ದೇಶದಲ್ಲೇ ಟ್ರಾಫಿಕ್ ಸಮಸ್ಯೆಯಲ್ಲಿ ಬೆಂಗಳೂರು ಫಸ್ಟ್!

ನವದೆಹಲಿ/ಬೆಂಗಳೂರು: ಟ್ರಾಫಿಕ್ ಜಾಮ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು ಇದೀಗ ಮತ್ತೊಮ್ಮೆ ಸಂಚಾರ ದಟ್ಟಣೆ ವಿಚಾರವಾಗಿ ಸುದ್ದಿಯಾಗಿದೆ. ದೇಶದಲ್ಲೇ ಅತಿ ಹೆಚ್ಚು ಟ್ರಾಫಿಕ್ ಹೊಂದಿರುವ ನಗರ ಎಂಬ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದಿದೆ. ನ್ಯಾವಿಗೇಷನ್ ಟೆಕ್ನಾಲಜಿ ಕಂಪನಿಯಾದ ಟಾಮ್‌ಟಾಮ್ ಪ್ರಕಟಿಸಿರುವ 2025ರ ಟ್ರಾಫಿಕ್ ಇಂಡೆಕ್ಸ್‌ನಲ್ಲಿ ಬೆಂಗಳೂರಿನ ಸಂಚಾರ ದಟ್ಟಣೆಯ ಕುರಿತು ಆಘಾತಕಾರಿ ಅಂಶಗಳು ಬಹಿರಂಗವಾಗಿವೆ. ವರದಿ ಪ್ರಕಾರ, ಬೆಂಗಳೂರಿನಲ್ಲಿ ಕೇವಲ 10 ಕಿಲೋಮೀಟರ್ ದೂರ ಕ್ರಮಿಸಲು ಸರಾಸರಿ 36 ನಿಮಿಷ 9 ಸೆಕೆಂಡ್ ಸಮಯ […]

ಬೀಯಿಂಗ್ ಹ್ಯೂಮನ್ ಆಭರಣ ವಂಚನೆ ಪ್ರಕರಣ: ಸಲ್ಮಾನ್ ಖಾನ್, ಸಹೋದರಿಗೆ ನ್ಯಾಯಾಲಯ ಸಮನ್ಸ್

ಚಂಡೀಗಢ: ಬೀಯಿಂಗ್ ಹ್ಯೂಮನ್ ಆಭರಣ ಶೋರೂಮ್‌ಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಅವರ ಸಹೋದರಿ ಅಲ್ವಿರಾ ಖಾನ್ ಅಗ್ನಿಹೋತ್ರಿ ಅವರಿಗೆ ಚಂಡೀಗಢ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಚಂಡೀಗಢದ ಮಣಿಮಜ್ರಾದಲ್ಲಿರುವ ಬೀಯಿಂಗ್ ಹ್ಯೂಮನ್ ಜ್ಯುವೆಲ್ಲರಿ ಶೋರೂಮ್‌ಗೆ ಸಂಬಂಧಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಸಲ್ಮಾನ್ ಖಾನ್, ಅಲ್ವಿರಾ ಖಾನ್ ಅಗ್ನಿಹೋತ್ರಿ ಹಾಗೂ ಸ್ಟೈಲ್ ಅಂಡ್ ಕಂಟೆಂಟ್ ಜ್ಯುವೆಲ್ಲರಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕರಿಗೆ ಅಕ್ಟೋಬರ್ 5ರಂದು ನ್ಯಾಯಾಲಯಕ್ಕೆ ಹಾಜರಾಗಿ ಆರೋಪಗಳಿಗೆ […]

ವಿಮೆ ಇಲ್ಲದ ವಾಹನಗಳಿಗೆ ಇನ್ನು ಪೆಟ್ರೋಲ್ ಸಿಗಲ್ಲ? ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೀಡಿದ ಮಹತ್ವದ ನಿರ್ದೇಶನವೇನು?

ನವದೆಹಲಿ: ದೇಶದಲ್ಲಿ ವಿಮೆ ಇಲ್ಲದೇ ಸಂಚರಿಸುವ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಂತಹ ವಾಹನಗಳಿಗೆ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಪೂರೈಕೆಯನ್ನು ನಿರಾಕರಿಸುವ ಕುರಿತು ಪ್ರಾಯೋಗಿಕ ಯೋಜನೆ ರೂಪಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್, ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ, ಪೆಟ್ರೋಲ್ ಅಥವಾ ಡೀಸೆಲ್ ನೀಡುವ ಮೊದಲು ವಾಹನದ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ಪೈಲಟ್ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದೆ. […]

ಕೇಂದ್ರ ಸರ್ಕಾರದಿಂದ UPI ಬಳಕೆದಾರರಿಗೆ ಶಾಕ್, ₹2,000 ಮೇಲ್ಪಟ್ಟ UPI ಪಾವತಿಗೆ ಶುಲ್ಕ!

ನವದೆಹಲಿ: ₹2,000ಕ್ಕಿಂತ ಹೆಚ್ಚಿನ ಮೊತ್ತದ ಯುಪಿಐ (UPI) ಪಾವತಿಗಳ ಮೇಲೆ ವ್ಯಾಪಾರಿ ರಿಯಾಯಿತಿ ದರ (MDR) ವಿಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ತೆರಿಗೆ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆಯಲ್ಲಿ, ಬ್ಯಾಂಕುಗಳು ಮತ್ತು ಪಾವತಿ ಸೇವಾ ಪೂರೈಕೆದಾರರು ಅಧಿಸೂಚಿತ ಎಲೆಕ್ಟ್ರಾನಿಕ್ ಪಾವತಿಗಳ ಮೇಲೆ ಎಂಡಿಆರ್ ವಿಧಿಸುವುದನ್ನು ತಡೆಯುವ ನಿರ್ಬಂಧವನ್ನು ತೆಗೆದುಹಾಕುವ ಪ್ರಸ್ತಾಪ ಮಾಡಲಾಗಿದೆ. ಆದರೆ, ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬುದರ ಕುರಿತು ಇನ್ನೂ ಅಂತಿಮ […]

ಆಗಸದಿಂದ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ,12 ಮಂದಿಗೆ ಗಾಯ, ಪ್ರಯಾಣಿಕರು ಪಾರು

ನವದೆಹಲಿ: ಫುಕೆಟ್‌ನಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾದ AI2379 ವಿಮಾನವು ಮಂಗಳವಾರ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ ಸಿಲುಕಿದ ಪರಿಣಾಮ ಏಕಾಏಕಿ ಸುಮಾರು 300 ಅಡಿ ಕುಸಿದಿದ್ದು, ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 12 ಮಂದಿ ಗಾಯಗೊಂಡಿದ್ದಾರೆ. ವಿಮಾನಕ್ಕೂ ಸಣ್ಣ ಪ್ರಮಾಣದ ಹಾನಿಯಾಗಿದೆ. ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದ ವಿಮಾನವು ನಿಗದಿಯಂತೆ ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕ್ಲಿಯರ್ ಏರ್ ಟರ್ಬುಲೆನ್ಸ್ (CAT) ಅಥವಾ […]