ಜೋರ್ಡಾನ್ ಮೇಲಿನ ದಾಳಿಗೆ ಇರಾನ್ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿದ ಅಮೇರಿಕಾ; ಉಗ್ರ ನೆಲೆ ಧ್ವಂಸ
ಟೆಹ್ರಾನ್: ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್ ನೆಲೆಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಏರ್‌ಸ್ಟ್ರೈಕ್ ಮಾಡಿದ್ದು, 85 ಗುರಿಗಳ ಮೇಲೆ ದಾಳಿ ನಡೆಸಿದೆ. ಜೋರ್ಡಾನ್ ಮೇಲಿನ ದಾಳಿಗೆ ಅಮೆರಿಕ ಪ್ರತಿದಾಳಿ ಮಾಡಿದ್ದು, ಏಳು ಸ್ಥಳಗಳನ್ನು ಗುರಿಯಾಗಿಸಿ 17 ಉಗ್ರರನ್ನು ಮಟ್ಟಹಾಕಿದೆ. 85 ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಘಟಕಗಳ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದೆ. ಕಮಾಂಡ್, ಕಂಟ್ರೋಲ್ ಸೆಂಟರ್, ರಾಕೆಟ್, ಕ್ಷಿಪಣಿ, ಡ್ರೋನ್ ಸಂಗ್ರಹಣಾ ಕೇಂದ್ರ, ಲಾಜಿಸ್ಟಿಕ್ಸ್ ಹಾಗೂ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿ ಇಟ್ಟಿದ್ದ ಸ್ಥಳಗಳನ್ನೇ ಅಮೆರಿಕ ಟಾರ್ಗೆಟ್ ಮಾಡಿದೆ. […]
ಅಂತ್ಯೋದಯ ಪಡಿತರ ಚೀಟಿಗಳಿಗೆ ಸಕ್ಕರೆ ಸಬ್ಸಿಡಿ ಯೋಜನೆ 2 ವರ್ಷಗಳವರೆಗೆ ವಿಸ್ತರಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ
ನವದೆಹಲಿ: ಕೇಂದ್ರ ಸರ್ಕಾರವು 1.89 ಕೋಟಿ ಅಂತ್ಯೋದಯ ಅನ್ನ ಯೋಜನೆ (AAY) ಕುಟುಂಬಗಳಿಗೆ ಪಡಿತರ ಅಂಗಡಿಗಳ ಮೂಲಕ ಎರಡು ವರ್ಷಗಳವರೆಗೆ ಸಕ್ಕರೆಯ ಸಬ್ಸಿಡಿ ಯೋಜನೆಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಸಾರ್ವಜನಿಕ ವಿತರಣಾ ಯೋಜನೆ (ಪಿಡಿಎಸ್) ಮೂಲಕ ವಿತರಿಸಲಾದ ಎಎವೈ ಕುಟುಂಬಗಳಿಗೆ ಸಕ್ಕರೆ ಸಬ್ಸಿಡಿ ಯೋಜನೆಯನ್ನು ಮಾರ್ಚ್ 31, 2026 ರವರೆಗೆ ವಿಸ್ತರಿಸಲು ಅನುಮೋದನೆ ನೀಡಿದೆ. ಈ ಅನುಮೋದನೆಯೊಂದಿಗೆ, ಸರ್ಕಾರವು ಪ್ರತಿ ಕುಟುಂಬಕ್ಕೆ ತಿಂಗಳಿಗೆ ಒಂದು […]
ಮಾಲ್ಡೀವ್ಸ್‌ಗೆ ನೀಡುವ ಆರ್ಥಿಕ ಸಹಾಯ ಶೇಕಡಾ 22 ರಷ್ಟು ಕಡಿತ; ಲಕ್ಷದ್ವೀಪ ಅಭಿವೃದ್ದಿಯತ್ತ ಭಾರತ ಚಿತ್ತ
