ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ನೇಮಕ

ಹೊಸದಿಲ್ಲಿ: ಭಾರತದ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಅರುಣ್ ಗೋಯೆಲ್ ಅವರನ್ನು ಶನಿವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅವರು ಪಂಜಾಬ್ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗವು 3 ಆಯುಕ್ತರನ್ನು ಒಳಗೊಂಡ ಬಹು-ಸದಸ್ಯ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಅವರು ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರನ್ನು ಸೇರಿಕೊಳ್ಳಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ […]

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್: 40ಕ್ಕೂ ಹೆಚ್ಚು ವಾಹನಗಳು ಜಖಂ, 6 ಮಂದಿಗೆ ಗಾಯ

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯಲ್ಲಿ ಭಾನುವಾರದಂದು ರಾತ್ರಿ ಟ್ರಕ್ ಒಂದು ನಿಯಂತ್ರಣ ತಪ್ಪಿ ಸೇತುವೆಯ ಮೇಲೆ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಗಾಯಗೊಂಡಿದ್ದಾರೆ, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. #WATCH | Maharashtra: 6 people were injured in an accident at Navale bridge on the Pune-Bengaluru highway in Pune last night where a truck lost control & rammed […]

ಕಾಶಿ-ತಮಿಳು ಸಂಗಮ ಕಾರ್ಯಕ್ರಮ ದೇಶವನ್ನು ಏಕಸೂತ್ರದಲ್ಲಿ ಬೆಸೆಯುವ ಪ್ರಯತ್ನ: ಪ್ರಧಾನಿ ಮೋದಿ

ವಾರಣಾಸಿ: ಇಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾಶಿ-ತಮಿಳು ಸಂಗಮವನ್ನು ಶನಿವಾರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಶಿ-ತಮಿಳು ಸಂಗಮವು ಗಂಗಾ-ಯಮುನಾ ಸಂಗಮದಷ್ಟು ಪವಿತ್ರವಾಗಿದೆ ಎಂದು ಹೇಳಿದರು. ತಮಿಳಿನ ರೂಪದಲ್ಲಿ ಪ್ರಪಂಚದ ಅತ್ಯಂತ ಹಳೆಯ ಭಾಷೆ ನಮ್ಮಲ್ಲಿದೆ ಎಂಬುದು ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ. ಈ ಪರಂಪರೆಯನ್ನು ಉಳಿಸುವುದರ ಜೊತೆಗೆ ಶ್ರೀಮಂತಗೊಳಿಸಬೇಕು. ಕಾಶಿ-ತಮಿಳು ಸಂಗಮ ಕಾರ್ಯಕ್ರಮವು ಶತಮಾನಗಳ-ಹಳೆಯ ಜ್ಞಾನದ ಬಂಧ ಮತ್ತು ಉತ್ತರ ಮತ್ತು ದಕ್ಷಿಣದ ನಡುವಿನ ಪ್ರಾಚೀನ ನಾಗರಿಕತೆಯ ಸಂಬಂಧವನ್ನು ಮರುಶೋಧಿಸುವ ಗುರಿಯನ್ನು ಹೊಂದಿದೆ. ಭಾಷೆಯ ಆಧಾರದ […]

ತಿಹಾರ್ ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಫೂಟ್ ಮಸಾಜ್: ಸಿಸಿಟಿವಿ ದೃಶ್ಯಾವಳಿ ವೈರಲ್

ನವದೆಹಲಿ: ದೆಹಲಿಯ ಮಾಜಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ಅವರ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ತಿಹಾರ್ ಜೈಲಿನಲ್ಲಿ ಕಾಲಿಗೆ ಮಸಾಜ್ ತೆಗೆದುಕೊಳ್ಳುತ್ತಿದ್ದಾರೆ. ವೈರಲ್ ಆಗಿರುವ ಈ ವೀಡಿಯೋದಲ್ಲಿ, ಜೈನ್ ತನ್ನ ಹಾಸಿಗೆಯ ಮೇಲೆ ಮಲಗಿ ಪೇಪರ್‌ಗಳನ್ನು ಓದುತ್ತಿದ್ದಾರೆ ಮತ್ತು ಅವರ ಪಕ್ಕದಲ್ಲಿ ಒಬ್ಬ ವ್ಯಕ್ತಿ ಅವರಿಗೆ ಫೂಟ್ ಮಸಾಜ್ ನೀಡುತ್ತಿದ್ದಾನೆ. ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಕಾಲಿಗೆ ಮಸಾಜ್ ತೆಗೆದುಕೊಳ್ಳುತ್ತಿರುವುದನ್ನು ತೋರಿಸುವ ಸಿಸಿಟಿವಿ […]

ದೇಶದ ಮೊದಲ ಖಾಸಗಿ ರಾಕೆಟ್ ಉಡಾಯಿಸಿದ ಇಸ್ರೋ: ಯಶಸ್ಸನ್ನು ಪ್ರಧಾನಿ ಮೋದಿಗೆ ಅರ್ಪಿಸಿದ ಸ್ಕೈರೂಟ್ ಸಂಸ್ಥೆ

ನವದೆಹಲಿ: ದೇಶದ ಮೊದಲ ಖಾಸಗಿ ರಾಕೆಟ್ ಅನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಯಶಸ್ವಿಯಾಗಿ ಉಡಾಯಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಮ್-ಎಸ್ ಹೆಸರಿನ ಖಾಸಗಿ ರಾಕೆಟ್ ಅನ್ನು ಉಡಾವಣೆ ಮಾಡಲಾಗಿದೆ. ಇಸ್ರೋದ ಈ ಸಾಧನೆಗಾಗಿ ಪ್ರಧಾನಿ ಮೋದಿ ಅಭಿನಂದಿಸಿದ್ದು, “ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ರಾಕೆಟ್ ವಿಕ್ರಮ್-ಎಸ್ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೊಂಡಿರುವುದು ಭಾರತಕ್ಕೆ ಐತಿಹಾಸಿಕ ಕ್ಷಣ! ಇದು ಭಾರತದ ಖಾಸಗಿ ಬಾಹ್ಯಾಕಾಶ ಉದ್ಯಮದ ಪಯಣದಲ್ಲಿ ಪ್ರಮುಖ ಮೈಲಿಗಲ್ಲು. ಇಸ್ರೋ ಮತ್ತು ಇನ್ ಸ್ಪೇಸ್ ಇಂಡಿಯಾಗೆ ಅಭಿನಂದನೆಗಳು” […]