ಏಪ್ರಿಲ್‌ 8ರಂದು ಮಂಗಳೂರಿನಿಂದ ಮುಂಬೈಗೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ವಿಶೇಷ ರೈಲು…!!

ನವದೆಹಲಿ: ಮಂಗಳೂರು ಜಂಕ್ಷನ್‌ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ಏಕಮುಖ ವಿಶೇಷ ರೈಲನ್ನು ಭಾರತೀಯ ರೈಲ್ವೆ ಇಲಾಖೆ ಘೋಷಿಸಿದೆ. ಈ ಮೂಲಕ ಮಂಗಳೂರಿನಿಂದ ಮುಂಬೈಗೆ ಪ್ರಯಾಣಿಸುವ ಜನರು ಈಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 06007 ಸಂಖ್ಯೆಯ ರೈಲನ್ನು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ಆರಂಭಿಸಲಾಗುತ್ತಿದೆ. ಮೂಲಗಳ ಪ್ರಕಾರ, ಮಂಗಳೂರು ಜಂಕ್ಷನ್‌ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ಹೊರಡುವ ವಿಶೇಷ ರೈಲು ಮಂಗಳೂರಿನಿಂದ ಏಪ್ರಿಲ್‌ 8ರಂದು ಸಂಜೆ 6.10ಕ್ಕೆ ಹೊರಟು 9ರಂದು ಮಧ್ಯಾಹ್ನ 1.15ಕ್ಕೆ ಮುಂಬೈ ತಲುಪಲಿದೆ. […]

ವಿಶ್ವಸಂಸ್ಥೆಯ ಅತ್ಯುನ್ನತ ಅಂಕಿಅಂಶ ಸಂಸ್ಥೆಗೆ ಆಯ್ಕೆಯಾದ ಭಾರತ

ನವದೆಹಲಿ: ನಾಲ್ಕು ವರ್ಷಗಳ ಅವಧಿಗೆ ವಿಶ್ವಸಂಸ್ಥೆಯ ಅತ್ಯುನ್ನತ ಅಂಕಿಅಂಶ ಸಂಸ್ಥೆಗೆ ಭಾರತವನ್ನು ಆಯ್ಕೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಹೇಳಿದ್ದಾರೆ. ಇದೀಗ ಪೂರ್ಣಗೊಂಡಿರುವ ಯುಎನ್ ಸ್ಟ್ಯಾಟಿಸ್ಟಿಕಲ್ ಕಮಿಷನ್ ಚುನಾವಣೆಯಲ್ಲಿ ಭಾರತವು 53 ಮತಗಳಲ್ಲಿ 46 ಮತಗಳನ್ನು ಗಳಿಸುವ ಮೂಲಕ ಪ್ರತಿಸ್ಪರ್ಧಿಗಳಾದ ಆರ್.ಓ.ಕೆ(23) ಚೀನಾ (19), ಮತ್ತು ಯುಎಇ (15) ನಂತಹ ದೇಶಗಳನ್ನು ಹಿಂದಿಕ್ಕಿ ಜಯಗಳಿಸಿದೆ. 4 ವರ್ಷಗಳ ಅವಧಿಯು 1 ಜನವರಿ 2024 ರಂದು ಪ್ರಾರಂಭವಾಗುತ್ತದೆ. ಇದು ಬಹುಕೋನ ಚುನಾವಣೆಯಾಗಿದ್ದು, ಎರಡು ಸ್ಥಾನಗಳಿಗೆ […]

ಸುಧಾ ಮೂರ್ತಿ, ಎಸ್.ಎಲ್ ಭೈರಪ್ಪ ಸೇರಿ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ(ಏ.05): ಗಣರಾಜ್ಯೋತ್ಸವದಿಂದ ಘೋಷಿಸಲಾದ ಪದ್ಮ ಪ್ರಶಸ್ತಿ ಸಾಧಕರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಮಾರ್ಚ್ 22 ರಂದು ಮೊದಲ ಹಂತದಲ್ಲಿ 54 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು. ಇಂದು ಇನ್ನುಳಿದ 54 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಕರ್ನಾಟಕದ ಹೆಮ್ಮೆಯ, ಇಸ್ಫೋಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ ಇಂದು ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸಾಹಿತಿ, ಕನ್ನಡದ ಪ್ರಸಿದ್ಧ ಕಾದಂಬರಿಕಾರ ಎಸ್‌ಎಲ್ ಬೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಉಮ್ಮತ್ತಾಟ್‌ ನೃತ್ಯ ಕಲಾವಿದೆ ಕೊಡಗಿನ ರಾಣಿ […]

ತನಿಖಾ ಸಂಸ್ಥೆಗಳಿಂದ ಬಂಧನದ ಅಧಿಕಾರ ದುರುಪಯೋಗದ ವಿರುದ್ಧ ಮಾರ್ಗಸೂಚಿ: ವಿರೋಧ ಪಕ್ಷಗಳ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಪ್ರತಿಪಕ್ಷ ನಾಯಕರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ‘ನಿರಂಕುಶವಾಗಿ ಬಳಸಲಾಗುತ್ತಿದೆ’ ಎನ್ನುವ ಆರೋಪ ಕೇಳಿಬರುತ್ತಿದ್ದು, ಸಿಬಿಐ ಮತ್ತು ಇಡಿ ಬಂಧನ ಅಧಿಕಾರದ ದುರುಪಯೋಗದ ವಿರುದ್ಧ ಮಾರ್ಗಸೂಚಿಗಳನ್ನು ಕೋರಿ 14 ವಿರೋಧ ಪಕ್ಷದ ರಾಜಕೀಯ ಪಕ್ಷಗಳು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.  ಬಂಧನ, ವಿಚಾರಣೆ ಮತ್ತು ಜಾಮೀನನ್ನು ನಿಯಂತ್ರಿಸುವ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಬಯಸಿ ಕಾಂಗ್ರೆಸ್ ನೇತೃತ್ವದಲ್ಲಿ 14 ವಿರೋಧ ಪಕ್ಷಗಳು ಸಲ್ಲಿಸಿದ್ದ […]

ಭ್ರಷ್ಟರು ಎಷ್ಟೇ ಪ್ರಭಾವಿಗಳಾಗಿದ್ದರೂ ಬಿಡಬೇಡಿ ಸದೆಬಡಿಯಿರಿ: ಪ್ರಧಾನಿ ಮೋದಿ

ನವದೆಹಲಿ: ಕೇಂದ್ರೀಯ ತನಿಖಾ ದಳದ ವಜ್ರ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯಕ್ಕೆ ಭ್ರಷ್ಟಾಚಾರ ಅತಿ ದೊಡ್ಡ ತಡೆಗೋಡೆಯಾಗಿದ್ದು, ಭ್ರಷ್ಟರು ಎಷ್ಟೇ ಪ್ರಭಾವಿಗಳಾಗಿದ್ದರೂ ಸುಮ್ಮನೆ ಬಿಡಬೇಡಿ ಸದೆಬಡಿಯಿರಿ ಎಂದು ಹೇಳಿದರು. ಭ್ರಷ್ಟರ ಅಧಿಕಾರ ಹಾಗೂ ಅವರ ವಾತಾವರಣಗಳನ್ನು ಕಂಡು ತನಿಖಾ ಸಂಸ್ಥೆಗಳು ಹಿಂಜರಿಯಬೇಕಾಗಿಲ್ಲ. ಭ್ರಷ್ಟಾಚಾರ ನಡೆಸುವ ವ್ಯಕ್ತಿಯನ್ನು ಸುಮ್ಮನೆ ಬಿಡಬಾರದು ಎನ್ನುವುದು ದೇಶದ ಜನರ ಹೆಬ್ಬಯಕೆ ಕೂಡ ಹೌದು. ನಿಮ್ಮ ಪ್ರಯತ್ನದಲ್ಲಿ ಯಾವುದೇ ಕೊರತೆ ಇರಬಾರದು. ಯಾವುದೇ ಭ್ರಷ್ಟಾಚಾರಿಯನ್ನು ಸುಮ್ಮನೆ […]