ಖಾತೆಗಳ ಮರುಹಂಚಿಕೆ: ಅರ್ಜುನ್ ರಾಮ್ ಮೇಘವಾಲ್ ಗೆ ಕಾನೂನು; ಕಿರಣ್ ರಿಜಿಜುಗೆ ಭೂ ವಿಜ್ಞಾನ ಖಾತೆ

ನವದೆಹಲಿ: ಕಿರಣ್ ರಿಜಿಜು ಅವರನ್ನು ಗುರುವಾರ ಕೇಂದ್ರ ಕಾನೂನು ಸಚಿವ ಸ್ಥಾನದಿಂದ ತೆರವುಗೊಳಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ. ಅವರ ಸ್ಥಾನಕ್ಕೆ ಅರ್ಜುನ್ ರಾಮ್ ಮೇಘವಾಲ್ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಿಗೆ ಖಾತೆಗಳನ್ನು ಮರುಹಂಚಿಕೆ ಮಾಡಿದ್ದಾರೆ. “ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ಕಿರಣ್ ರಿಜಿಜು ಅವರಿಗೆ ನಿಯೋಜಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ರಿಜಿಜು ಜುಲೈ 8, 2021 ರಂದು ಕಾನೂನು ಮತ್ತು […]

26/11 ದಾಳಿಯ ಮುಖ್ಯ ಆರೋಪಿ ತಹವ್ವುರ್ ರಾಣಾ ಹಸ್ತಾಂತರಕ್ಕೆ ಯುಎಸ್ ಕೋರ್ಟ್ ಅಸ್ತು

ನವದೆಹಲಿ: 2008 ರ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿರುವ ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೇರಿಕಾ ಸರ್ಕಾರದ ಮೂಲಕ ಭಾರತ ಸರ್ಕಾರವು ಸಲ್ಲಿಸಿದ್ದ ಮನವಿಗೆ ಅಮೇರಿಕಾದ ನ್ಯಾಯಾಲಯವು ಒಪ್ಪಿಗೆ ನೀಡಿದೆ. ಹಸ್ತಾಂತರದ ದೃಷ್ಟಿಯಿಂದ ಜೂನ್ 10, 2020 ರಂದು, 62 ವರ್ಷದ ರಾಣಾನನ್ನು ತಾತ್ಕಾಲಿಕವಾಗಿ ಬಂಧಿಸುವಂತೆ ಭಾರತವು ದೂರು ಸಲ್ಲಿಸಿತು. ಬೈಡೆನ್ ಆಡಳಿತವು ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ಬೆಂಬಲಿಸಿ ಅನುಮೋದಿಸಿತು. “ನ್ಯಾಯಾಲಯವು ವಿನಂತಿಯನ್ನು ಬೆಂಬಲಿಸಿ ಮತ್ತು ವಿರೋಧವಾಗಿ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು […]

ಮೇ 31 ರಿಂದ 10 ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ 31 ರಿಂದ 10 ದಿನಗಳ ಕಾಲ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. ಜೂನ್ 4 ರಂದು, ರಾಹುಲ್ ಗಾಂಧಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಸುಮಾರು 5,000 ಅನಿವಾಸಿ ಭಾರತೀಯರ ರ‍್ಯಾಲಿ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ, ಅವರು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಪ್ಯಾನೆಲ್ ಡಿಸ್ಕಶನ್ ಮತ್ತು ಭಾಷಣಕ್ಕಾಗಿ ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾಗೆ ತೆರಳಲಿದ್ದಾರೆ. ಅವರು […]

ಮಲ್ಲಿಕಾರ್ಜುನ ಖರ್ಗೆ-ಭಜರಂಗದಳ ಪ್ರಕರಣ: ಪಂಜಾಬ್ ನ ಸಂಗ್ರೂರ್ ಕೋರ್ಟಿನಿಂದ ಸಮನ್ಸ್

ಸಂಗ್ರೂರ್‌: ಹಿಂದೂ ಸುರಕ್ಷಾ ಪರಿಷತ್‌ನ ಸಂಸ್ಥಾಪಕ ಹಿತೇಶ್ ಭಾರದ್ವಾಜ್ ಅವರು ಸಲ್ಲಿಸಿರುವ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಂಜಾಬ್‌ನ ಸಂಗ್ರೂರ್‌ನ ನ್ಯಾಯಾಲಯವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮನ್ಸ್ ನೀಡಿದೆ. ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಪಿ.ಎಫ್.ಐ ಸಂಘಟನೆಯ ಜೊತೆ ಸಮೀಕರಿಸಿತ್ತು ಮತ್ತು ದ್ವೇಷ ಭಾವನೆಗಳನ್ನು ಪ್ರಚೋದಿಸುವ ಸಂಘಟನೆಗಳನ್ನು ನಿಷೇಧಿಸುವ […]

ಸಿಬಿಐ ಮುಂದಿನ ನಿರ್ದೇಶಕರಾಗಿ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಆಯ್ಕೆ

ನವದೆಹಲಿ: ಕೇಂದ್ರೀಯ ತನಿಖಾ ದಳದ (ಸಿಬಿಐ) ಮುಂದಿನ ನಿರ್ದೇಶಕರಾಗಿ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರನ್ನು ಆಯ್ಕೆ ಮಾಡಲಾಗಿದೆ. ಹಾಲಿ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿಯು ಮೇ 25 ರಂದು ಕೊನೆಗೊಳ್ಳಲಿದೆ. ಸೂದ್ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಮಾರ್ಚ್‌ನಲ್ಲಿ ಆರೋಪಗಳನ್ನು ಮಾಡಿದ್ದರು. ಶಿವಕುಮಾರ್ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನು ಬಂಧಿಸುವಂತೆ […]