ದೇಶದ ಹೆಗ್ಗುರುತಾದ ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಹರಿಯಾಣ ವಿಭಾಗವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುಗ್ರಾಮ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 1 ಲಕ್ಷ ಕೋಟಿ ರೂ. ಮೊತ್ತದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ಪ್ರಧಾನ ಮಂತ್ರಿ ಇಂದು ದ್ವಾರಕಾ ಎಕ್ಸ್‌ಪ್ರೆಸ್‌ವೇಯ (Dwarka Expressway) ಹರಿಯಾಣ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಇದು ಸಂಚಾರ ಹರಿವನ್ನು ಸುಧಾರಿಸಲು ಮತ್ತು ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ದೆಹಲಿ ಮತ್ತು ಗುರುಗ್ರಾಮ್ ನಡುವಿನ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಎಂಟು ಪಥಗಳ ದ್ವಾರಕಾ […]

71 ನೇ ವಿಶ್ವಸುಂದರಿ ಸ್ಪರ್ಧೆ: ಕಿರೀಟ ಮುಡಿಗೇರಿಸಿಕೊಂಡ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೊವಾ

ಮುಂಬೈ: ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೊವಾ ಅವರು 28 ವರ್ಷಗಳ ಅಂತರದ ನಂತರ ಭಾರತಕ್ಕೆ ಮರಳಿದ ವಿಶ್ವ ಸುಂದರಿ (Miss World) 2024 ಸ್ಪರ್ಧೆಯ 71 ನೇ ಆವೃತ್ತಿಯನ್ನು ಗೆದ್ದಿದ್ದಾರೆ. ಮುಂಬೈನಲ್ಲಿ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಗ್ರಾಂಡ್ ಫಿನಾಲೆ ನಡೆಯಿತು. ಫೆಮಿನಾ ಮಿಸ್ ಇಂಡಿಯಾ 2022 ರ ವಿಜೇತೆ ಸಿನಿ ಶೆಟ್ಟಿ ಈ ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದರು. ಪ್ರಪಂಚದಾದ್ಯಂತದ 112 ಸ್ಪರ್ಧಿಗಳನ್ನು ಒಳಗೊಂಡಿದ್ದ ಸ್ಪರ್ಧೆಯಲ್ಲಿ ಟಾಪ್ ಎಂಟರಲ್ಲಿ ಸಿನಿಶೆಟ್ಟಿ ಇದ್ದರೂ ವಿಶ್ವಸುಂದರಿ ಕಿರೀಟ ಮುಡಿಗೇರಿಸಿಕೊಳ್ಳಲಾಗಲಿಲ್ಲ. […]

ಭಾರತ v/s ಇಂಗ್ಲೆಂಡ್ ಟೆಸ್ಟ್: 4-1 ಅಂತರದಿಂದ ಸರಣಿ ಗೆದ್ದ ಭಾರತ

ಧರ್ಮಶಾಲಾ: ಸ್ಪಿನ್ನರ್‌ಗಳ ನೆರವಿನಿಂದ ಇಂಗ್ಲೆಂಡ್‌ (England) ವಿರುದ್ಧ ಐದನೇ ಟೆಸ್ಟ್‌ ಪಂದ್ಯವನ್ನು(Test Match) ಭಾರತ (Team India) ಒಂದು ಇನ್ನಿಂಗ್ಸ್‌ ಮತ್ತು 64 ರನ್‌ಗಳಿಂದ ಜಯಗಳಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿದೆ. 259 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌ 195 ರನ್‌ಗಳಿಗೆ ಆಲೌಟ್‌ ಆಯ್ತು. ಸ್ಪಿನ್ನರ್‌ ಅಶ್ವಿನ್‌ 5 ವಿಕೆಟ್‌ ಪಡೆದರೆ ಬುಮ್ರಾ ಮತ್ತು ಕುಲದೀಪ್‌ ಯಾದವ್‌ ತಲಾ 2 ವಿಕೆಟ್‌ ಪಡೆದರು. ರವೀಂದ್ರ ಜಡೇಜಾ 1 […]

