ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗಾಂಧಿ ಕುಟುಂಬ ತಟಸ್ಥ: ಶಶಿ ತರೂರ್

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಕಡೆಯಿಂದ ಯಾವುದೇ ಅಧಿಕೃತ ಅಭ್ಯರ್ಥಿ ಇಲ್ಲ ಎಂದು ಗಾಂಧಿ ಕುಟುಂಬವು ಮುಖ್ಯ ಚುನಾವಣಾ ಪ್ರಾಧಿಕಾರಿ ಮಧುಸೂದನ್ ಮಿಸ್ತ್ರಿ ಮೂಲಕ ಸ್ಪಷ್ಟಪಡಿಸಿದೆ. ಗಾಂಧಿ ಕುಟುಂಬವು ಈ ವಿಷಯದಲ್ಲಿ ತಟಸ್ಥವಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಭಾನುವಾರ ಕೆಲವು ನಾಯಕರ ಮೇಲೆ ಒತ್ತಡದ ಸುಳಿವು ಇದೆ ಎನ್ನುತ್ತಾ “ಅಸಮವಾದ ಆಟದ ಮೈದಾನ” ದ […]

ಮುಂದಿನ ವರ್ಷದಿಂದ ಪ್ರಯಾಣಿಕ ಮತ್ತು ವಾಣಿಜ್ಯ ವಾಹನಗಳ ಬೆಲೆಯೇರಿಕೆ ಸಾಧ್ಯತೆ

ನವದೆಹಲಿ: ಮುಂದಿನ ವರ್ಷ ಏಪ್ರಿಲ್‌ನಿಂದ ಪ್ರಾರಂಭವಾಗುವ ಕಟ್ಟುನಿಟ್ಟಾದ ಹೊರಸೂಸುವಿಕೆ ಮಾನದಂಡಗಳನ್ನು ಪೂರೈಸಲು ಆಟೋಮೊಬೈಲ್ ಕಂಪನಿಗಳು ವಾಹನಗಳನ್ನು ನವೀಕರಿಸಲು ಹೂಡಿಕೆ ಮಾಡುತ್ತಿರುವುದರಿಂದ ಪ್ರಯಾಣಿಕ ಮತ್ತು ವಾಣಿಜ್ಯ ವಾಹನಗಳ ಬೆಲೆಗಳು ಏರಿಕೆಯಾಗುವ ಸಾಧ್ಯತೆಯಿದೆ. ಭಾರತೀಯ ಆಟೋಮೊಬೈಲ್ ಉದ್ಯಮವು ಪ್ರಸ್ತುತ ತಮ್ಮ ಉತ್ಪನ್ನಗಳನ್ನು ಭಾರತ್ ಸ್ಟೇಜ್ VI ರ ಎರಡನೇ ಹಂತವನ್ನು ಪೂರೈಸಲು ಕೆಲಸ ಮಾಡುತ್ತಿದೆ, ಇದು ನೈಜ ಸಮಯದ ಚಾಲನಾ ಪರಿಸ್ಥಿತಿಗಳಲ್ಲಿ ಯುರೋ-VI ಹೊರಸೂಸುವಿಕೆಯ ಮಾನದಂಡಗಳಿಗೆ ಸಮನಾಗಿರುತ್ತದೆ. ಕಾರು ಮುಂತಾದ ಪ್ರಯಾಣಿಕ ಮತ್ತು ವಾಣಿಜ್ಯ ವಾಹನಗಳಿಗೆ ಮುಂದಿನ ಹಂತದ ಹೊರಸೂಸುವಿಕೆ […]

ಹಿರಿಯ ರಾಜಕಾರಾಣಿ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಮ್ ಸಿಂಗ್ ಯಾದವ್ ಇನ್ನಿಲ್ಲ

