ದೇಶದಲ್ಲಿ ಸಂಸ್ಕೃತ ಮಾತನಾಡುವ ಜನಸಂಖ್ಯೆ ಕೇವಲ 24,821! ಅಳಿವಿನಂಚಿನಲ್ಲಿದೆ ಭಾರತದ ದೇವ ಭಾಷೆ

ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿಯ ಭಾಷಾ ವಿಭಾಗವು ಆಗ್ರಾ ಮೂಲದ ಶಸ್ತ್ರಚಿಕಿತ್ಸಕ ಮತ್ತು ಸಾಮಾಜಿಕ ಕಾರ್ಯಕರ್ತ ಡಾ. ದೇವಾಶಿಶ್ ಭಟ್ಟಾಚಾರ್ಯ ಅವರು ಸಲ್ಲಿಸಿದ ಆರ್‌ಟಿಐ ಅರ್ಜಿಗೆ ಉತ್ತರವಾಗಿ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಡಾ.ಭಟ್ಟಾಚಾರ್ಯ ಅವರು ಪಡೆದ ಮಾಹಿತಿಯ ಪ್ರಕಾರ, 2011 ರ ಜನಗಣತಿಯ ಪ್ರಕಾರ, ಭಾರತೀಯ ಜನಸಂಖ್ಯೆಯ ಶೇಕಡಾ 0.002 ರಷ್ಟು ಜನರು ಮಾತ್ರ ಸಂಸ್ಕೃತವನ್ನು ಮಾತನಾಡುತ್ತಾರೆ. ಡಾ.ಭಟ್ಟಾಚಾರ್ಯರ ಪ್ರಕಾರ, ಸಂವಿಧಾನದಲ್ಲಿ ಸಂಸ್ಕೃತವನ್ನು ಅಲ್ಪಸಂಖ್ಯಾತ ಭಾಷೆ ಎಂದು ಪಟ್ಟಿ […]

ಚಂಡೀಗಢ ವಿಮಾನ ನಿಲ್ದಾಣ ಇನ್ನು ಮುಂದೆ ಶಹೀದ್ ಭಗತ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ನವದೆಹಲಿ: ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ಕ್ರಾಂತಿಕಾರಿಗಳಲ್ಲಿ ಒಬ್ಬರಾದ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ಪಂಜಾಬ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರದಂದು ಘೋಷಿಸಿದ್ದು, ಭಗತ್ ಸಿಂಗ್ ಜನ್ಮದಿನವಾದ ಸೆಪ್ಟೆಂಬರ್ 28 ರಿಂದ ಚಂಡಿಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಶಹೀದ್-ಎ-ಆಜಮ್-ಭಗತ್ ಸಿಂಗ್ ಅವರ ಹೆಸರಿನಿಂದ ಕರೆಯಲ್ಪಡಲಿದೆ. ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಶಹೀದ್ ಭಗತ್ ಸಿಂಗ್ ನಿಲ್ದಾಣದ ನಾಮಕರಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಳೆದ ಏಳು ವರ್ಷಗಳಿಂದ ಪಂಜಾಬ್ ಮತ್ತು […]

ಚಿಲ್ಲರೆ ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಓಪನ್ ನೆಟ್ ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ ಪ್ಲಾಟ್ ಫಾರ್ಮ್

ನವದೆಹಲಿ: ಓಪನ್ ನೆಟ್ ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒ.ಎನ್.ಡಿ.ಸಿ), ಕೇಂದ್ರ ಸರ್ಕಾರ ಬೆಂಬಲಿತ ಯೋಜನೆಯಾಗಿದ್ದು, ಇದು ದೇಶದ ಎಲ್ಲಾ ಭಾಗಗಳಲ್ಲಿನ ಸಣ್ಣ ವ್ಯಾಪಾರಿಗಳು ಮತ್ತು ಮಾರಾಟಗಾರರಿಗೆ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ದೊಡ್ಡ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಂದ ಸಾಮಾನ್ಯವಾಗಿ ನಿಯೋಜಿಸಲಾದ ಪ್ರಕ್ರಿಯೆಗಳು ಮತ್ತು ತಂತ್ರಜ್ಞಾನಗಳನ್ನು ಪ್ರವೇಶಿಸಲು ಅನುವು ಮಾಡಿಕೊಡುತ್ತದೆ. ದೇಶದ ಚಿಲ್ಲರೆ ವ್ಯಾಪಾರಿಗಳು ಮತ್ತು ಮಾರಾಟಗಾರರು ಇ-ಕಾಮರ್ಸ್ ಮಾರುಕಟ್ಟೆಗಳಲ್ಲಿ ತಮ್ಮ ಉತ್ಪನ್ನಗಳನ್ನು ಮಾರಲು ಅಭಿವೃದ್ದಿ ಪಡಿಸಲಾದ ವೇದಿಕೆ ಇದಾಗಿದೆ. ONDC – जल्द आ रहा है E-Commerce […]

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಕಾಲ ನಡೆದ ವಾದದಲ್ಲಿ ಅರ್ಜಿದಾರರ ಪರ 21 ವಕೀಲರು ಭಾಗಿಯಾಗಿದ್ದು, ಪ್ರತಿವಾದಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕರ್ನಾಟಕ ಅಡ್ವೊಕೇಟ್ ಜನರಲ್ ಪ್ರಭುಲಿಂಗ […]

ದೇಶಾದ್ಯಂತ ಪಿ.ಎಫ್.ಐ ಕಚೇರಿಗಳ ಮೇಲೆ ಎನ್.ಐ.ಎ ದಾಳಿ: ಬಂಧಿತರ ಸಂಖ್ಯೆ 106 ಕ್ಕೆ ಏರಿಕೆ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ, ಜಾರಿ ನಿರ್ದೇಶನಾಲಯ ಮತ್ತು ಸ್ಥಳೀಯ ಪೊಲೀಸರು ಗುರುವಾರ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಉತ್ತರ ಪ್ರದೇಶ ಮತ್ತು ಅಸ್ಸಾಂ ಸೇರಿದಂತೆ 11 ರಾಜ್ಯಗಳಾದ್ಯಂತ ಶಂಕಿತ ಭಯೋತ್ಪಾದಕ-ಧನಸಹಾಯ ಚಟುವಟಿಕೆಗಳನ್ನು ಹತ್ತಿಕ್ಕಲು ಏಕಕಾಲದಲ್ಲಿ ದಾಳಿಗಳನ್ನು ಪ್ರಾರಂಭಿಸಿದ್ದು, ಬೆಳಗಿನ ಜಾವ 3.30ರಿಂದ ಇದುವರೆಗೆ ದಾಳಿ ಮುಂದುವರಿದಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ 100ಕ್ಕೂ ಹೆಚ್ಚು ನಾಯಕರನ್ನು ಈ ದಾಳಿಯಲ್ಲಿ ಬಂಧಿಸಲಾಗಿದೆ. ಕೇರಳ (22) ಮಹಾರಾಷ್ಟ್ರ ಮತ್ತು ಕರ್ನಾಟಕ (ತಲಾ 20), ತಮಿಳುನಾಡು (10), ಅಸ್ಸಾಂ (9), ಉತ್ತರ […]