ಅಂತರಾಷ್ಟ್ರೀಯ ಡ್ರಗ್ಸ್ ಜಾಲದ ಕಿಂಗ್ ಪಿನ್ ತಮಿಳು ಚಿತ್ರ ನಿರ್ಮಾಪಕ ಜಾಫರ್ ಸಾದಿಕ್ ಬಂಧನ: ಎನ್‌ಸಿಬಿ ಕಾರ್ಯಾಚರಣೆ

ಚೆನ್ನೈ: 2,000 ಕೋಟಿ ರೂಪಾಯಿಗಳ ಮಾದಕವಸ್ತು ಕಳ್ಳಸಾಗಣೆ ದಂಧೆಯಲ್ಲಿ ಮಾಜಿ ಡಿಎಂಕೆ ನಾಯಕ ಮತ್ತು ತಮಿಳು ಚಲನಚಿತ್ರ ನಿರ್ಮಾಪಕ ಜಾಫರ್ ಸಾದಿಕ್ ನನ್ನು ಎನ್‌ಸಿಬಿ ಬಂಧಿಸಿದೆ. ಕಳೆದ ತಿಂಗಳು 2,000 ಕೋಟಿ ರೂ. ಮಾದಕ ವಸ್ತು ಕಳ್ಳಸಾಗಣೆ ದಂಧೆಗೆ ಸಂಬಂಧಿಸಿದಂತೆ ದ್ರಾವಿಡ ಮುನ್ನೇತ್ರ ಕಳಗಂ (DMK) ಮಾಜಿ ಪದಾಧಿಕಾರಿ ಮತ್ತು ತಮಿಳು ಚಲನಚಿತ್ರ ನಿರ್ಮಾಪಕ ಜಾಫರ್ ಸಾದಿಕ್ ನನ್ನು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. NCB ಉಪ ಮಹಾನಿರ್ದೇಶಕ (ಕಾರ್ಯಾಚರಣೆ) […]

ಮುಂಬೈನ ಧಾರಾವಿಯ ಹುಡುಗ ಇದೀಗ ಭಾರತೀಯ ಸೇನೆಯಲ್ಲಿ ಕಮಿಷನ್ಡ್ ಆಫೀಸರ್: ಲೆಫ್ಟಿನೆಂಟ್ ಉಮೇಶ್ ಕೀಲು ಸಾಧನೆ ಯುವಕರಿಗೆ ಮಾದರಿ

ಮುಂಬೈ: ಪ್ರಪ್ರಂಚದ ಅತಿದೊಡ್ಡ ಸ್ಲಮ್ ಎನ್ನುವ ಕುಖ್ಯಾತಿ ಪಡೆದ ಧಾರಾವಿಯ(Dharavi) ಕಠಿಣ ಪರಿಸರದಲ್ಲಿ ಬೆಳೆದ ಲೆಫ್ಟಿನೆಂಟ್ ಉಮೇಶ್ ಕೀಲು ಇಂದು ಭಾರತೀಯ ಸೇನೆಯಲ್ಲಿ(Indian Army) ಕಮಿಷನ್ಡ್ ಆಫೀಸರ್ ಆಗಿ ನಿಯುಕ್ತಿಗೊಂಡಿದ್ದಾರೆ. ಸಯಾನ್ ಕೋಳಿವಾಡದ ಕೊಳೆಗೇರಿಯಲ್ಲಿ ಹುಟ್ಟಿ ಬೆಳೆದ ಉಮೇಶ್, ಶನಿವಾರ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ಭಾರತೀಯ ಸೇನೆಯಲ್ಲಿ ಕಮಿಷನ್ಡ್ ಆಫೀಸರ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದಾರೆ. ಧಾರಾವಿಯ 10* 5 ಅಡಿಯ ಮನೆಯಲ್ಲಿ ನಾಲ್ಕು ಜನರ ಪರಿವಾರದಿಂದ ಬಂದ ಉಮೇಶ್ ಕೀಲು ಎಲ್ಲ ಸಂಕಷ್ಟಗಳನ್ನು ಮೀರಿ […]