ದಿಗ್ವಿಜಯ ಭಾರಿಸಿದ ಕಾಂಡೋಮ್ : 2024 ಆನ್ ಲೈನ್ ಶಾಪಿಂಗ್ ನಲ್ಲಿ ಕಾಂಡೋಮ್ ಭರ್ಜರಿ ಸೇಲ್!

ಆನ್ಲೈನ್ ಶಾಪಿಂಗ್ ನಲ್ಲಿ ಪ್ರತೀವರ್ಷವೂ ಒಂದೊಂದು ಉತ್ಪನ್ನಗಳು ಸದ್ದು ಮಾಡುತ್ತಿರುತ್ತದೆ. ಆನ್ ಲೈನ್ ಮಾರುಕಟ್ಟೆಗಳಿಗೆ ವೇದಿಕೆ ಕಲ್ಪಿಸುವ ಕಂಪೆನಿಗಳು ವರ್ಷಾಂತ್ಯದ ಕೊನೆಗೆ ತಮ್ಮಲ್ಲಿ ಈ ವರ್ಷ ಜಾಸ್ತಿಯಾಗಿ ಮಾರಾಟವಾದ ವಸ್ತು ಯಾವುದು ಎನ್ನುವುದನ್ನು ಬಹಿರಂಗಪಡಿಸುತ್ತದೆ. ಇ-ಕಾಮರ್ಸ್ ದೈತ್ಯ ಸ್ವಿಗ್ಗಿ ತನ್ನ ಆನ್‌ಲೈನ್ ಶಾಪಿಂಗ್ ವಿವರಗಳನ್ನು ಬಹಿರಂಗಪಡಿಸಿದೆ. ಈ ವರ್ಷ ಭರ್ಜರಿಯಾಗಿ ಸೇಲ್ ಆದ ಉತ್ಪನ್ನಗಳಲ್ಲಿ ಮೊದಲೇ ಸ್ಥಾನವನ್ನು ಕಾಂಡೋಮ್ ಬಾಚಿಕೊಂಡಿದೆ ಎನ್ನುವುದು ಇಂಟರೆಸ್ಟಿಂಗ್ ಸಂಗತಿ. ಹೌದು. ಸ್ವಿಗ್ಗಿ ಇನ್‌ಸ್ಟಾಮಾರ್ಟ್ – 2024 ಎಂಬ ಶೀರ್ಷಿಕೆಯ ವರದಿಯನ್ನು ಬಿಡುಗಡೆ […]
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಡಿ.27 ರಂದು ಸರಕಾರಿ ರಜೆ ಘೋಷಣೆ.

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ, ಹಾಗೂ ಇಂದು (ಡಿ.27) ಸರಕಾರಿ ರಜೆ ಘೋಷಿಸಲಾಗಿದೆ. ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 2004 ರಿಂದ 2014 ರವರೆಗೆ ಅವರು ದೇಶದ ಪ್ರಧಾನಿಯಾಗಿದ್ದರು.
ಮಾಜಿ ಪ್ರಧಾನಿ Dr.Manmohan Singh ನಿಧನ; ಆರ್ಥಿಕ ಸುಧಾರಣೆಯ ಹರಿಕಾರ ಇನ್ನಿಲ್ಲ!

ನವದೆಹಲಿ: ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ವಯೋಸಹಜ ಕಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನ ಹೊಂದಿದರು. 92 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ರಾತ್ರಿ ಇಹಲೋಕ ತ್ಯಜಿಸಿದರು. 2004ರಿಂದ 2014ರ ವರೆಗೆ ಭಾರತ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಇಂದಿರಾ ಗಾಂಧಿ ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಆರ್ಥಿಕ ಸಲಹೆಗಾರರಾಗಿ […]
ತಿರುಪತಿ ಪ್ರಸಾದ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ.

ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಟಿಟಿಡಿ ಮಾಜಿ ಮುಖ್ಯಸ್ಥರು ಚಂದ್ರಬಾಬು ನಾಯ್ಡು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ […]
ಭಾರತದಲ್ಲಿ ಮೊದಲ ‘ಮಂಕಿಪಾಕ್ಸ್’ ಪ್ರಕರಣ ಪತ್ತೆ: ಭಯ ಪಡುವ ಅಗತ್ಯವಿಲ್ಲ; ಕೇಂದ್ರ ಆರೋಗ್ಯ ಸಚಿವಾಲಯ.

ನವದೆಹಲಿ: ಇತ್ತೀಚಿಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಯೋರ್ವನಿಗೆ ‘ಮಂಕಿಪಾಕ್ಸ್ ‘ ತಗುಲಿರುವುದಾಗಿ ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ರೋಗಿಯನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಆತನ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಮಂಕಿಪಾಕ್ಸ್ ಇದೆಯೇ ಎಂಬುದನ್ನು ತಿಳಿಯಲು ರೋಗಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಪ್ರಕರಣವನ್ನು ನಿರ್ವಹಿಸಲಾಗುತ್ತಿದೆ ಮತ್ತು ಮಂಕಿಪಾಕ್ಸ್ ಮೂಲ ತಿಳಿಯಲು ಹಾಗೂ ದೇಶದೊಳಗೆ ಅದರ ಪರಿಣಾಮವನ್ನು ನಿರ್ಣಯಿಸಲು ಸಂಪರ್ಕ ಪತ್ತೆ […]