ರಾಹುಲ್ ಗಾಂಧಿಯ ಹೊಸ ಪಾಸ್ ಪೋರ್ಟ್ ಮನವಿಗೆ ವಿರೋಧ ವ್ಯಕ್ತಪಡಿಸಿದ ಸುಬ್ರಮಣ್ಯನ್ ಸ್ವಾಮಿ

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೊಸ ಪಾಸ್‌ಪೋರ್ಟ್ ನೀಡುವಂತೆ ದೆಹಲಿ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಮನವಿಯನ್ನು ವಿರೋಧಿಸಿದ್ದಾರೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರ ಮುಂದೆ ಹಾಜರಾದ ಗಾಂಧಿ ಪರ ವಕೀಲ ತರನ್ನುಮ್ ಚೀಮಾ ಅವರು ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಬಹುದು ಎಂದು ಹೇಳಿದರು. ರಾಹುಲ್ ಗಾಂಧಿಗೆ ಜಾಮೀನು ನೀಡುವ ಆದೇಶದಲ್ಲಿ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ ಎಂದು ಕೋರ್ಟ್ ಗಮನಿಸಿದೆ. […]
ಹೊಸ ಸಂಸತ್ ಭವನದಲ್ಲಿರಲಿದೆ ಸ್ವಾತಂತ್ರ್ಯದ ಪ್ರತೀಕವಾದ ಸೆಂಗೋಲ್: ಚೋಳ ರಾಜರ ಕಾಲದ ರಾಜದಂಡ ಹಸ್ತಾಂತರ ಪದ್ದತಿಗೆ ಪುನರ್ಜೀವ

ನವದೆಹಲಿ: ಬುಧವಾರದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಂಬರುವ ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸ್ಪೀಕರ್ ಸ್ಥಾನದ ಪಕ್ಕದಲ್ಲಿ ತಮಿಳುನಾಡಿನ ಐತಿಹಾಸಿಕ ರಾಜದಂಡವನ್ನು ಸ್ಥಾಪಿಸಲಿದ್ದಾರೆ ಎಂದು ಹೇಳಿದರು. “ಸೆಮ್ಮೈ” ಎಂಬ ತಮಿಳು ಪದದಿಂದ ಹುಟ್ಟಿಕೊಂಡಿರುವ ಸೆಂಗೋಲ್ ಪದದ ಅರ್ಥ “ಸದಾಚಾರ” ಎಂದಾಗಿದೆ. ಈ ರಾಜದಂಡವು ಸ್ವಾತಂತ್ರ್ಯದ ” ಐತಿಹಾಸಿಕ ಮಹತ್ವದ” ಸಂಕೇತವಾಗಿದೆ ಏಕೆಂದರೆ ಇದು ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ವರ್ಗಾವಣೆಯನ್ನು ಸೂಚಿಸುತ್ತದೆ ಎಂದು ಶಾ […]
UPSC ಫಲಿತಾಂಶ: ಇಶಿತಾ ಕಿಶೋರ್ ರಾಷ್ಟ್ರಕ್ಕೆ ಪ್ರಥಮ; ಮೊದಲ ನಾಲ್ಕು ಸ್ಥಾನಗಳಲ್ಲಿ ಮಹಿಳೆಯರ ಮೇಲುಗೈ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ತನ್ನ ವೆಬ್‌ಸೈಟ್‌ನಲ್ಲಿ ನಾಗರಿಕ ಸೇವಾ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು UPSC ಯ ಅಧಿಕೃತ ವೆಬ್‌ಸೈಟ್ – upsc.gov.in ನಿಂದ ಡೌನ್‌ಲೋಡ್ ಮಾಡಬಹುದು. ಇಶಿತಾ ಕಿಶೋರ್ ಅಖಿಲ ಭಾರತ ಶ್ರೇಯಾಂಕ 1 ನೇ ಸ್ಥಾನ ಪಡೆದರೆ, ಗರಿಮಾ ಲೋಹಿಯಾ, ಉಮಾ ಹರತಿ ಎನ್, ಮತ್ತು ಸ್ಮೃತಿ ಮಿಶ್ರಾ, ಕ್ರಮವಾಗಿ ಎರಡನೇ, ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆದು ಮೊದಲ ಮೂರು ಸ್ಥಾನಗಳಲ್ಲಿ […]
2,000 ರೂ ನೋಟು ಹಿಂತೆಗೆತ: ಚಿನ್ನ ಖರೀದಿಯತ್ತ ಜನರ ಒಲವು; ಚಿನ್ನದ ಬೆಲೆಯಲ್ಲಿ ಜಿಗಿತ

ಮುಂಬೈ: 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಕೇಂದ್ರೀಯ ಬ್ಯಾಂಕ್‌ನ ಕ್ರಮದ ನಂತರ ಜನರು ಚಿನ್ನ ಖರೀದಿಯತ್ತ ಮನಸ್ಸು ಮಾಡಿರುವುದರಿಂದ ಆಭರಣ ಮಾರಾಟದಲ್ಲಿ ಸ್ವಲ್ಪಮಟ್ಟಿಗೆ ಏರಿಕೆಯಾಗಿದೆ. ಆದರೆ 2016 ರಲ್ಲಿ 500 ರೂ ಮತ್ತು 1,000 ರೂ ನ ನೋಟುಗಳನ್ನು ರದ್ದುಗೊಳಿಸಿದಾಗ ಇದಕ್ಕೂ ಹೆಚ್ಚಿನ ಆಭರಣ ಖರೀದಿಯಾಗಿತ್ತು ಎಂದು ಆಭರಣ ವ್ಯಾಪಾರಿಗಳು ಹೇಳುತ್ತಾರೆ. 2,000 ರೂ ಮುಖಬೆಲೆಯ ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಿಗೆ ಬದಲಾಯಿಸಿಕೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ನ ಶುಕ್ರವಾರದ ಪ್ರಕಟಣೆಯ ಬಳಿಕ ಜನರು ಚಿನ್ನ […]
ದೆಹಲಿ ಸರ್ಕಾರ ವರ್ಸಸ್ ಲೆಫ್ಟಿನೆಂಟ್ ಗವರ್ನರ್: ಕೇಂದ್ರ ಸರ್ಕಾರದಿಂದ ಸುಗ್ರೀವಾಜ್ಞೆ; ಶಾಶ್ವತ ಪ್ರಾಧಿಕಾರ ಅಸ್ತಿತ್ವಕ್ಕೆ

ನವದೆಹಲಿ: ವರ್ಗಾವಣೆ ಪೋಸ್ಟಿಂಗ್, ವಿಜಿಲೆನ್ಸ್ ಮತ್ತು ಇತರ ಪ್ರಾಸಂಗಿಕ ವಿಷಯಗಳಿಗೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಶಿಫಾರಸುಗಳನ್ನು ಮಾಡಲು ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ನ್ಯಾಶನಲ್ ಕ್ಯಾಪಿಟಲ್ ಸರ್ವಿಸ್ ಅಥಾರಿಟಿ ಅನ್ನು ಸ್ಥಾಪಿಸಿದೆ. ಕಳೆದ ವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಸೇರಿದಂತೆ ಸೇವಾ ವಿಷಯಗಳಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರವನ್ನು ಕಸಿದುಕೊಂಡು ದೆಹಲಿ ಸರ್ಕಾರಕ್ಕೆ ಕಾರ್ಯನಿರ್ವಾಹಕ ಅಧಿಕಾರವನ್ನು ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ […]