LPG E-KYC ಗಡುವು ವಿಸ್ತರಣೆ: ಬರೀ ಎರಡೇ ನಿಮಿಷದಲ್ಲಿ ಮನೆಯಲ್ಲೇ LPG e-KYC ನೀವೇ ಮಾಡಬಹುದು!

ಸಬ್ಸಿಡಿ ದರದಲ್ಲಿ ಅಡುಗೆ ಅನಿಲ ಪಡೆಯುತ್ತಿರುವ LPG ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. LPG e-KYC ಪೂರ್ಣಗೊಳಿಸಲು ಈ ಮೊದಲು ನೀಡಲಾಗಿದ್ದ ಆಗಸ್ಟ್ 16ರ ಗಡುವನ್ನು ಆಗಸ್ಟ್ 23ರವರೆಗೆ ವಿಸ್ತರಿಸಲಾಗಿದೆ. ನೀವು ಇನ್ನೂ LPG e-KYC ಪೂರ್ಣಗೊಳಿಸದಿದ್ದರೆ ಆತಂಕಪಡುವ ಅಗತ್ಯವಿಲ್ಲ. ಇಂಡೇನ್, ಎಚ್‌ಪಿ ಗ್ಯಾಸ್ ಹಾಗೂ ಭಾರತ್ ಗ್ಯಾಸ್ ಗ್ರಾಹಕರು ತಮ್ಮ ಮೊಬೈಲ್‌ನಲ್ಲೇ e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. LPG e-KYC ಏಕೆ ಅಗತ್ಯ? LPG ಕಾಳಸಂತೆ ಹಾಗೂ ದುರ್ಬಳಕೆಯನ್ನು ತಡೆಯುವುದು ಮತ್ತು ಅಡುಗೆ ಅನಿಲ […]
ತಮಿಳುನಾಡು ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಗುಡ್‌ನ್ಯೂಸ್: 1 ವರ್ಷ ಹೆರಿಗೆ ರಜೆ ಘೋಷಣೆ

ಚನ್ನೈ: ತಮಿಳುನಾಡು ಸರ್ಕಾರವು ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಮಹತ್ವದ ಸಿಹಿಸುದ್ದಿ ನೀಡಿದೆ. ಮೂರನೇ ಮಗುವಿನ ಜನನದ ಸಂದರ್ಭದಲ್ಲಿ ನೀಡಲಾಗುವ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳಿಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಪ್ರಸ್ತುತ, ಎರಡು ಮಕ್ಕಳಿಗಿಂತ ಕಡಿಮೆ ಮಕ್ಕಳಿರುವ ವಿವಾಹಿತ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ 365 ದಿನಗಳ ಹೆರಿಗೆ ರಜೆ ನೀಡಲಾಗುತ್ತಿದೆ. ಆದರೆ, ಈಗಾಗಲೇ ಎರಡು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳಿರುವ ಮಹಿಳಾ ಉದ್ಯೋಗಿಗಳಿಗೆ ಮೂರನೇ ಮಗುವಿನ ಸಂದರ್ಭದಲ್ಲಿ ಕೇವಲ 12 ವಾರಗಳ ಹೆರಿಗೆ ರಜೆ ನೀಡಲಾಗುತ್ತಿತ್ತು. […]
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ: ಯಾರಿಗೆಲ್ಲಾ ಒಲಿಯಿತು ಪ್ರತಿಷ್ಠಿತ ಅರ್ಜುನ ಪ್ರಶಸ್ತಿ?

ನವದೆಹಲಿ: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಕ್ರೀಡಾ ಸಚಿವಾಲಯ ಪ್ರಕಟಿಸಿದ್ದು, ಈ ಬಾರಿ 17 ಕ್ರೀಡಾಪಟುಗಳಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ನೀಡಲು ಅಂತಿಮ ಅನುಮೋದನೆ ನೀಡಲಾಗಿದೆ. ಆಯ್ಕೆ ಸಮಿತಿ ಶಿಫಾರಸು ಮಾಡಿದ್ದ ಪಟ್ಟಿಯನ್ನು ಸುಮಾರು ಆರು ತಿಂಗಳ ಬಳಿಕ ಮರುಪರಿಶೀಲಿಸಿದ ಸಚಿವಾಲಯ, ಪ್ರಶಸ್ತಿಯ ಘನತೆ ಹಾಗೂ ಅರ್ಹತೆಯನ್ನು ಪರಿಗಣಿಸಿ 24 ಹೆಸರುಗಳ ಪೈಕಿ 17 ಮಂದಿಯನ್ನು ಅಂತಿಮಗೊಳಿಸಿದೆ. ಇದೇ ವೇಳೆ, ಈ ಬಾರಿ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿಗೆ ಯಾವುದೇ ಕ್ರೀಡಾಪಟುವನ್ನು ಆಯ್ಕೆ ಮಾಡಲಾಗಿಲ್ಲ. […]
ಸೌದಿ ಅರೇಬಿಯಾದಲ್ಲಿ ಭಿಕ್ಷೆ ಬೇಡದಿರಿ, ಗಡೀಪಾರು ಮಾಡಬಹುದು: ಹಜ್ ಯಾತ್ರಿಕರಿಗೆ ಪಾಕಿಸ್ತಾನ ಖಡಕ್ ಎಚ್ಚರಿಕೆ

ಪಾಕಿಸ್ತಾನಿ ಪ್ರಜೆಗಳು ಸೌದಿ ಕಾನೂನುಗಳು ಮತ್ತು ಅವರ ವೀಸಾಗಳಿಗೆ ಲಗತ್ತಿಸಲಾದ ಷರತ್ತುಗಳನ್ನು ಸಂಪೂರ್ಣವಾಗಿ ಪಾಲಿಸಬೇಕೆಂದು ಒತ್ತಾಯಿಸಿದೆ ಇಸ್ಲಾಮಾಬಾದ್: ಹಜ್ ಯಾತ್ರೆಗಾಗಿ ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಪಾಕಿಸ್ತಾನ ಕಟ್ಟುನಿಟ್ಟಿನ ಸಲಹೆ ನೀಡಿದೆ. ಭಿಕ್ಷಾಟನೆ, ಅನಧಿಕೃತ ಹಣ ಸಂಗ್ರಹಣೆ ಮತ್ತು ಸೌದಿ ವೀಸಾ ನಿಯಮಗಳ ಉಲ್ಲಂಘನೆಯ ವಿರುದ್ಧ ಪಾಕ್ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಸೌದಿ ಅರೇಬಿಯಾದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯು, ಉಮ್ರಾ ಯಾತ್ರಿಕರು ಮತ್ತು ಕಾರ್ಮಿಕರನ್ನು ಗುರಿಯಾಗಿಟ್ಟುಕೊಂಡು ಸಂದೇಶವೊಂದನ್ನು ಕಳುಹಿಸಿದೆ. ಪಾಕಿಸ್ತಾನಿ ಪ್ರಜೆಗಳು ಸೌದಿ ಕಾನೂನುಗಳು ಮತ್ತು […]
ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ, 196 ಕ್ಕೂ ಹೆಚ್ಚು ಮಂದಿ ಸಾವು! ಹಲವಾರು ಮಂದಿ ನಾಪತ್ತೆ!

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮುಂಗಾರು ಮಳೆ ಹಾಗೂ ನೈಸರ್ಗಿಕ ವಿಕೋಪಗಳ ಅಬ್ಬರ ಮುಂದುವರಿದಿದ್ದು, ದಿನದಿಂದ ದಿನಕ್ಕೆ ಹಾನಿಯ ಪ್ರಮಾಣ ಹೆಚ್ಚುತ್ತಿದೆ. ರಾಜ್ಯದಲ್ಲಿ ನೈಸರ್ಗಿಕ ವಿಕೋಪಗಳು ಹಾಗೂ ರಸ್ತೆ ಅಪಘಾತಗಳಿಂದ ಈವರೆಗೆ 196 ಮಂದಿ ಮೃತಪಟ್ಟಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೋಮವಾರ ಸಂಜೆ 6 ಗಂಟೆಯ ವರದಿ ಪ್ರಕಾರ, ಮೃತಪಟ್ಟವರ ಪೈಕಿ 80 ಮಂದಿ ನೈಸರ್ಗಿಕ ವಿಕೋಪಗಳಲ್ಲಿ ಹಾಗೂ 116 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. 299 ಮಂದಿ ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆಯೂ ಶಿಮ್ಲಾ […]