ರಷ್ಯಾದಲ್ಲಿ ಭಾರತೀಯ ಮಳಿಗೆಗಳನ್ನು ತೆರೆಯುವ ಬಗ್ಗೆ ಮಾತುಕತೆ ನಡೆಯುತ್ತಿದೆ: ವ್ಲಾದಿಮಿರ್ ಪುಟಿನ್

ಮಾಸ್ಕೋ: ಉಕ್ರೇನ್ ಮೇಲಿನ ಆಕ್ರಮಣದ ನಂತರ ಮಾಸ್ಕೋದ ಮೇಲೆ ಪಾಶ್ಚಿಮಾತ್ಯ ದೇಶಗಳ ಭಾರೀ ನಿರ್ಬಂಧಗಳ ನಡುವೆ ರಷ್ಯಾದಲ್ಲಿ ಭಾರತೀಯ ಮಳಿಗೆಗಳ ಸರಪಳಿಗಳನ್ನು ತೆರೆಯಲು ಮಾತುಕತೆ ನಡೆಯುತ್ತಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. “ರಷ್ಯಾದ ವ್ಯಾಪಾರ ವಲಯಗಳು ಮತ್ತು ಬ್ರಿಕ್ಸ್ ದೇಶಗಳ ವ್ಯಾಪಾರ ಸಮುದಾಯದ ನಡುವಿನ ಸಂಬಂಧಗಳು ಹೆಚ್ಚಾಗಿವೆ. ಉದಾಹರಣೆಗೆ, ರಷ್ಯಾದಲ್ಲಿ ಭಾರತೀಯ ಸರಣಿ ಮಳಿಗೆಗಳನ್ನು ತೆರೆಯಲು ಮಾತುಕತೆಗಳು ನಡೆಯುತ್ತಿವೆ ಮತ್ತು ನಮ್ಮ ಮಾರುಕಟ್ಟೆಯಲ್ಲಿ ಚೀನೀ ಕಾರುಗಳು, ಉಪಕರಣಗಳು ಮತ್ತು ಹಾರ್ಡ್‌ವೇರ್‌ಗಳ ಪಾಲು ಹೆಚ್ಚುತ್ತಿವೆ. ಅದಕ್ಕೆ […]
ಅಫ್ಘಾನಿಸ್ತಾನ 6.1 ತೀವ್ರತೆಯ ಭೂಕಂಪ: ಕನಿಷ್ಠ 250 ಮಂದಿ ಸಾವು, ಹಲವರಿಗೆ ಗಾಯ

ಕರಾಚಿ: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಬುಧವಾರ ಭೂಕಂಪನದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.1ರಷ್ಟು ದಾಖಲಾಗಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಖೋಸ್ತ್ ನಗರದಿಂದ ಸುಮಾರು 44 ಕಿಮೀ ದೂರದಲ್ಲಿದೆ ಮತ್ತು ಭೂಮಿಯೊಳಗೆ 51 ಕಿಮೀ ಆಳದಲ್ಲಿದೆ. ಭೂಕಂಪನವನ್ನು ಪಾಕಿಸ್ತಾನ ಮತ್ತು ಭಾರತದ ಜನರು ಅನುಭವಿಸಿದ್ದಾರೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (ಇ ಎಂ ಎಸ್ ಸಿ) ತಿಳಿಸಿದೆ. ಇಸ್ಲಾಮಾಬಾದ್ ಮತ್ತು ದೇಶದ ಇತರ ಭಾಗಗಳಲ್ಲಿ […]
ಅಗ್ನಿಪಥ್ ನೇಮಕಾತಿ: ಜೂನ್ 24 ರಿಂದ ಭಾರತೀಯ ವಾಯುಪಡೆಯ ನೋಂದಣಿ ಪ್ರಕ್ರಿಯೆ ಆರಂಭ