ನವದೆಹಲಿ: ಗುರುವಾರ ಸರ್ಕಾರ ಬಿಡುಗಡೆ ಮಾಡಿದ ಮಧ್ಯಂತರ ಬಜೆಟ್ ದಾಖಲೆಯ ಪ್ರಕಾರ, 2024-25 ರ ಆರ್ಥಿಕ ವರ್ಷಕ್ಕೆ ಮಾಲ್ಡೀವ್ಸ್‌ಗೆ ನೀಡುವ ಆರ್ಥಿಕ ಸಹಾಯವನ್ನು ಶೇಕಡಾ 22 ರಷ್ಟು ಕಡಿತಗೊಳಿಸಲು ಭಾರತ ಪ್ರಸ್ತಾಪಿಸಿದೆ. ಕಳೆದ ಕೆಲವು ವರ್ಷಗಳಿಂದ, ಭಾರತವು ಮಾಲ್ಡೀವ್ಸ್‌ಗೆ ಪ್ರಮುಖ ನೆರವು ಮತ್ತು ಸಹಾಯ ಪಾಲುದಾರನಾಗಿದೆ. ದ್ವೀಪ ರಾಷ್ಟ್ರಕ್ಕೆ ಭಾರತದ ನೆರವು ರಕ್ಷಣೆ, ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯದಂತಹ ಕ್ಷೇತ್ರಗಳನ್ನು ಒಳಗೊಂಡಿರುತ್ತದೆ. ಮಾಲ್ಡೀವ್ಸ್‌ಗೆ ಅಭಿವೃದ್ಧಿ ಸಹಾಯಕ್ಕಾಗಿ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. 2023-24ರಲ್ಲಿ ಮಾಲ್ಡೀವ್ಸ್‌ಗೆ 770.90 ಕೋಟಿ […]
30 ವರ್ಷಗಳ ಬಳಿಕ ಜ್ಞಾನವಾಪಿ ಮಂದಿರದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಿದ ಅರ್ಚಕರು
ವಾರಣಾಸಿ: ಜ್ಞಾನವಾಪಿ ಮಂದಿರದ ನೆಲಮಾಳಿಗೆಯಲ್ಲಿ ಸೀಲ್ ಮಾದುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಆದೇಶದ 30 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಹಿಂದೂ ಅರ್ಚಕರು ‘ವ್ಯಾಸರ ನೆಲಮಾಳಿಗೆ’ಯಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡರು. ಬುಧವಾರದಂದು ಜಿಲ್ಲಾ ನ್ಯಾಯಾಲಯವು ಸೀಲ್ ಮಾಡಲಾದ ಪ್ರದೇಶವನ್ನು ಭಕ್ತರ ಪ್ರವೇಶಕ್ಕೆ ಮುಕ್ತಗೊಳಿಸುವಂತೆ ಮತ್ತು ಪೂಜಾ ವಿಧಿ ವಿಧಾನಗಳನ್ನು ಜಿಲ್ಲಾಡಳಿತದ ಸುಪರ್ದಿಯಲ್ಲಿ ನಡೆಸುವಂತೆ ಆದೇಶ ನೀಡಿತ್ತು. ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಂದಿರದ ಸಮೀಪವಿರುವ ಪ್ರದೇಶವು ನಿನ್ನೆ […]
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 55 ಲಕ್ಷ ಉದ್ಯೋಗಾವಕಾಶ ಸೃಜನೆ; ಐದು ಇಂಟಿಗ್ರೇಟೆಡ್ ಅಕ್ವಾ ಪಾರ್ಕ್ ಸ್ಥಾಪನೆ
ನವದೆಹಲಿ: ಗುರುವಾರದಂದು ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೀನುಗಾರಿಕಾ ಕ್ಷೇತ್ರಕ್ಕೆ ನೀಡಲಾದ ಪ್ರೋತ್ಸಾಹದ ಬಗ್ಗೆ ಸದನಕ್ಕೆ ತಿಳಿಸಿದರು. “ಮೀನುಗಾರರಿಗೆ ಸಹಾಯ ಮಾಡುವ ಮಹತ್ವವನ್ನು ಅರಿತು ಮೀನುಗಾರಿಕೆಗಾಗಿ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಇದು ಒಳನಾಡು ಮತ್ತು ಜಲಚರಗಳ ಉತ್ಪಾದನೆಯನ್ನು ದ್ವಿಗುಣಗೊಳಿಸಿದೆ. 2013-14 ರಿಂದ ಸಮುದ್ರಾಹಾರ ರಫ್ತು ಕೂಡ ದ್ವಿಗುಣಗೊಂಡಿದೆ. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (PMMSY) ಅನುಷ್ಠಾನವನ್ನು ಪ್ರತಿ ಹೆಕ್ಟೇರ್‌ಗೆ 3 ರಿಂದ 5 ಟನ್ ಗಳವರೆಗೆ ಜಲಕೃಷಿ […]