ಕನ್ನಡನಾಡಿನ ಸ್ತಬ್ದಚಿತ್ರಕ್ಕೆ ಸಿಕ್ಕಿತು ದ್ವಿತೀಯ ಬಹುಮಾನ

ನವದೆಹಲಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ. ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ ಪ್ರಶಸ್ತಿ ಘೋಷಿಸಿದ್ದು, ಕರಕುಶಲ ಕಲೆಯ ವೈಭವವನ್ನು ಬಿಂಬಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ ಲಭ್ಯವಾಗಿದೆ. ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತ ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದೆ ಮೇಘಾಲಯದ ಮಹಿಳೆಯರ ಸಹಕಾರ ಸಂಘ ಹಾಗೂ ರಾಜ್ಯದ ಸುವರ್ಣ ಮಹೋತ್ಸವ ಸಂಭ್ರಮ ಬಿಂಬಿಸುವ ಸ್ತಬ್ಧಚಿತ್ರ ತೃತೀಯ ಸ್ಥಾನ ದೊರೆತಿದೆ. ‘ವಂದೇ ಭಾರತಮ್’ […]
ಅಭಿಮಾನಿಗಳಿಗೆ ಪ್ರೀತಿಯ ಪತ್ರ: ಪತ್ರದಲ್ಲಿ ಪುನೀತ್ ರಾಜಕುಮಾರ್ ಪತ್ನಿ ಹೇಳಿದ್ದೇನು?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದಾಗಿನಿಂದಲೂ ಮೌನಕ್ಕೆ ಶರಣಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ, ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಚಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ […]
ಸತತ ಏಳನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

ದೆಹಲಿ: ದೇಶದಲ್ಲಿ ಸತತ ಏಳನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದ್ದು, ಜನಸಾಮಾನ್ಯರು ಮತ್ತಷ್ಟು ಹೊರೆ ಅನುಭವಿಸುವಂತಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 30 ಪೈಸೆ ಏರಿಕೆಯಾಗಿದ್ದು, ಲೀಟರ್‌ಗೆ ₹104.44 ಆಗಿದೆ. ಡೀಸೆಲ್ 35 ಪೈಸೆ ಏರಿದ್ದು ₹93.17 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಮೇಲೆ 29 ಪೈಸೆ ಏರಿಕೆಯಾಗಿದ್ದು, ₹110.41 ಆಗಿದೆ. ಡೀಸೆಲ್ ಬೆಲೆ ಇಂದು ಲೀಟರ್‌ಗೆ 101.03 ಆಗಿದ್ದು, 37 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 31 ಪೈಸೆ ಏರಿದೆ. ಇದರೊಂದಿಗೆ […]
ಎಸ್‌ಬಿಐನಲ್ಲಿ 2056 ಪ್ರೊಬೆಷನರಿ ಆಫೀಸರ್ ಹುದ್ದೆ: ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಸಹಾಯಕ ಪ್ರಾಧ್ಯಾಪಕರು, ರಿಸರ್ಚ್ ಅಸೋಸಿಯೇಟ್, ಹಿಂದಿ ಆಫೀಸರ್, ಐಟಿ ಎಂಜಿನಿಯರ್, ಐಟಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಸೇರಿದಂತೆ ಇತರ ಹುದ್ದೆಗಳು. ವಿದ್ಯಾರ್ಹತೆ: ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. ವಯೋಮಿತಿ: ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ಹಾಗೂ ಗರಿಷ್ಠ 45 ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಹಾಗೂ ಇತರ ಮಾನದಂಡಗಳು ಅರ್ಜಿ […]
ಕಾಬೂಲ್ನಲ್ಲಿ ಸಾವಿನ ಸಂಖ್ಯೆ 90ಕ್ಕೆ ಏರಿಕೆ

ಅಪ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣ ದಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 90ಕ್ಕೆ ಏರಿಕೆಯಾಗಿದ್ದು, ಸುಮಾರು 150 ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಐಸಿಸ್-ಕೆ(ಇಸ್ಲಾಮಿಕ್ ಸ್ಟೇಟ್-ISIS) ಹೊತ್ತುಕೊಂಡಿದೆ. ಗುರುವಾರ ಸಂಜೆ ಕಾಬೂಲ್ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಒಂದು ಸ್ಪೋಟ ಸಂಭವಿಸಿತ್ತು. ಬಳಿಕ ರಾತ್ರಿಯೇ ಮತ್ತೊಂದು ಸ್ಪೋಟ ಸಂಭವಿಸಿತ್ತು. ಆಗ 12 ಮಂದಿ ಅಮೆರಿಕ ಮಿಲಿಟರಿ ಸಿಬ್ಬಂದಿ ಹಾಗೂ ಅನೇಕ ಸೇವಾ ಸಿಬ್ಬಂದಿ ಸೇರಿದಂತೆ ಸುಮಾರು ಜನರು ಈ ದುರಂತದಲ್ಲಿ ಸಾವನ್ನಪ್ಪಿದ್ದರು. ಅಮೆರಿಕ […]