ಹಿಂದೂಗಳನ್ನು ಗುರಿಯಾಗಿಸಿ ಉದ್ದೇಶಿತ ಹತ್ಯೆ: ಕಾಶ್ಮೀರದಿಂದ ಮತ್ತೊಮ್ಮೆ ಪಂಡಿತರ ಪಲಾಯನ

ನವದೆಹಲಿ: ಉದ್ದೇಶಿತ ಹತ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರಿ ಪಂಡಿತರು ಸೇರಿದಂತೆ ಕಾಶ್ಮೀರದಲ್ಲಿ ವಾಸಿಸುವ ಹಿಂದೂಗಳು ಕಣಿವೆಯನ್ನು ತೊರೆಯುತ್ತಿದ್ದಾರೆ ಎಂದು ವರದಿಯಾಗಿದೆ. ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ (ಜೂನ್ 2) ರಾಜಸ್ಥಾನದ ಬ್ಯಾಂಕ್ ಉದ್ಯೋಗಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಮೇ 1 ರಿಂದ ಇಂದಿನವರೆಗೆ ಇದು ಕಣಿವೆಯಲ್ಲಿ ನಡೆದ ಎಂಟನೇ ಮತ್ತು ಮುಸ್ಲಿಮೇತರ ಮೂರನೆ ಸರ್ಕಾರಿ ನೌಕರನ ಉದ್ದೇಶಿತ ಹತ್ಯೆಯಾಗಿದೆ. ಮಂಗಳವಾರ (ಮೇ 31) ಕುಲ್ಗಾಮ್ ಜಿಲ್ಲೆಯಲ್ಲಿ ಮಹಿಳಾ ಶಿಕ್ಷಕಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳ ನಂತರ, […]

ಕೇರಳದಲ್ಲಿ ಸಿಎಎ ಜಾರಿ ಇಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

ತಿರುವನಂತಪುರಂ: ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ತಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಪ್ರತಿಪಾದಿಸಿದ್ದಾರೆ. ತಮ್ಮ ಸರ್ಕಾರದ ಮೊದಲ ವಾರ್ಷಿಕೋತ್ಸವದ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಸರ್ಕಾರವು ಸ್ಪಷ್ಟ ನಿಲುವನ್ನು ಹೊಂದಿದೆ. ಅದು ಹಾಗೆಯೆ ಮುಂದುವರಿಯಲಿದೆ” ಎಂದು ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಕಾನೂನನ್ನು ಜಾರಿಗೊಳಿಸುವುದಾಗಿ ಆಗಾಗ್ಗೆ ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಅದರಲ್ಲಿ […]

ಇಡಿ ಭೀತಿ, ಕೋವಿಡ್ ಫಜೀತಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೋವಿಡ್ ಪಾಸಿಟಿವ್

ನವದೆಹಲಿ: ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ಪಾಸಿಟಿವ್ ಎಂದು ವರದಿಯಾಗಿದೆ ಎಂದು ಕಾಂಗ್ರೆಸ್‌ನ ರಣದೀಪ್ ಸುರ್ಜೇವಾಲಾ ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ -19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಕಂಡುಬಂದಿದೆ. ಅವರು ಸೌಮ್ಯ ಜ್ವರ ಮತ್ತು ಕೆಲವು ರೋಗಲಕ್ಷಣಗಳನ್ನುಹೊಂದಿದ್ದು, ತಮ್ಮನ್ನು ತಾವು ಪ್ರತ್ಯೇಕಿಸಿಕೊಂಡಿದ್ದಾರೆ. ಅವರಿಗೆ ಅಗತ್ಯ ವೈದ್ಯಕೀಯ ಆರೈಕೆಯನ್ನು ನೀಡಲಾಗುತ್ತಿದೆ ಎಂದು ಸುರ್ಜೇವಾಲ ಹೇಳಿದ್ದಾರೆ. ಜಾರಿ ನಿರ್ದೇಶನಾಲಯದ (ಇಡಿ) ಅಧಿಕೃತ ನೋಟಿಸ್‌ನಲ್ಲಿ ಜೂನ್ 8 ರಂದು ಸೋನಿಯಾ ಗಾಂಧಿ ಮತ್ತು ಜೂನ್ 2 […]

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್‌ಗೆ ಇಡಿ ಸಮನ್ಸ್

  ನವದೆಹಲಿ: ಕಾಂಗ್ರೆಸ್ ಪಕ್ಷದ ಒಡೆತನದ ಮತ್ತು ಪಕ್ಷ ನಡೆಸುತ್ತಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ನಿರ್ವಹಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. 2013 ರಲ್ಲಿ ದೆಹಲಿಯ ವಿಚಾರಣಾ ನ್ಯಾಯಾಲಯದಲ್ಲಿ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಮೇರೆಗೆ ಕಾಂಗ್ರೆಸ್ ನಾಯಕರ ವಿರುದ್ಧ ಐಟಿ ತನಿಖೆ […]

ಜೂನ್ 1 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 135 ರೂ ಕಡಿತ: ಗೃಹಬಳಕೆಯ ಸಿಲಿಂಡರ್ ಬೆಲೆ ಯಥಾಸ್ಥಿತಿ

ನವದೆಹಲಿ: ಜೂನ್ 1 ರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 135 ರೂ ಕಡಿತ ಮಾಡಲಾಗಿದೆ. ಬುಧವಾರ ಬೆಳಗ್ಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 135 ರೂ ನಷ್ಟು ಇಳಿಕೆಮಾಡಲಾಗಿದೆ. ಮೂರು ತಿಂಗಳ ಸತತ ಏರಿಕೆಯ ನಂತರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇದು ಮೊದಲನೆ ಇಳಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ ಈಗ ದೆಹಲಿಯಲ್ಲಿ 2,219 ರೂ., ಕೋಲ್ಕತ್ತಾದಲ್ಲಿ 2,322 ರೂ., ಮುಂಬೈನಲ್ಲಿ 2,171.50 ರೂ., ಮತ್ತು ಚೆನ್ನೈನಲ್ಲಿ […]