ಸ್ವತಂತ್ರ ಭಾರತದ ಪ್ರಥಮ ಮತದಾರ ಶ್ಯಾಮ್ ಸರನ್ ನೇಗಿ 106 ನೇ ವಯಸ್ಸಿನಲ್ಲಿ ನಿಧನ

ನವದೆಹಲಿ: ಸ್ವತಂತ್ರ ಭಾರತದ ಪ್ರಥಮ ಮತದಾರ ಶ್ಯಾಮ್ ಸರನ್ ನೇಗಿ ಶನಿವಾರ ಬೆಳಿಗ್ಗೆ ತಮ್ಮ 106 ನೇ ವಯಸ್ಸಿನಲ್ಲಿ ಹಿಮಾಚಲ ಪ್ರದೇಶದ ಕಿನ್ನೌರ್‌ನಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ದೇಶದ ಮೊದಲ ಚುನಾವಣೆಯಿಂದ ಪ್ರಸಕ್ತ ಚುನಾವಣೆವರೆಗೆ ಎಲ್ಲ ಚುನಾವಣೆಗಳಲ್ಲೂ ನೇಗಿ ಮತ ಚಲಾಯಿಸಿದ್ದಾರೆ. 106 ನೇ ವಯಸ್ಸಿನಲ್ಲಿಯೂ ಅವರು ಮತ ಚಲಾಯಿಸುವುದನ್ನು ಬಿಟ್ಟಿರಲಿಲ್ಲ. ನವೆಂಬರ್ 2 ರಂದು 34 ನೇ ಬಾರಿಗೆ ವಿಧಾನಸಭಾ ಚುನಾವಣೆಗೆ ಅಂಚೆ ಮತ ಚಲಾಯಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ, ಶ್ಯಾಮ್ ಸರಣ್ ನೇಗಿ ಅವರು […]
ಮೋರ್ಬಿ ಸೇತುವೆ ದುರಂತ: ಸೇತುವೆ ದುರಸ್ತಿಗೆ ಮಂಜೂರಾದ 2 ಕೋಟಿ ರೂ.ಗಳಲ್ಲಿ ಕೇವಲ 12 ಲಕ್ಷ ರೂ ಖರ್ಚು ಮಾಡಿದ ಒರೆವಾ

