ಗ್ರಾಹಕರಿಗೆ ಶುಭ ಸಮಾಚಾರ! ಸರ್ಕಾರದ ಈ ಕ್ರಮದಿಂದ ಕಡಿಮೆಯಾಗಲಿದೆ ಖಾದ್ಯ ತೈಲ ಬೆಲೆ!

ನವದೆಹಲಿ: ಗ್ರಾಹಕರಿಗೆ ಅಗತ್ಯವಾದ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರವು ವಾರ್ಷಿಕ 20 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಚ್ಚಾ ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯ ಮೇಲಿನ ಕಸ್ಟಮ್ಸ್ ಸುಂಕ ಮತ್ತು ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್‌ನಿಂದ ವಿನಾಯಿತಿ ನೀಡಿದೆ. ಹಣಕಾಸು ಸಚಿವಾಲಯದ ಅಧಿಸೂಚನೆಯ ಪ್ರಕಾರ, ಆದೇಶವು ಮೇ 25, 2022 ರಂದು ಜಾರಿಗೆ ಬರಲಿದೆ ಮತ್ತು ಮಾರ್ಚ್ 31, 2024 ರ ನಂತರ ಅನ್ವಯವು ನಿಲ್ಲಿಸಲಾಗುತ್ತದೆ. ಈ ಬಗ್ಗೆ ಎಂದು ಸಿಬಿಐಸಿ ಟ್ವೀಟ್ ಮಾಡಿದೆ. Central […]

ಪ್ಲಾಸ್ಟಿಕ್ ಮಯವಾಯಿತು ದೇವಭೂಮಿ! ಕೇದಾರನಾಥದ ರಸ್ತೆಯುದ್ದಕ್ಕೂ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಕಸದ ರಾಶಿಯ ಸ್ವಾಗತ!!

ಉತ್ತರಾಖಂಡ: ಹಿಂದೂಗಳ ಪವಿತ್ರ ಕ್ಷೇತ್ರ, ದೇವ ಭೂಮಿಯೆಂದೇ ಪ್ರಸಿದ್ದವಾದ ಉತ್ತರಾಖಂಡದಲ್ಲಿಂದು ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಕಸದ ರಾಶಿ! ಕೇದಾರನಾಥನ ದರ್ಶನಕ್ಕಾಗಿ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಸ್ವಚ್ಛತೆಯನ್ನು ನಿರ್ವಹಣೆ ಮಾಡುವಲ್ಲಿ ನಾಗರಿಕರ ಮತ್ತು ಸ್ಥಳೀಯ ಆಡಳಿತದ ಅಸಡ್ಡೆ ಢಾಳಾಗಿ ಎದ್ದು ಕಾಣುತ್ತಿದೆ. ಚಾರ್ ಧಾಮ್ ಯಾತ್ರೆಗೆಂದು ಬರುವ ಭಕ್ತಾದಿಗಳಿಗೆ ಪ್ಲಾಸ್ಟಿಕ್ ಮತ್ತು ಕಸದ ರಾಶಿಯ ದರ್ಶನ ಭಾಗ್ಯವೂ ಲಭ್ಯವಾಗುತ್ತಿರುವುದು ಕೇದಾರನಾಥನ ದೌರ್ಭಾಗ್ಯವೇ ಸರಿ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗರ್ವಾಲ್ ಕೇಂದ್ರೀಯ ವಿಶ್ವವಿದ್ಯಾಲಯ ಭೂಗೋಳಶಾಸ್ತ್ರ […]