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಸೋಮವಾರ ತಮ್ಮ 82 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಹಲವು ದಿನಗಳನ್ನು ಕಳೆದ ನಂತರ ಹಿರಿಯ ರಾಜಕಾರಣಿ ನಿಧನರಾಗಿದ್ದಾರೆ. ಇದಕ್ಕೂ ಮುನ್ನ, ಯಾದವ್ ಅವರಿಗೆ ಜೀವರಕ್ಷಕ ಔಷಧಗಳನ್ನು ನೀಡಲಾಗಿತ್ತು ಎಂದು ಆಸ್ಪತ್ರೆಯು ಶುಕ್ರವಾರ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಿತ್ತು. ನಾಯಕನ ಸಾವಿನ ಸುದ್ದಿಯನ್ನು ಎಸ್‌ಪಿ ಮುಖ್ಯಸ್ಥ ಮತ್ತು ಯಾದವ್ ಅವರ ಪುತ್ರ ಅಖಿಲೇಶ್ ಟ್ವಿಟರ್‌ನಲ್ಲಿ ಖಚಿತಪಡಿಸಿದ್ದಾರೆ. मेरे आदरणीय पिता […]

ನ.12 ರಂದು ದೇಶಾದ್ಯಂತ ರಾಷ್ಟ್ರೀಯ ಲೋಕ ಅದಾಲತ್

ನವದೆಹಲಿ: ದೇಶದ ವಿವಿಧ ಆಯೋಗಗಳ ಮುಂದೆ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಈ ವರ್ಷ ನವೆಂಬರ್ 12 ರಂದು ದೇಶಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು, ದೇಶದಲ್ಲಿ ಸುಮಾರು ಆರು ಲಕ್ಷ ಎಂಟು ಸಾವಿರ ಗ್ರಾಹಕ ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿಸಿದೆ. ಲೋಕ ಅದಾಲತ್ ವ್ಯವಸ್ಥೆ ಮತ್ತು ಕಕ್ಷಿದಾರರ ನಡುವಿನ ಪರಸ್ಪರ ಇತ್ಯರ್ಥದ ಪ್ರಯೋಜನಗಳನ್ನು ಪರಿಗಣಿಸಿ ಹೆಚ್ಚಿನ ಸಂಖ್ಯೆಯ ಗ್ರಾಹಕ ಪ್ರಕರಣಗಳನ್ನು ವಿಲೇವಾರಿ ಮಾಡುವ ನಿರೀಕ್ಷೆಯಿದೆ […]

ಕ್ಯಾಲಿಫೋರ್ನಿಯಾ: ಅಪಹರಣಕ್ಕೊಳಗಾಗಿದ್ದ ಭಾರತೀಯ ಮೂಲದ 4 ಮಂದಿ ಶವವಾಗಿ ಪತ್ತೆ

ಕ್ಯಾಲಿಫೋರ್ನಿಯಾ: ಎಂಟು ತಿಂಗಳ ಮಗು, ಆಕೆಯ ಪೋಷಕರಾದ ಜಸ್ಲೀನ್ ಕೌರ್, ಎಂ ಜಸ್ದೀಪ್ ಸಿಂಗ್ ಮತ್ತು ಚಿಕ್ಕಪ್ಪ ಅಮನದೀಪ್ ಸಿಂಗ್ ಸೋಮವಾರದಿಂದ ನಾಪತ್ತೆಯಾಗಿದ್ದರು. ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಅವರನ್ನು ಟ್ರಕ್‌ನೊಳಗೆ ಬಲವಂತವಾಗಿ ತುರುಕಿ ಕರೆದೊಯ್ಯುವುದು ಕಣ್ಗಾವಲು ದೃಶ್ಯಾವಳಿಗಳಲ್ಲಿ ದಾಖಲಾಗಿತ್ತು. ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಿಂದ ಇವರನ್ನು ಅಪಹರಿಸಲಾಗಿದ್ದು, ಈ ನಾಲ್ಕೂ ಜನ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಪೊಲೀಸ್ ಗುರುವಾರ ದೃಢಪಡಿಸಿದ್ದಾರೆ. ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ 48 ವರ್ಷದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. “ಇದು ಭಯಾನಕ ಮತ್ತು ಪ್ರಜ್ಞಾಶೂನ್ಯವಾಗಿದೆ”ಎಂದು ಮರ್ಸಿಡ್ […]