ಚಿನ್ನಾಭರಣ ಹಗರಣ ಪ್ರಕರಣ: ಕೇರಳ ಕಾಂಗ್ರೆಸ್ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಆಗ್ರಹ; ಪೊಲೀಸರಿಂದ ಜಲಫಿರಂಗಿ ಪ್ರಯೋಗ

ತಿರುವನಂತಪುರ: ಚಿನ್ನಾಭರಣ ಹಗರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ವಪ್ನಾ ಸುರೇಶ್ ಆರೋಪ ಮಾಡಿದ ಬೆನ್ನಲ್ಲೇ, ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಘಟಕ ಗುರುವಾರ ತಿರುವನಂತಪುರದಲ್ಲಿ ಪ್ರತಿಭಟನೆ ನಡೆಸಿದೆ. ಕೇರಳದ ರಾಜಧಾನಿಯಲ್ಲಿ ಕೇರಳ ಕಾಂಗ್ರೆಸ್ ಮಹಿಳಾ ಘಟಕ ಹಾಗೂ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗಿಸಿದ್ದಾರೆ. ಚಿನ್ನ ತುಂಬಿದ […]
18 ತಿಂಗಳ ಮಗುವನ್ನು ಕೊಳವೆ ಬಾವಿಯಿಂದ ಸುರಕ್ಷಿತವಾಗಿ ರಕ್ಷಿಸಿದ ಭಾರತೀಯ ಸೇನೆ

ಗುಜರಾತ್: ಗೋಲ್ಡನ್ ಕಟಾರ್ ಆರ್ಟಿಲರಿ ಬ್ರಿಗೇಡ್‌ನ ಕ್ಯಾಪ್ಟನ್ ಸೌರಭ್ ಮತ್ತು ಅವರ ತಂಡವು ಗುಜರಾತಿನ ಸುರೇಂದ್ರ ನಗರದಲ್ಲಿ 300 ಅಡಿ ಆಳದ ಕೊಳವೆ ಬಾವಿಯಿಂದ 18 ತಿಂಗಳ ಮಗು ಶಿವಂನನ್ನು ಸುರಕ್ಷಿತವಾಗಿ ರಕ್ಷಿಸಿ, ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ವಿಷಯದಲ್ಲಿ ತನ್ನ ಅಚಲವಾದ ಬದ್ಧತೆಗೆ ಮತ್ತೊಂದು ಪುರಾವೆಯನ್ನು ನೀಡುತ್ತಾ, ಭಾರತೀಯ ಸೇನೆಯು ಸುರೇಂದ್ರನಗರದ ಧರಂಗಧರ ತಾಲೂಕಿನ ದುದಾಪುರ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 18 ತಿಂಗಳ ಮಗುವನ್ನು ರಕ್ಷಿಸಿದೆ. ಮಂಗಳವಾರ ತಡರಾತ್ರಿ ಮಗು […]
ಕ್ರೆಡಿಟ್ ಕಾರ್ಡ್‌ಗಳನ್ನು ಯುಪಿಐಗೆ ಲಿಂಕ್ ಮಾಡಲು ಅನುಮತಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ರಿಸರ್ವ್ ಬ್ಯಾಂಕ್ ಬುಧವಾರ ಕ್ರೆಡಿಟ್ ಕಾರ್ಡ್‌ಗಳನ್ನು ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ನೊಂದಿಗೆ ಲಿಂಕ್ ಮಾಡಲು ಅವಕಾಶ ಮಾಡಿಕೊಟ್ಟಿದೆ. ಇದು ಯುಪಿಐ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ಪಾವತಿಗಳನ್ನು ಮಾಡಲು ಇನ್ನೂ ಹೆಚ್ಚಿನ ಜನರಿಗೆ ಅನುವು ಮಾಡಿಕೊಡಲಿದೆ. ಪ್ರಸ್ತುತ, ಯುಪಿಐ ಬಳಕೆದಾರರ ಡೆಬಿಟ್ ಕಾರ್ಡ್‌ಗಳ ಮೂಲಕ ಉಳಿತಾಯ ಅಥವಾ ಚಾಲ್ತಿ ಖಾತೆಗಳನ್ನು ಲಿಂಕ್ ಮಾಡುವ ಮೂಲಕ ವಹಿವಾಟುಗಳನ್ನು ನಡೆಸಲಾಗುತ್ತಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ದ್ವೈಮಾಸಿಕ ನೀತಿ ಪರಿಶೀಲನೆಯೊಂದಿಗೆ ನಿಯಂತ್ರಕ ಕ್ರಮಗಳನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಬಗ್ಗೆ […]
ಜಮ್ಮು ಮತ್ತು ಕಾಶ್ಮೀರ: ಕುಪ್ವಾರ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಒಬ್ಬ ಸೇರಿದಂತೆ 2 ಎಲ್‌ಇಟಿ ಭಯೋತ್ಪಾದಕರನ್ನು ಮಟ್ಟ ಹಾಕಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಮಟ್ಟಹಾಕಿದೆ. ಇಬ್ಬರೂ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಇ ತೈಬಾ (ಎಲ್‌ಇಟಿ) ಗೆ ಸೇರಿದವರು ಮತ್ತು ಇಬ್ಬರಲ್ಲಿ ಒಬ್ಬ ತುಫೈಲ್, ಪಾಕಿಸ್ತಾನದವನಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಇನ್ನಷ್ಟು ಉಗ್ರರಿಗಾಗಿ ಶೋಧ ಮುಂದುವರಿದಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಕುಪ್ವಾರದ ಚಕ್ರಸ್ ಕಂಡಿ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಸೋಮವಾರ ಮುಂಜಾನೆ, ಸೋಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ […]
ಭದೇರ್ವಾ ಪಟ್ಟಣದ ವಾಸುಕಿ ನಾಗ ದೇವಸ್ಥಾನ ವಿಧ್ವಂಸ ಪ್ರಕರಣ: ಜಮ್ಮುವಿನಲ್ಲಿ ಬೃಹತ್ ಪ್ರತಿಭಟನೆ

