ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಮುನ್ನಡೆ ಸಾಧಿಸಿದ ಭಾರತ: ಶೇಕಡಾ 7 ಕ್ಕಿಂತ ಹೆಚ್ಚು ಆರ್ಥಿಕ ಬೆಳವಣಿಗೆ ನಿರೀಕ್ಷೆ

ನವದೆಹಲಿ: ಭಾರತವು ಯುನೈಟೆಡ್ ಕಿಂಗ್‌ಡಮ್ ಅನ್ನು ಹಿಂದಿಕ್ಕಿ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಮುನ್ನಡೆ ಸಾಧಿಸಿದೆ. 2021 ರ ಅಂತಿಮ ಮೂರು ತಿಂಗಳಲ್ಲಿ ಭಾರತವು ಐದನೇ ಅತಿದೊಡ್ಡ ಆರ್ಥಿಕತೆಯಾಗಲು ಮುನ್ನಡೆ ಸಾಧಿಸಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ. ಐಎಂಎಫ್‌ನ ಜಿಡಿಪಿ ಅಂಕಿಅಂಶಗಳ ಪ್ರಕಾರ, ಮೊದಲ ತ್ರೈಮಾಸಿಕದಲ್ಲಿ ಭಾರತ ತನ್ನ ಮುನ್ನಡೆಯನ್ನು ವಿಸ್ತರಿಸಿದೆ. ಈ ವರ್ಷ ಭಾರತದ ಆರ್ಥಿಕತೆಯು ಶೇಕಡಾ 7 ಕ್ಕಿಂತ ಹೆಚ್ಚು ಬೆಳೆಯುವ ಮುನ್ಸೂಚನೆ ಇದೆ ಎಂದು ಐಎಂಎಫ್ ಹೇಳಿದೆ. ಈ ತ್ರೈಮಾಸಿಕದಲ್ಲಿ ಭಾರತೀಯ […]
ಪದ್ಮ ಪ್ರಶಸ್ತಿ 2023ರ ನಾಮನಿರ್ದೇಶನ: ಸೆಪ್ಟೆಂಬರ್ 15 ರವರೆಗೆ ಅವಕಾಶ

ನವದೆಹಲಿ: ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ಔಷಧ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳಿಗಾಗಿ ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ವ್ಯತ್ಯಾಸವಿಲ್ಲದೆ ನೀಡಲಾಗುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿರುವ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕಾರಗಳಿಗೆ ನಾಮನಿರ್ದೇಶನ ಸಲ್ಲಿಸುವ ಅವಕಾಶವನ್ನು ಈ ತಿಂಗಳ 15 ರವರೆಗೆ ತೆರೆದಿಡಲಾಗಿರುತ್ತದೆ. ಪದ್ಮ ಪ್ರಶಸ್ತಿ- 2023ರ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು […]
ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತತೆ ಪದ ಅಳಿಸಲು ಸುಬ್ರಮಣಿಯನ್ ಸ್ವಾಮಿ ಅರ್ಜಿ: ಸೆ.23 ರಂದು ಸುಪ್ರೀಂ ಕೋರ್ಟ್ ವಿಚಾರಣೆ

