ಸ್ವದೇಶೀ ನಿರ್ಮಿತ ವಿಮಾನವಾಹಕ ನೌಕೆ ಐ.ಎನ್.ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಕೊಚ್ಚಿ: ಕೊಚ್ಚಿಯಲ್ಲಿ ಸ್ವದೇಶೀ ನಿರ್ಮಿತ ವಿಮಾನವಾಹಕ ಐ.ಎನ್.ಎಸ್ ವಿಕ್ರಾಂತ್ ಅನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ರಕ್ಷಣಾ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸರ್ಕಾರವು ಶ್ರಮಿಸುತ್ತಿದೆ ಎಂಬುದಕ್ಕೆ ಐಎನ್‌ಎಸ್ ವಿಕ್ರಾಂತ್ ಉದಾಹರಣೆಯಾಗಿದೆ ಎಂದರು. ಐ.ಎನ್.ಎಸ್ ವಿಕ್ರಾಂತ್ ಕಾರ್ಯಾರಂಭವು ರಕ್ಷಣಾ ವಲಯದಲ್ಲಿ ಆತ್ಮನಿರ್ಭಾರತದತ್ತ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ. ದೇಶವು ಈಗ ವಿಮಾನವಾಹಕ ನೌಕೆಯನ್ನು ವಿನ್ಯಾಸಗೊಳಿಸುವ ಮತ್ತು ನಿರ್ಮಿಸುವ ಸಾಮರ್ಥ್ಯವನ್ನು ಹೊಂದಿರುವ ಬೆರಳೆಣಿಕೆಯ ರಾಷ್ಟ್ರಗಳನ್ನು ಸೇರಿಕೊಂಡಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಭಾರತೀಯ ನೌಕಾಪಡೆಯ ಹೊಸ ಧ್ವಜವನ್ನು ಅನಾವರಣಗೊಳಿಸಿದರು. ಛತ್ರಪತಿ […]

ಕೇರಳದ ಪಾಲಕ್ಕಾಡಿನಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಸಂಭ್ರಮದ ಗಣೇಶೋತ್ಸವ

ಪಾಲಕ್ಕಾಡ್: ತಮಿಳುನಾಡು ಬಿಜೆಪಿ ನಾಯಕ, ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಕೇರಳದ ಪಾಲಕ್ಕಾಡಿನಲ್ಲಿ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಗಿದೆ. ಪಾಲಕ್ಕಾಡಿನ ಜಿಲ್ಲಾ ಗಣೇಶೋತ್ಸವ ಸಮಿತಿಯು ವಿನಾಯಕ ಚತುರ್ಥಿ ಹಬ್ಬವನ್ನು ಆಯೋಜಿಸಿತ್ತು. ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಣ್ಣಾಮಲೈ, ” ಪಾಲಕಾಡ್ ಜಿಲ್ಲಾ ಗಣೇಶೋತ್ಸವ ಸಮಿತಿಯು ಆಯೋಜಿಸಿದ್ದ ವಿನಾಯಕ ಚತುರ್ಥಿಯನ್ನು ಆಚರಿಸಲು ಪಾಲಕಾಡಿನಲ್ಲಿ ಸಾವಿರಾರು ಜನರು ಸೇರುವುದನ್ನು ತಡೆಯಲು ಭಾರೀ ಮಳೆಯಿಂದಾಗಲೀ ಅಥವಾ ಕಮ್ಯುನಿಸ್ಟ್ ಆಡಳಿತದಿಂದ ಸಂಘಟಿತ ವಿದ್ಯುತ್ ಕಡಿತದಿಂದಾಗಲೀ ಸಾಧ್ಯವಾಗಲಿಲ್ಲ” ಎಂದಿದ್ದಾರೆ. “ಬಿಜೆಪಿ ಫಾರ್ […]

ನಿರ್ಮಾಣ ಹಂತದಲ್ಲಿರುವ ಅಬುಧಾಬಿಯ ಮೊದಲ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್

ಅಬುದಾಭಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿ ಇದು “ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ” ಎಂದು ಬಣ್ಣಿಸಿದರು ಎಂದು ವರದಿಯಾಗಿದೆ. ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಬುಧವಾರ ಯುಎಇಗೆ ಆಗಮಿಸಿದ ಜೈಶಂಕರ್ ಅವರು ಸಾಂಪ್ರದಾಯಿಕ ದೇವಾಲಯವನ್ನು ನಿರ್ಮಿಸುವಲ್ಲಿ ಭಾರತೀಯರ ಪ್ರಯತ್ನವನ್ನು ಶ್ಲಾಘಿಸಿದರು. “ಗಣೇಶ ಚತುರ್ಥಿಯಂದು, ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದಿಸಲ್ಪಟ್ಟಿದ್ದೇನೆ. ಕ್ಷಿಪ್ರ ಪ್ರಗತಿಯನ್ನು ನೋಡಲು […]

ಸ್ವದೇಶೀ ನಿರ್ಮಿತ ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೆಲವೇ ತಿಂಗಳಲ್ಲಿ ಬಿಡುಗಡೆ: ಅಡರ್ ಪೂನಾವಾಲಾ

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮಾ ವೈರಸ್ (ಎಚ್‌ಪಿವಿ) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಬಿಡುಗಡೆ ಮಾಡಲಾಗುವುದು ಮತ್ತಿದು 200-400 ರೂಪಾಯಿಗಳ ಕೈಗೆಟುಕುವ ಬೆಲೆಯಲ್ಲಿ ಜನರಿಗೆ ಲಭ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅಡರ್ ಪೂನವಾಲಾ ಗುರುವಾರ ತಿಳಿಸಿದ್ದಾರೆ. ಲಸಿಕೆಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಿರುವುದನ್ನು ಘೋಷಿಸಲು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್, ಲಸಿಕೆ ಕೈಗೆಟುಕುವ ಬೆಲೆಯಲ್ಲಿರುತ್ತದೆ ಮತ್ತು ಇದು ಸಾಮಾನ್ಯ […]

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್‌ಐಎ

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಮತ್ತು ಆತನ ಸಹಚರರ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದ್ದು, ಡಿ ಕಂಪನಿಯು ಭಾರತದಲ್ಲಿ ಶಸ್ತ್ರಾಸ್ತ್ರ, ಡ್ರಗ್ಸ್, ನಕಲಿ ಭಾರತೀಯ ಕರೆನ್ಸಿ ಕಳ್ಳಸಾಗಣೆ ಮಾಡುವ ಘಟಕವನ್ನು ಸ್ಥಾಪಿಸಿರುವ ಬಗ್ಗೆ ಹಾಗೂ ಪಾಕಿಸ್ತಾನಿ ಏಜೆನ್ಸಿಗಳು ಮತ್ತು ಭಯೋತ್ಪಾದಕ ಸಂಘಟನೆಗಳ ಸಹಾಯದಿಂದ ಭಯೋತ್ಪಾದಕ ದಾಳಿಗಳನ್ನು ನಡೆಸಲು ಯೋಚಿಸಿರುವ ಬಗ್ಗೆ ಸಂಸ್ಥೆಯು ತನಿಖೆ ನಡೆಸಿದೆ. ಎನ್‌ಐಎ ಆತನ ಫೋಟೋ ಬಿಡುಗಡೆ […]