ನವದೆಹಲಿ: ಭಾರತೀಯ ವಾಯುಪಡೆಯ ಅಗ್ನಿಪಥ್ ನೇಮಕಾತಿ ಯೋಜನೆಗೆ ನೋಂದಣಿಯು ಜೂನ್ 24 ರಿಂದ ಪ್ರಾರಂಭವಾಗಿ ಜುಲೈ 5ಕ್ಕೆ ಕೊನೆಗೊಳ್ಳಲಿದೆ. ಆನ್‌ಲೈನ್ ಪರೀಕ್ಷೆಯು ಜುಲೈ 24ರಂದು ಪ್ರಾರಂಭವಾಗಲಿದೆ. ಹೆಚ್ಚಿನ ವಿವರಗಳಿಗಾಗಿ ಆಕಾಂಕ್ಷಿಗಳು careerindianairforce.cdac.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅರ್ಹತೆ: 17.5 ವರ್ಷದಿಂದ 21 ವರ್ಷ ವಯಸ್ಸಿನ ಅಭ್ಯರ್ಥಿಗಳು ನೋಂದಣಿ ಮಾಡಬಹುದು. ಈ ವರ್ಷಕ್ಕೆ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ಏರಿಸಲಾಗಿದೆ. ಹೆಚ್ಚುವರಿ ಶೈಕ್ಷಣಿಕ ಅರ್ಹತೆಗಳು ಮತ್ತು ದೈಹಿಕ ಮಾನದಂಡಗಳು ಇದ್ದಲ್ಲಿ ಭಾರತೀಯ ವಾಯುಪಡೆಯು ಸೂಚಿಸಲಿದೆ. ಅಗ್ನಿವೀರ್ ಅಭ್ಯರ್ಥಿಗಳು […]
ಪ್ರಾಣವನ್ನೂ ಲೆಕ್ಕಿಸದೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿಯ ಹೆಡೆ ಮುರಿ ಕಟ್ಟಿದ ಕೇರಳದ ಸಿಂಘಂ ಬಗ್ಗೆ ವ್ಯಾಪಕ ಮೆಚ್ಚುಗೆ

ತಿರುವನಂತಪುರಂ: ಇಲ್ಲಿನ ಆರೋಪಿಯೊಬ್ಬ ಪೋಲೀಸ್ ಸಬ್ ಇನ್ಸ್‌ಪೆಕ್ಟರ್ ಮೇಲೆ ತಲವಾರಿನಿಂದ ಹಲ್ಲೆ ಮಾಡುತ್ತಿದ್ದು, ಅದನ್ನು ಸಮರ್ಥವಾಗಿ ಎದುರಿಸಿ, ಆರೋಪಿಯನ್ನು ಹೆಡೆಮುರಿ ಕಟ್ಟಿ ಪೊಲೀಸ್ ಜೀಪಿನಲ್ಲಿ ತಳ್ಳುತ್ತಿರುವ ವಿಡಿಯೋ ದೃಶ್ಯವೊಂದು ವೈರಲ್ ಆಗಿದ್ದು, ವಿಡೀಯೋದಲ್ಲಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನ ಸಮಯೋಚಿತ ಕ್ರಮಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಆರೋಪಿ ಮಚ್ಚಿನಿಂದ ಹಲ್ಲೆ ನಡೆಸುತ್ತಿದ್ದರೂ ಪ್ರಾಣವನ್ನೂ ಲೆಕ್ಕಿಸದೆ ಆತನ ಕೈಯಿಂದ ಮಚ್ಚು ಕಸಿದು, ಆತನನ್ನು ಬಂಧಿಸಿದ ಸಬ್ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಕೇರಳ ಸಿಂಘಂ ಆಗಿ ಹೊರಹೊಮ್ಮಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ […]
ಅಂತಾರಾಷ್ಟ್ರೀಯ ದಿನ ರೇಖೆಯಲ್ಲಿ ಭಾರತೀಯ ನೌಕಾ ಪಡೆಯ ಯೋಗ ದಿನಾಚರಣೆ

ನವದೆಹಲಿ: ಭಾರತದ ಪೂರ್ವದಲ್ಲಿ ನಿಯೋಜಿಸಲಾದ ಭಾರತೀಯ ನೌಕಾಪಡೆಯ ಯುದ್ಧನೌಕೆ, ಐ ಎನ್ ಎಸ್ ಸಾತ್ಪುರ, ಪೆಸಿಫಿಕ್ ಮಹಾಸಾಗರದ ಮಧ್ಯದಲ್ಲಿ ಅಂತರಾಷ್ಟ್ರೀಯ ದಿನ ರೇಖೆಯ ಬಳಿ ಕಾರ್ಯನಿರ್ವಹಿಸುತ್ತಿದ್ದು, ಸಮುದ್ರದಲ್ಲಿ ಸಾಮಾನ್ಯ ಯೋಗ ಶಿಷ್ಟಾಚಾರವನ್ನು ನಡೆಸುವ ಮೂಲಕ ಭಾರತೀಯ ನೌಕಾಪಡೆಯ ಯೋಗ ಚಟುವಟಿಕೆಗಳ ಅಂತರರಾಷ್ಟ್ರೀಯ ದಿನವನ್ನು ಪ್ರಾರಂಭಿಸಿತು.