ನವದೆಹಲಿ: ಸಂವಿಧಾನದ ಪೀಠಿಕೆಯಿಂದ “ಸಮಾಜವಾದ” ಮತ್ತು “ಜಾತ್ಯತೀತತೆ” ಪದಗಳನ್ನು ಅಳಿಸಲು ಕೋರಿ ರಾಜ್ಯಸಭಾ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ರಿಟ್ ಅರ್ಜಿಯು ಶುಕ್ರವಾರದಂದು ಸುಪ್ರೀಂ ಕೋರ್ಟ್‌ನಲ್ಲಿ ಪರಿಗಣನೆಗೆ ಬಂದಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 23 ರಂದು ಭಾರತದ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ಪಟ್ಟಿ ಮಾಡಲಾದ ಇದೇ ರೀತಿಯ ಅರ್ಜಿಯೊಂದಿಗೆ ಡಾ.ಸ್ವಾಮಿ ಅವರ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ. ವಕೀಲ ಸತ್ಯ ಸಬರ್ವಾಲ್ ಪ್ರಕರಣದ ಎರಡನೇ ಅರ್ಜಿದಾರರಾಗಿದ್ದಾರೆ. 1976 […]
ಸ್ವದೇಶೀ ನಿರ್ಮಿತ ವಿಮಾನವಾಹಕ ನೌಕೆ ಐ.ಎನ್.ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಕೊಚ್ಚಿ: ಕೊಚ್ಚಿಯಲ್ಲಿ ಸ್ವದೇಶೀ ನಿರ್ಮಿತ ವಿಮಾನವಾಹಕ ಐ.ಎನ್.ಎಸ್ ವಿಕ್ರಾಂತ್ ಅನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ರಕ್ಷಣಾ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸರ್ಕಾರವು ಶ್ರಮಿಸುತ್ತಿದೆ ಎಂಬುದಕ್ಕೆ ಐಎನ್‌ಎಸ್ ವಿಕ್ರಾಂತ್ ಉದಾಹರಣೆಯಾಗಿದೆ ಎಂದರು. ಐ.ಎನ್.ಎಸ್ ವಿಕ್ರಾಂತ್ ಕಾರ್ಯಾರಂಭವು ರಕ್ಷಣಾ ವಲಯದಲ್ಲಿ ಆತ್ಮನಿರ್ಭಾರತದತ್ತ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ. ದೇಶವು ಈಗ ವಿಮಾನವಾಹಕ ನೌಕೆಯನ್ನು ವಿನ್ಯಾಸಗೊಳಿಸುವ ಮತ್ತು ನಿರ್ಮಿಸುವ ಸಾಮರ್ಥ್ಯವನ್ನು ಹೊಂದಿರುವ ಬೆರಳೆಣಿಕೆಯ ರಾಷ್ಟ್ರಗಳನ್ನು ಸೇರಿಕೊಂಡಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಭಾರತೀಯ ನೌಕಾಪಡೆಯ ಹೊಸ ಧ್ವಜವನ್ನು ಅನಾವರಣಗೊಳಿಸಿದರು. ಛತ್ರಪತಿ […]
ಕೇರಳದ ಪಾಲಕ್ಕಾಡಿನಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಸಂಭ್ರಮದ ಗಣೇಶೋತ್ಸವ

ಪಾಲಕ್ಕಾಡ್: ತಮಿಳುನಾಡು ಬಿಜೆಪಿ ನಾಯಕ, ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಕೇರಳದ ಪಾಲಕ್ಕಾಡಿನಲ್ಲಿ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಗಿದೆ. ಪಾಲಕ್ಕಾಡಿನ ಜಿಲ್ಲಾ ಗಣೇಶೋತ್ಸವ ಸಮಿತಿಯು ವಿನಾಯಕ ಚತುರ್ಥಿ ಹಬ್ಬವನ್ನು ಆಯೋಜಿಸಿತ್ತು. ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಣ್ಣಾಮಲೈ, ” ಪಾಲಕಾಡ್ ಜಿಲ್ಲಾ ಗಣೇಶೋತ್ಸವ ಸಮಿತಿಯು ಆಯೋಜಿಸಿದ್ದ ವಿನಾಯಕ ಚತುರ್ಥಿಯನ್ನು ಆಚರಿಸಲು ಪಾಲಕಾಡಿನಲ್ಲಿ ಸಾವಿರಾರು ಜನರು ಸೇರುವುದನ್ನು ತಡೆಯಲು ಭಾರೀ ಮಳೆಯಿಂದಾಗಲೀ ಅಥವಾ ಕಮ್ಯುನಿಸ್ಟ್ ಆಡಳಿತದಿಂದ ಸಂಘಟಿತ ವಿದ್ಯುತ್ ಕಡಿತದಿಂದಾಗಲೀ ಸಾಧ್ಯವಾಗಲಿಲ್ಲ” ಎಂದಿದ್ದಾರೆ. “ಬಿಜೆಪಿ ಫಾರ್ […]