕರೆ, ಉಪ್ಪು ಮತ್ತು ಕೊಬ್ಬಿನ ಅಂಶ ಹೆಚ್ಚಿರುವ ಚಿಪ್ಸ್, ಕೂಲ್‌ಡ್ರಿಂಕ್ಸ್ ಸೇರಿದಂತೆ ಪ್ಯಾಕೆಟ್ ಆಹಾರಗಳ ಮೇಲೆ ಗ್ರಾಹಕರಿಗೆ ಎಚ್ಚರಿಕೆ ನೀಡಲು ಮುಂಭಾಗದಲ್ಲಿ ಕೆಂಪು ಬಣ್ಣದ ಲೇಬಲ್ ಅಳವಡಿಸುವ ಪ್ರಸ್ತಾವದಿಂದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಿಂದೆ ಸರಿದಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಆಹಾರ ಉದ್ಯಮದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಪ್ಯಾಕೆಟ್‌ಗಳ ಮುಂಭಾಗದಲ್ಲಿ ಕೆಂಪು-ಹಸಿರು ಬಣ್ಣದ ಪೌಷ್ಟಿಕಾಂಶ ಎಚ್ಚರಿಕೆ ಲೇಬಲ್ ಅಳವಡಿಸುವುದಕ್ಕೆ ಆಹಾರ ಕಂಪನಿಗಳು ವಿರೋಧ […]

ಆನ್‌ಲೈನ್‌ನಲ್ಲಿ ವಿಷಕಾರಿ ದತ್ತೂರಿ ಬೀಜ ಮಾರಾಟ: ಇ-ಕಾಮರ್ಸ್‌ಗಳಿಗೆ FDA ನೋಟಿಸ್

ಬೆಂಗಳೂರು: ಪ್ರಾಣಕ್ಕೆ ಅಪಾಯ ಉಂಟುಮಾಡುವ ವಿಷಕಾರಿ ದತ್ತೂರಿ ಹಣ್ಣು ಮತ್ತು ಬೀಜಗಳನ್ನು ಆನ್‌ಲೈನ್‌ ಇ-ಕಾಮರ್ಸ್‌ ವೇದಿಕೆಗಳಲ್ಲಿ ಮಾರಾಟ ಮಾಡುತ್ತಿರುವುದು ಆಹಾರ ಮತ್ತು ಔಷಧ ಆಡಳಿತ (FDA)ದ ಗಮನಕ್ಕೆ ಬಂದಿದೆ. ಅಮೆಜಾನ್ ಸೇರಿದಂತೆ ಹಲವು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಅಗತ್ಯ ಅನುಮತಿ ಇಲ್ಲದೆ ದತ್ತೂರಿ ಹಣ್ಣು ಹಾಗೂ ಬೀಜಗಳ ಮಾರಾಟ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ದತ್ತೂರಿ ಹಣ್ಣು ಮತ್ತು ಬೀಜಗಳು ವಿಷಕಾರಿ ಗುಣ ಹೊಂದಿದ್ದು, ಸೇವನೆಯಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಅಪಾಯಕಾರಿ ಉತ್ಪನ್ನಗಳ […]