ದೆಹಲಿ ಸರ್ಕಾರ ವರ್ಸಸ್ ಲೆಫ್ಟಿನೆಂಟ್ ಗವರ್ನರ್: ಕೇಂದ್ರ ಸರ್ಕಾರದಿಂದ ಸುಗ್ರೀವಾಜ್ಞೆ; ಶಾಶ್ವತ ಪ್ರಾಧಿಕಾರ ಅಸ್ತಿತ್ವಕ್ಕೆ

ನವದೆಹಲಿ: ವರ್ಗಾವಣೆ ಪೋಸ್ಟಿಂಗ್, ವಿಜಿಲೆನ್ಸ್ ಮತ್ತು ಇತರ ಪ್ರಾಸಂಗಿಕ ವಿಷಯಗಳಿಗೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಶಿಫಾರಸುಗಳನ್ನು ಮಾಡಲು ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ನ್ಯಾಶನಲ್ ಕ್ಯಾಪಿಟಲ್ ಸರ್ವಿಸ್ ಅಥಾರಿಟಿ ಅನ್ನು ಸ್ಥಾಪಿಸಿದೆ. ಕಳೆದ ವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಸೇರಿದಂತೆ ಸೇವಾ ವಿಷಯಗಳಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರವನ್ನು ಕಸಿದುಕೊಂಡು ದೆಹಲಿ ಸರ್ಕಾರಕ್ಕೆ ಕಾರ್ಯನಿರ್ವಾಹಕ ಅಧಿಕಾರವನ್ನು ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ […]
2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಆರ್ ಬಿ ಐ ನಿರ್ಧಾರ

ನವದೆಹಲಿ: 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದಾಗ್ಯೂ, ನೋಟುಗಳು ಸೆಪ್ಟೆಂಬರ್ 30 ರ ವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಕೇಂದ್ರ ಬ್ಯಾಂಕ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ. ಬ್ಯಾಂಕ್ ಗಳು 2000 ಮುಖಬೆಲೆಯ ನೋಟಗಳನ್ನು ಜಾರಿಗೊಳಿಸದಂತೆ ತಕ್ಷಣ ದಿಂದ ಜಾರಿಗೆ ಬರುವಂತೆ ಆರ್ ಬಿ ಐ ಆದೇಶ ಹೊರಡಿಸಿದೆ. ಸಾರ್ವಜನಿಕರು ತಮ್ಮಲ್ಲಿರುವ 2000 ರೂ ನೋಟುಗಳನ್ನು ಬ್ಯಾಂಕ್ ಗಳಿಗೆ ನೀಡಿ ಇತರ ಮುಖ ಬೆಲೆ ನೋಟು ಗಳನ್ನು ಪಡೆಯಬಹುದು […]
ದಕ್ಷಿಣ ಪೆಸಿಫಿಕ್ ಸಮುದ್ರದಲ್ಲಿ 7.8 ತೀವ್ರತೆಯ ಭೂಕಂಪ: ಹತ್ತಿರದ ರಾಷ್ಟ್ರಗಳಿಗೆ ಸುನಾಮಿ ಎಚ್ಚರಿಕೆ

ಶುಕ್ರವಾರ ದಕ್ಷಿಣ ಪೆಸಿಫಿಕ್‌ನ ಲಾಯಲ್ಟಿ ದ್ವೀಪಗಳ ಆಗ್ನೇಯ ಭಾಗದಲ್ಲಿ ಪೂರ್ವಾಭಾವಿ 7.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದೆ. ವನವಾಟು, ಫಿಜಿ ಮತ್ತು ಕಿರಿಬಾಟಿ ಸೇರಿದಂತೆ ಹತ್ತಿರದ ರಾಷ್ಟ್ರಗಳಿಗೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಯುಎಸ್ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರವು ಫಿಜಿ, ವನವಾಟು ಮತ್ತು ನ್ಯೂ ಕ್ಯಾಲೆಡೋನಿಯಾದ ನಡುವೆ ಇರುವ ಭೂಕಂಪದ ಕೇಂದ್ರದಿಂದ 1,000 ಕಿಲೋಮೀಟರ್ (621 ಮೈಲುಗಳು) ಒಳಗೆ ಇರುವ ಕರಾವಳಿಗಳಿಗೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಭೂಕಂಪವು 38 ಕಿಲೋಮೀಟರ್ […]
ಮೇ. 28 ರಂದು ನೂತನ ಸಂಸತ್ ಭವನ ಉದ್ಘಾಟನೆ ನಡೆಸಲಿರುವ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನೆಗೆ ದಿನಗಣನೆ ನಡೆಯುತ್ತಿದ್ದು, ಬಹುತೇಕ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮ ವರದಿಯಾಗಿದೆ. ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಕಟ್ಟಡದ ಉದ್ಘಾಟನೆ ನಡೆಯಲಿದೆ ಎನ್ನಲಾಗಿದೆ. ನಾಲ್ಕು ಅಂತಸ್ತಿನ ಸಂಸತ್ ಭವನದಲ್ಲಿ 1,224 ಸಂಸತ್ ಸದಸ್ಯರಿಗೆ ಆಸನ ವ್ಯವಸ್ಥೆ ಇದ್ದು, ಅತ್ಯಾಧುನಿಕ ಸವಲತ್ತು ಮತ್ತು ಸುರಕ್ಷತೆಯನ್ನು ಒಳಗೊಂಡಿದೆ. ಲೋಕಸಭೆ […]
ಖಾತೆಗಳ ಮರುಹಂಚಿಕೆ: ಅರ್ಜುನ್ ರಾಮ್ ಮೇಘವಾಲ್ ಗೆ ಕಾನೂನು; ಕಿರಣ್ ರಿಜಿಜುಗೆ ಭೂ ವಿಜ್ಞಾನ ಖಾತೆ

ನವದೆಹಲಿ: ಕಿರಣ್ ರಿಜಿಜು ಅವರನ್ನು ಗುರುವಾರ ಕೇಂದ್ರ ಕಾನೂನು ಸಚಿವ ಸ್ಥಾನದಿಂದ ತೆರವುಗೊಳಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ. ಅವರ ಸ್ಥಾನಕ್ಕೆ ಅರ್ಜುನ್ ರಾಮ್ ಮೇಘವಾಲ್ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಿಗೆ ಖಾತೆಗಳನ್ನು ಮರುಹಂಚಿಕೆ ಮಾಡಿದ್ದಾರೆ. “ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ಕಿರಣ್ ರಿಜಿಜು ಅವರಿಗೆ ನಿಯೋಜಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ರಿಜಿಜು ಜುಲೈ 8, 2021 ರಂದು ಕಾನೂನು ಮತ್ತು […]