ಜಮ್ಮು: ದೋಡಾ ಜಿಲ್ಲೆಯ ಭದೇರ್ವಾ ಪಟ್ಟಣದ ವಾಸುಕಿ ನಾಗ ದೇವಾಲಯವನ್ನು ಅಪವಿತ್ರಗೊಳಿಸಿದ ಒಂದು ದಿನದ ನಂತರ ಸೋಮವಾರ ಜಮ್ಮುವಿನಲ್ಲಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ. ಹಿಂದೂ ಸಮುದಾಯಕ್ಕೆ ಸೇರಿದ ಪ್ರತಿಭಟನಾಕಾರರು “ಹಿಂದೂ ದೇವಾಲಯ ಧ್ವಂಸಗೊಳಿಸುವುದನ್ನು ನಿಲ್ಲಿಸಿ” ಎಂದು ಬರೆಯಲಾದ ಫಲಕವನ್ನು ಹಿಡಿದುಕೊಂಡು ಧರಣಿ ನಡೆಸಿದ್ದಾರೆ. ಧರ್ಮಾರ್ಥ ಟ್ರಸ್ಟ್‌ನ ಒಡೆತನದಲ್ಲಿರುವ ಭದೇರ್ವಾ ಪಟ್ಟಣದ ಕೈಲಾಸ ಕುಂಡದ ವಾಸುಕಿ ನಾಗ ದೇಗುಲದಲ್ಲಿ ಶ್ರೀ ವಾಸುಕಿ ನಾಗರಾಜ ಮಹಾರಾಜರ ವಿಗ್ರಹಗಳನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಪಟ್ಟಣದ ಹಲವೆಡೆ ರಸ್ತೆ […]