ಭಾರತ ಉತ್ತಮ ಸ್ಥಿತಿಯಲ್ಲಿಲ್ಲ, ಪ್ರಧಾನಿ ನರೇಂದ್ರ ಮೋದಿ ಮಾತು ಕೇಳುತ್ತಿಲ್ಲ: ರಾಹುಲ್ ಗಾಂಧಿ

ಲಂಡನ್: ಮೇ 20 ಶುಕ್ರವಾರದಂದು ಲಂಡನ್‌ನಲ್ಲಿ ನಡೆದ “ಐಡಿಯಾಸ್ ಫಾರ್ ಇಂಡಿಯಾ” ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರದ ಭಾರತೀಯ ಜನತಾ ಪಕ್ಷ ಸರ್ಕಾರವನ್ನು ಟೀಕಿಸಿದ್ದಾರೆ. “ಭಾರತವು ಉತ್ತಮ ಸ್ಥಿತಿಯಲ್ಲಿಲ್ಲ” ಮತ್ತು ಪ್ರಧಾನಿ ನರೇಂದ್ರ ಮೋದಿ ” ಮಾತು ಕೇಳುವುದಿಲ್ಲ” ಎಂದು ಹೇಳಿರುವ ಅವರು ಭಾರತದ ಸಂವಿಧಾನದ ಮೇಲೆ ದಾಳಿ ನಡೆಯುತ್ತಿದೆ ಮತ್ತು ಈ ದಾಳಿಯ ಪರಿಣಾಮವಾಗಿ ಭಾರತದ ರಾಜ್ಯಗಳು “ಸರ್ಕಾರದೊಂದಿಗೆ ಇನ್ನು ಮುಂದೆ ಮಾತುಕತೆ ನಡೆಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. The Prime […]

ಯುರೋಪ್ ಅಮೇರಿಕಾಗಳಲ್ಲಿ ಹೆಚ್ಚುತ್ತಿರುವ ಮಂಕಿ ಪಾಕ್ಸ್ ಪ್ರಕರಣ: ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ಎಂದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ಇಟಲಿ, ನೆದರ್‌ಲ್ಯಾಂಡ್ಸ್, ಪೋರ್ಚುಗಲ್, ಸ್ಪೇನ್, ಸ್ವೀಡನ್, ಯುನೈಟೆಡ್ ಸ್ಟೇಟ್ಸ್, ಕೆನಡಾ, ಆಸ್ಟ್ರೇಲಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಹಲವಾರು ದೇಶಗಳಲ್ಲಿ ಮಂಗನ ಸಿಡುಬು ಕಾಯಿಲೆಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಕೋವಿಡ್-19 ರ ಸಂಕಟ ಇನ್ನೂ ಮುಗಿದಿಲ್ಲದಿರುವ ಈ ವೇಳೆಯಲ್ಲಿ ಜಗತ್ತು ಮತ್ತೊಂದು ಸಾಂಕ್ರಾಮಿಕಕ್ಕೆ ಬಲಿಯಾಗುತ್ತಿದೆಯೆ ಎನ್ನುವ ಅನುಮಾನ ಹಲವರನ್ನು ಕಾಡುತ್ತಿದೆ. ಈ ಮಧ್ಯೆ ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಿ, ಮಂಕಿಪಾಕ್ಸ್ ಪೀಡಿತ ದೇಶಗಳಿಗೆ ಪ್ರಯಾಣದ ಇತಿಹಾಸ ಹೊಂದಿರುವ ಯಾವುದೇ ಅಸ್ವಸ್ಥ ಪ್ರಯಾಣಿಕರನ್ನು […]

ಗ್ರಾಹಕರ ಕಿಸೆ ಸುಡುತ್ತಿದೆ ಅಡುಗೆ ಅನಿಲ: 1000 ರೂ ಗಡಿ ದಾಟಿದ ಎಲ್‌ಪಿಜಿ ಸಿಲಿಂಡರ್ ಬೆಲೆ

ಬೆಂಗಳೂರು: ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಗಳು ಏರಿಕೆಯಾಗಿದ್ದು, ಮೇ ತಿಂಗಳಲ್ಲಿ ಇದು ಎರಡನೇ ಏರಿಕೆಯಾಗಿದೆ. ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಈ ತಿಂಗಳಲ್ಲಿ ಎರಡನೇ ಬಾರಿಗೆ ಮತ್ತೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಬೆಲೆ ಪ್ರತಿ ಸಿಲಿಂಡರ್‌ಗೆ 3.50 ರೂಪಾಯಿ ಏರಿಕೆಯಾಗಿದ್ದು, ಗುರುವಾರ ವಾಣಿಜ್ಯ ಸಿಲಿಂಡರ್‌ನ ಬೆಲೆ 8 ರೂಪಾಯಿ ಏರಿಕೆಯಾಗಿದೆ. ಈ ಹೆಚ್ಚಳದೊಂದಿಗೆ ದೇಶದಾದ್ಯಂತ ಎಲ್ಲಾ ನಗರಗಳಲ್ಲಿ ಎಲ್‌ಪಿಜಿ ಬೆಲೆ 1000 ರೂ ಗಡಿ ದಾಟಲಿದೆ.