ಪತ್ನಿಯನ್ನು ಕೇವಲ ಮನೆಗೆಲಸ ಮಾಡುವಂತೆ,ಗಂಡನ ಪೋಷಕರನ್ನು ನೋಡಿಕೊಳ್ಳುವಂತೆ ಬಲವಂತಪಡಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಪತ್ನಿಯನ್ನು ಕೇವಲ ಮನೆಗೆಲಸ ಮಾಡುವಂತೆ ಅಥವಾ ಗಂಡನ ಪೋಷಕರನ್ನು ನೋಡಿಕೊಳ್ಳುವಂತೆ ಬಲವಂತಪಡಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತ್ನಿ ಹಾಗೂ ಮಗಳಿಗೆ ಮಾಸಿಕ ₹9 ಸಾವಿರ ಜೀವನಾಂಶ ನೀಡಬೇಕೆಂಬ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಿಲ್ಲಾಕೂರ್ ಸುಮಲತಾ ಅವರ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ. ವಿವಾಹವಾದ ಮಹಿಳೆ ಕೇವಲ ಮನೆಗೆಲಸಕ್ಕೆ ಸೀಮಿತವಾಗಿರಬೇಕು ಎಂದು ನಿರೀಕ್ಷಿಸಲು ಸಾಧ್ಯವಿಲ್ಲ. ವೃದ್ಧ ಪೋಷಕರ ಆರೈಕೆ ಅವರ […]

ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟ, ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಮುಡಿಗೆ

ಜೈಪುರ: ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ (Kaziah Liz Mejo) ಅವರು ಪ್ರತಿಷ್ಠಿತ ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾನುವಾರ ಜೈಪುರದ ಜೀ ಸ್ಟುಡಿಯೋದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ 52 ಫೈನಲಿಸ್ಟ್‌ಗಳನ್ನು ಹಿಂದಿಕ್ಕಿ ಕಾಜಿಯಾ ಪ್ರಶಸ್ತಿ ಗೆದ್ದಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2025ರ ವಿಜೇತೆ ಮಣಿಕಾ ವಿಶ್ವಕರ್ಮ ಅವರು ಗ್ರ್ಯಾಂಡ್ ಫಿನಾಲೆ ವೇಳೆ ಕಾಜಿಯಾ ಅವರಿಗೆ ಕಿರೀಟ ತೊಡಿಸಿ, ತಮ್ಮ ಉತ್ತರಾಧಿಕಾರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ಮಿಸ್ […]

ನಾಲ್ಕು ಜನಪ್ರಿಯ ಔಷಧಿಗಳ ಮಾರಾಟಕ್ಕೆ ಕೇಂದ್ರದ ನಿಯಂತ್ರಣ, ಮಾದಕ ವ್ಯಸನಕ್ಕಾಗಿ ದುರುಪಯೋಗವಾಗುತ್ತಿದೆ ಈ ಔಷಧಿಗಳು

ನವದೆಹಲಿ: ಮಾದಕ ವ್ಯಸನಕ್ಕಾಗಿ ಔಷಧಿಗಳ ದುರುಪಯೋಗವಾಗುವ ಸಾಧ್ಯತೆ ಕುರಿತು ತಜ್ಞ ಸಂಸ್ಥೆಗಳು ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಭಾರತದ ಅಪೆಕ್ಸ್ ಡ್ರಗ್ ರೆಗ್ಯುಲೇಟರ್ ನಾಲ್ಕು ಜನಪ್ರಿಯ ಕೇಂದ್ರ ನರಮಂಡಲದ (CNS) ಔಷಧಿಗಳ ಮಾರಾಟದ ಮೇಲೆ ನಿಯಂತ್ರಣವನ್ನು ಬಿಗಿಗೊಳಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ಫ್ಲುಪೆಂಟಿಕ್ಸೋಲ್, ಝೋಪಿಕ್ಲೋನ್, ಗ್ಯಾಬಪೆಂಟಿನ್ ಮತ್ತು ಕ್ಯಾರಿಸೊಪ್ರೊಡಾಲ್ ಔಷಧಿಗಳನ್ನು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯ ಶೆಡ್ಯೂಲ್ H1ಗೆ ಸೇರಿಸುವ ಪ್ರಸ್ತಾವನೆ ಮಾಡಲಾಗಿದೆ. ಫ್ಲುಪೆಂಟಿಕ್ಸೋಲ್ ಅನ್ನು ಸ್ಕಿಜೋಫ್ರೇನಿಯಾ ಚಿಕಿತ್ಸೆಗೆ, ಝೋಪಿಕ್ಲೋನ್ ಅನ್ನು […]

