ದುಬೈ: ದಸರಾದಂದು ಸಾರ್ವಜನಿಕರಿಗೆ ಮುಕ್ತವಾದ ಭವ್ಯ ಹಿಂದೂ ದೇವಾಲಯ

ದುಬೈ: ಇಲ್ಲಿನ ‘ಪೂಜಾ ಗ್ರಾಮ’ ಜೆಬೆಲ್ ಅಲಿ ಪ್ರದೇಶದಲ್ಲಿ ಎರಡು ದಿನಗಳ ಹಿಂದೆ ಉದ್ಘಾಟನೆಗೊಂಡ ಭವ್ಯವಾದ ಹಿಂದೂ ದೇವಾಲಯವು ದಸರಾ ಸಂದರ್ಭದಲ್ಲಿ ಭಕ್ತರಿಗೆ ಮುಕ್ತವಾಗಿದೆ. ಈ ದೇವಾಲಯವು ಯುಎಇಯ ಅತ್ಯಂತ ಹಳೆಯ ಹಿಂದೂ ದೇವಾಲಯಗಳಲ್ಲಿ ಒಂದಾದ ಸಿಂಧಿ ಗುರು ದರ್ಬಾರ್ ದೇವಾಲಯದ ವಿಸ್ತರಣೆಯಾಗಿದೆ. ಸಹಿಷ್ಣುತೆ ಮತ್ತು ಸಹಬಾಳ್ವೆ ಸಚಿವ ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ಅವರು ನೆಲಮಹಡಿಯಲ್ಲಿರುವ ದೇವಾಲಯದ ವಿವಿಧೋದ್ದೇಶ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ದೇವಾಲಯವನ್ನು ಉದ್ಘಾಟಿಸಿದರು. Amb @sunjaysudhir – It […]
ವಿಶ್ವದಲ್ಲೇ ಅತಿದೊಡ್ಡ ಸಕ್ಕರೆ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: 40 ಸಾವಿರ ಕೋಟಿ ರೂ. ವಿದೇಶಿ ವಿನಿಮಯ ಗಳಿಕೆ

ನವದೆಹಲಿ: ಭಾರತವು ವಿಶ್ವದ ಅತಿದೊಡ್ಡ ಸಕ್ಕರೆ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ರಫ್ತುದಾರನಾಗಿ ಹೊರಹೊಮ್ಮಿದೆ. ಸಕ್ಕರೆ ಋತು 2021-22 ರಲ್ಲಿ, ದೇಶದಲ್ಲಿ ಐದು ಸಾವಿರ ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚು ಕಬ್ಬು ಉತ್ಪಾದನೆಯಾಗಿದೆ. ಈ ಪೈಕಿ 35 ಲಕ್ಷ ಮೆಟ್ರಿಕ್ ಟನ್ ಸಕ್ಕರೆಯನ್ನು ಎಥೆನಾಲ್ ಉತ್ಪಾದನೆಗೆ ಬಳಸಲಾಗಿದ್ದು, 359 ಲಕ್ಷ ಮೆಟ್ರಿಕ್ ಟನ್ ಸಕ್ಕರೆಯನ್ನು ಕಾರ್ಖಾನೆಗಳು ಉತ್ಪಾದಿಸಿವೆ. ಈ ಋತುವು ಭಾರತೀಯ ಸಕ್ಕರೆ ವಲಯಕ್ಕೆ ಪರ್ವಕಾಲವೆಂದು ಸಾಬೀತಾಗಿದೆ. 109 ಲಕ್ಷ ಮೆಟ್ರಿಕ್ ಟನ್‌ಗಿಂತಲೂ ಹೆಚ್ಚಿನ ಸಕ್ಕರೆ ರಫ್ತಾಗಿ […]
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಹರಿದಾಡುತ್ತಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ಸರ್ಕಾರ ವಿಲೀನಗೊಳಿಸಬಹುದು ಎಂನ್ನುವ ಊಹಾಪೋಹಗಳನ್ನು ಹರಿಯಬಿಡಲಾಗಿತ್ತು. ಮಾಧ್ಯಮಗಳಲ್ಲಿ ವರದಿಯಾದ ವದಂತಿಗಳಿಗೆ ಸರ್ಕಾರವು ಅಂತ್ಯ ಹಾಡಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದು, ಮಾಧ್ಯಮ ವರದಿಗೆ ಪ್ರತಿಕ್ರಿಯೆಯಾಗಿ ಸರ್ಕಾರದಿಂದ ಈ […]
ಕೆ.ಸಿ.ರಾವ್ ರಾಷ್ಟ್ರೀಯ ಪಕ್ಷ ಘೋಷಣೆ: ಪಕ್ಷ ಸದಸ್ಯರಿಂದ ಮದ್ಯದ ಬಾಟಲಿ ಮತ್ತು ಕೋಳಿ ವಿತರಣೆ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆಸಿ ರಾವ್ ನಾಳೆ ವಾರಂಗಲ್‌ನಲ್ಲಿ ರಾಷ್ಟ್ರೀಯ ಪಕ್ಷವನ್ನು ಆರಂಭಿಸುವ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಟಿಆರ್‌ಎಸ್ ನಾಯಕ ಸ್ಥಳೀಯರಿಗೆ ಮದ್ಯದ ಬಾಟಲ್ ಮತ್ತು ಕೋಳಿ ವಿತರಿಸುತ್ತಿರುವ ವೀಡಿಯೋವನ್ನು ಸುದ್ದಿ ಸಂಸ್ಥೆ ಎ.ಎನ್.ಐ ಹಂಚಿಕೊಂಡಿದೆ. #WATCH | TRS leader Rajanala Srihari distributes liquor bottles and chicken to locals ahead of Telangana CM KC Rao launching a national party tomorrow, in Warangal […]
ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿ ಭಾರತೀಯ ಮೂಲದ ನಾಲ್ವರ ಅಪಹರಣ

ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಿಂದ ಸೋಮವಾರ (ಸ್ಥಳೀಯ ಕಾಲಮಾನ) ಭಾರತೀಯ ಮೂಲದ ಪರಿವಾರವೊಂದು ಅಪಹರಣಗೊಂಡಿರುವುದಾಗಿ ವರದಿಯಾಗಿದೆ. ಅಪಹರಣಗೊಂಡ ನಾಲ್ವರಲ್ಲಿ 8 ತಿಂಗಳ ಹೆಣ್ಣು ಮಗು ಮತ್ತು ಆಕೆಯ ಪೋಷಕರು ಸೇರಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. 36 ವರ್ಷದ ಜಸ್ದೀಪ್ ಸಿಂಗ್, 27 ವರ್ಷದ ಜಸ್ಲೀನ್ ಕೌರ್ ಮತ್ತು ಅವರ ಎಂಟು ತಿಂಗಳ ಮಗು ಅರೂಹಿ ಧೇರಿ ಮತ್ತು 39 ವರ್ಷದ ಅಮನದೀಪ್ ಸಿಂಗ್ ಅವರನ್ನು ಕರೆದೊಯ್ಯಲಾಗಿದೆ ಎಂದು ಮರ್ಸಿಡ್ ಕೌಂಟಿ ಶೆರಿಫ್ ಕಚೇರಿ ಸೋಮವಾರ ಹೇಳಿಕೆಯಲ್ಲಿ ತಿಳಿಸಿರುವುದಾಗಿ […]