ಭಾಷಣ ಮಾಡುವಾಗ ಜಾಗರೂಕರಾಗಿರಿ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸಲಹೆ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಚುನಾವಣಾ ಆಯೋಗವು (EC) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭವಿಷ್ಯದಲ್ಲಿ ಸಾರ್ವಜನಿಕವಾಗಿ ಪ್ರತಿಕ್ರಿಯೆಗಳನ್ನು ನೀಡುವಾಗ “ಹೆಚ್ಚು ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರುವಂತೆ” ಮತ್ತು ಚುನಾವಣಾ ಪ್ರಚಾರದ ಸಮಯದಲ್ಲಿ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳಿಗೆ ಆಯೋಗವು ಇತ್ತೀಚೆಗೆ ನೀಡಿದ ಸಲಹೆಯನ್ನು ಅನುಸರಿಸುವಂತೆ ತಿಳಿಸಿದೆ. 2023ರ ನವೆಂಬರ್‌ನಲ್ಲಿ ರಾಜಸ್ಥಾನದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಾಗ ರಾಹುಲ್ ಗಾಂಧಿಯು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾಡಿದ ಟಿಪ್ಪಣಿಗೆ […]
ಸಂದೇಶ್‌ಖಾಲಿ ಜಾರಿ ನಿರ್ದೇಶನಾಲಯ ತಂಡದ ಮೇಲೆ ದಾಳಿ ಪ್ರಕರಣ ಸಿಬಿಐಗೆ ಹಸ್ತಾಂತರಿಸಿದ ಕಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ಭ್ರಷ್ಟಾಚಾರ ಪ್ರಕರಣ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ಮಾಜಿ ನಾಯಕ ಶೇಖ್ ಷಹಜಹಾನ್ ಮನೆಯಲ್ಲಿ ತನಿಖೆ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ED) ತಂಡದ ಮೇಲೆ ದಾಳಿ ನಡೆಸಿದ ಸಂದೇಶ್‌ಖಾಲಿ ಘಟನೆಯ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಕೇಂದ್ರೀಯ ತನಿಖಾ ದಳ (CBI)ಕ್ಕೆ ವಹಿಸಿದೆ ಮತ್ತು ಷಹಜಹಾನ್‌ನನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವಂತೆ ಪೊಲೀಸರಿಗೆ ಸೂಚಿಸಿದೆ. ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರನ್ನೊಳಗೊಂಡ ವಿಭಾಗೀಯ ಪೀಠವು ನಝತ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 8 […]
ಚೆನ್ನೈನಲ್ಲಿ ಎನ್‌ಐಎ ತಂಡ ದಾಳಿ: ಬೆಂಗಳೂರು ಸ್ಪೋಟ ಪ್ರಕರಣದ ಐವರು ಶಂಕಿತರು ವಶಕ್ಕೆ

ಚೆನ್ನೈ: ಎನ್‌ಐಎ ತಂಡ ಚೆನ್ನೈನಲ್ಲಿ ದಾಳಿ ನಡೆಸಿದ್ದು, ರಾಮೇಶ್ವರಂನ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಚೆನ್ನೈ ನಗರದ ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ರಾತ್ರಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಚೆನ್ನೈ ನಗರದ ದೇವಸ್ಥಾನವೊಂದರ ಬಳಿ ಐವರನ್ನು ಎನ್‌ಐಎ ವಶಕೆ ಪಡೆದಿದೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಬೆಂಗಳೂರು ಜೈಲಿನಲ್ಲಿ ಮೂಲಭೂತವಾದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 7 ರಾಜ್ಯಗಳ ವಿವಿಧ […]
ಮತದಾನ ಯಾ ಭಾಷಣಕ್ಕಾಗಿ ಲಂಚ; ಜನಪ್ರತಿನಿಧಿಗಳಿಗೆ ಕಾನೂನು ವಿನಾಯಿತಿ ಇಲ್ಲ: ಸುಪ್ರೀಂ ತೀರ್ಪು

ನವದೆಹಲಿ: ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಹೇಳಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಏಳು ಮಂದಿ ಇದ್ದ ಸಾಂವಿಧಾನಿಕ ಪೀಠವು, 1998ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಪಂಚ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಸರ್ವಾನುಮತದಿಂದ ರದ್ದು ಮಾಡಿದೆ. ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಶಾಸಕರಿಗೆ ಆ ತೀರ್ಪಿನಲ್ಲಿ ಕಾನೂನು […]
ಲೋಕಸಭೆ ಚುನಾವಣೆ: ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ; ವಾರಾಣಾಸಿಯಿಂದ ಮೋದಿ ಮತ್ತೊಮ್ಮೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆಯೇ ಬಿಜೆಪಿಯು ಹಲವು ಬದಲಾವಣೆಗಳನ್ನು ಮಾಡಿದೆ. ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ವಾರಾಣಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್‌ನ ಗಾಂಧಿನಗರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಖನೌ, ಸ್ಮೃತಿ ಇರಾನಿ ಅಮೇಥಿಯಿಂದ, ಕಿರಣ್ ರಿಜಿಜು ಅರುಣಾಚಲ ಪಶ್ಚಿಮ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವಿಯ, […]