ತಯಾರಾಯ್ತು ಸಂಪೂರ್ಣ ಸ್ವದೇಶಿ ನಿರ್ಮಿತ ಎಕೆ-203!

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವ ಭಾರತದ ಪ್ರಯತ್ನಕ್ಕೆ ಮಹತ್ವದ ಯಶಸ್ಸು ದೊರೆತಿದೆ. ಶೇ.100ರಷ್ಟು ಭಾರತೀಯ ಕಚ್ಚಾವಸ್ತು ಹಾಗೂ ಸ್ವದೇಶಿ ಬಿಡಿಭಾಗಗಳಿಂದ ನಿರ್ಮಿಸಲಾದ ಅತ್ಯಾಧುನಿಕ ಎಕೆ-203 ಅಸಾಲ್ಟ್ ರೈಫಲ್‌ನ ಮೊದಲ ಆವೃತ್ತಿಯ ಫೈರಿಂಗ್ ಪರೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಉತ್ತರ ಪ್ರದೇಶದ ಅಮೇಥಿಯ ಕೋರ್ವಾ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಇಂಡೋ-ರಷ್ಯನ್ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ (IRRPL) ಸಂಸ್ಥೆಯು ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ಈ ರೈಫಲ್ ಅನ್ನು ಸಂಪೂರ್ಣವಾಗಿ ದೇಶೀಯವಾಗಿ ತಯಾರಿಸಿದೆ. ಸ್ವದೇಶಿ ಮಾದರಿಯ ಈ ರೈಫಲ್‌ಗೆ ‘ಶೇರ್’ […]

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳಪೆ ಆಹಾರ ಪೂರೈಕೆ, ಪ್ರಯಾಣಿಕರಿಂದ ದೂರು, ಗುತ್ತಿಗೆದಾರರಿಗೆ ₹2 ಲಕ್ಷ ದಂಡ ವಿಧಿಸಿದ ರೈಲ್ವೇ!

ನವದೆಹಲಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳಪೆ ಗುಣಮಟ್ಟದ ಪರೋಟ ನೀಡಲಾಗಿದೆ ಎಂಬ ಪ್ರಯಾಣಿಕರ ದೂರಿನ ಬೆನ್ನಲ್ಲೇ IRCTC ಕ್ರಮ ಕೈಗೊಂಡಿದೆ. ಆಹಾರ ವಿತರಣೆ ಗುತ್ತಿಗೆ ಪಡೆದ ಸಂಸ್ಥೆಗೆ ₹2 ಲಕ್ಷ ದಂಡ ವಿಧಿಸಲಾಗಿದೆ. ಆಗಸ್ಟ್‌ 16ರಂದು ಬನಾರಸ್‌ನಿಂದ ದೆಹಲಿಗೆ ತೆರಳುತ್ತಿದ್ದ 22435 ಸಂಖ್ಯೆಯ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಪರೋಟ ಆರ್ಡರ್‌ ಮಾಡಿದ್ದರು. ಪರೋಟ ಸರಿಯಾಗಿ ಬೆಂದಿಲ್ಲ ಹಾಗೂ ಆಹಾರದ ಗುಣಮಟ್ಟ ತೃಪ್ತಿಕರವಾಗಿಲ್ಲ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ಕೇಂದ್ರ […]