ಮೋರ್ಬಿ: 130 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಮೋರ್ಬಿ ತೂಗು ಸೇತುವೆ ದುರಂತದ ತನಿಖೆಯಲ್ಲಿ ಸೇತುವೆಯ ನವೀಕರಣದ ಜವಾಬ್ದಾರಿ ಹೊತ್ತ ಒರೆವಾ ಕಂಪನಿಯು ಮಂಜೂರಾದ 2 ಕೋಟಿ ರೂ.ಗಳಲ್ಲಿ ಕೇವಲ 12 ಲಕ್ಷ ರೂಗಳನ್ನು ಮಾತ್ರ ಖರ್ಚುಮಾಡಿದೆ ಎಂದು ಬಹಿರಂಗವಾಗಿದೆ. ಕಂಪನಿಯು ನವೀಕರಣದ ಗುತ್ತಿಗೆಯನ್ನು ಹೇಗೆ ಪಡೆದುಕೊಂಡಿದೆ ಮತ್ತು ಬ್ರಿಟಿಷರ ಕಾಲದ ಸೇತುವೆಯನ್ನು ಬಲಪಡಿಸಲು ಮಂಜೂರಾದ ಹಣದಲ್ಲಿ ಕೇವಲ ಒಂದು ಭಾಗವನ್ನು ಹೇಗೆ ಖರ್ಚು ಮಾಡಿದೆ ಎನ್ನುವುದನ್ನು ಪೊಲೀಸ್ ತನಿಖೆಯು ಬಹಿರಂಗಪಡಿಸಿದೆ. ಅಜಂತಾದ ಅಂಗಸಂಸ್ಥೆಯಾಗಿರುವ ಅಹಮದಾಬಾದ್ […]
ಆನ್‌ಲೈನ್ ಗೇಮ್ ಗಳನ್ನು ನಿಷೇಧಿಸುವ ಕಾನೂನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆನ್‌ಲೈನ್ ಗೇಮಿಂಗ್ ಜನರ, ಅದರಲ್ಲೂ ವಿಶೇಷವಾಗಿ ಯುವಜನರ ಜೀವನವನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿ ಹಲವಾರು ರಾಜ್ಯಗಳು ಆನ್‌ಲೈನ್ ಗೇಮಿಂಗ್ ಅನ್ನು ನಿಷೇಧಿಸಲು ಕಾನೂನನ್ನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದೆ. ಗುಜರಾತ್‌ನ ಏಕತಾನಗರದಲ್ಲಿ ನಡೆದ ಎರಡು ದಿನಗಳ ಕಾನೂನು ಸಚಿವರು ಮತ್ತು ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಈ ಬೇಡಿಕೆಯನ್ನು ಸಲ್ಲಿಸಲಾಗಿದೆ. ಹಲವಾರು ಯುವಕರು ಬೆಟ್ಟಿಂಗ್ ಮತ್ತು ಪಂತದ ಆನ್‌ಲೈನ್ ಗೇಮಿಂಗ್ ನಲ್ಲಿ ಅಪಾರ ಪ್ರಮಾಣದ ಹಣ ಕಳೆದುಕೊಳ್ಳುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇಂತಹ ವ್ಯಸನಾಧಾರಿತ ಆಟಗಳನ್ನು ನಿಷೇಧಿಸಬೇಕೆಂದು ಕರ್ನಾಟಕ, […]
ಇಸ್ರೇಲಿನಲ್ಲಿ ಮತ್ತೊಮ್ಮೆ ಬೆಂಜಮಿನ್ ನೆತನ್ಯಾಹು ಸರ್ಕಾರ್: ಮಿತ್ರನಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಟೆಲ್ ಅವೀವ್: ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಆಡಳಿತ ನಡೆಸಲು ಸಜ್ಜಾಗಿರುವ ಬೆಂಜಮಿನ್ ನೆತನ್ಯಾಹು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ಅವರು ಟ್ವಿಟರ್‌ನಲ್ಲಿ ಹೀಬ್ರೂ ಭಾಷೆಯಲ್ಲಿ ಅಭಿನಂದನೆ ಸಲ್ಲಿಸಿದ್ದು, “ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸಲು ನಮ್ಮ ಜಂಟಿ ಪ್ರಯತ್ನಗಳನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ. מזל טוב ידידי @netanyahu על הצלחתך בבחירות. אני מצפה להמשיך במאמצים המשותפים שלנו להעמקת […]
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರ‍್ಯಾಲಿಯಲ್ಲಿ ಗುಂಡಿನ ದಾಳಿ: ಓರ್ವ ಮೃತ 9 ಮಂದಿ ಗಾಯಾಳು

ಕರಾಚಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಜೀರಾಬಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಶಂಕಿತನೊಬ್ಬ ಗುಂಡಿನ ದಾಳಿ ನಡೆಸಿದ್ದು, ಇಮ್ರಾನ್ ಖಾನ್ ಮತ್ತು ಅವರ ಕೆಲವು ಬೆಂಬಲಿಗರಿಗೆ ಗಾಯಗಳಾಗಿವೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ನವೆಂಬರ್ 3ರಂದು ವಜೀರಾಬಾದ್ ನ ಝಫರ್ ಅಲಿ ಚೌಕ್ ನಲ್ಲಿ ‘ನೈಜ ಸ್ವಾತಂತ್ರ್ಯ’ ರ‍್ಯಾಲಿಯಲ್ಲಿ ಕಂಟೈನರ್ ಟ್ರಕ್ ನಲ್ಲಿ ಭಾಷಣ ಮಾಡುತ್ತಿದ್ದ ಇಮ್ರಾನ್ ಮೇಲೆ ಬುಲೆಟ್ ಶಾಟ್‌ಗಳನ್ನು ಹಾರಿಸಲಾಗಿದ್ದು, ಈ ಸಮಯದಲ್ಲಿ ಅವರ ಕಾಲಿಗೆ ಬುಲೆಟ್ […]