ಇಂಡೋನೇಷ್ಯಾದ ಶ್ರೀವಿಜಯ ಡೊಮೆಸ್ಟಿಕ್ ವಿಮಾನ ಪತನ: 62 ಮಂದಿ ದುರ್ಮರಣ

ನವದೆಹಲಿ: 62 ಮಂದಿ ಪ್ರಯಾಣಿಸುತ್ತಿದ್ದ ಇಂಡೋನೇಷ್ಯಾದ ಶ್ರೀವಿಜಯ ಏರ್ ಎಸ್ ಜಿ 182 ಎಂಬ ಡೊಮೆಸ್ಟಿಕ್ ವಿಮಾನವು ಪತನಗೊಂಡಿದೆ. ಶನಿವಾರ ಸೂಕರ್ನೊ-ಹಟ್ಟಾ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆದ ಕೆಲ ಹೊತ್ತಿನಲ್ಲೇ ವಿಮಾನ ಸಂಪರ್ಕ ಕಳೆದುಕೊಂಡಿತ್ತು. ಇದೀಗ ಆ ವಿಮಾನ ಸಮುದ್ರದಲ್ಲಿ ಪತನಗೊಂಡಿದೆ ಎಂದು ತಿಳಿದುಬಂದಿದೆ. ಆರು ಮಕ್ಕಳು ಸಹಿತ 62 ಮಂದಿ ಪ್ರಯಾಣಿಸುತ್ತಿದ್ದರು. ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಹಂತದ ಮಾಹಿತಿ ಲಭಿಸಿದೆ. ವಿಮಾನವು ಸ್ಫೋಟಗೊಂಡಿದ್ದು, ಅದರ ಭಾಗಗಳು ಛಿದ್ರಗೊಂಡಿದೆ. ರಕ್ಷಣಾ ಪಡೆಯ ಸಿಬ್ಬಂದಿಗೆ ಅದರ ಅವಷೇಶಗಳು […]
ಇಂಡೋನೇಷ್ಯಾದ ಡೊಮೆಸ್ಟಿಕ್ ವಿಮಾನ ನಾಪತ್ತೆ

ನವದೆಹಲಿ: ಇಂಡೋನೇಷ್ಯಾದ ಶ್ರೀವಿಜಯ ಏರ್ ಎಸ್ ಜಿ 182 ಎಂಬ ಡೊಮೆಸ್ಟಿಕ್ ವಿಮಾನ ನಾಪತ್ತೆಯಾಗಿದೆ. ಜಕಾರ್ತದಿಂದ ಹೊರಟಿದ್ದ ವಿಮಾನವು ಟೇಕ್ಆಫ್ ಆದ ಕೆಲವೇ ಕ್ಷಣದಲ್ಲಿ ವಿಮಾನ ಸಂಪರ್ಕ ಕಳೆದುಕೊಂಡಿದೆ. ಈ ವಿಮಾನದಲ್ಲಿ ಆರು ಮಕ್ಕಳು ಸಹಿತ 59 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವಿಮಾನ ಶನಿವಾರ ಸೂಕರ್ನೊ-ಹಟ್ಟಾ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆಗಿತ್ತು. ಈ ವಿಮಾನ ಸಂಪರ್ಕ ಕಳೆದುಕೊಂಡು ಸಮುದ್ರಕ್ಕೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ವಿಮಾನಕ್ಕಾಗಿ ರಕ್ಷಣಾಪಡೆ ಹುಡುಕಾಟ ಆರಂಭಿಸಿದೆ. ಜಕಾರ್ತದಿಂದ ಹೊರಟ ವಿಮಾನ ನಾಲ್ಕು ನಿಮಿಷಗಳಲ್ಲಿ […]
ಕೋಲ್ಕತಾ: ಹಿಂಸಾಚಾರ ರೂಪಕ್ಕೆ ತಿರುಗಿದ ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ

ಕೋಲ್ಕತಾ: ರಾಜ್ಯದಲ್ಲಿ ನಡೆದಂತಹ ಬಿಜೆಪಿ ಮುಖಂಡರ ಹತ್ಯೆ ಖಂಡಿಸಿ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಇಂದು ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಂಡ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ಕಾರ್ಯಕರ್ತರ ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಕಾರ್ಯಕರ್ತರು ಪಶ್ಚಿಮ ಬಂಗಾಳ ಸಚಿವಾಲಯದ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಕೇಸರಿ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ […]
ಇಂದು ರಾಹುಲ್‌ಗಾಂಧಿ ನೇತೃತ್ವದಲ್ಲಿ ಉ.ಪ.ಸಂತ್ರಸ್ತೆಯ ಕುಟುಂಬದ ಭೇಟಿ

ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.ಉತ್ತರ ಪ್ರದೇಶದ ಸಿಎಂ ಯೋಗಿ ವಿರುದ್ದವೂ ಜನಾಕ್ರೋಶ ವ್ಯಕ್ತವಾಗಿದೆ.ಇಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಲಿದೆ. ಪಕ್ಷದ ಸಂಸದರೊಂದಿಗೆ ರಾಹುಲ್ ಗಾಂಧಿ ಇಂದು ಮಧ್ಯಾಹ್ನ ಹತ್ರಾಸ್ ಗೆ ಭೇಟಿ ನೀಡಲಿದ್ದು, ಬರ್ಬರ ರೀತಿಯಲ್ಲಿ ಹಲ್ಲೆಗೊಳಗಾಗಿ ಮೃತಪಟ್ಟಿರುವ 19 ವರ್ಷದ ಹೆಣ್ಣುಮಗಳ ಕುಟುಂಬ ಸದಸ್ಯರನ್ನು ಭೇಟಿ ಮಾಡುವುದಾಗಿ ಕಾಂಗ್ರೆಸ್ […]
ಅತ್ಯಾಚಾರಕ್ಕೊಳಗಾದ ಯುವತಿ ಸಾವು: ಪೊಲೀಸರಿಂದ ರಾತ್ರೋರಾತ್ರಿ ಶವ ಸಂಸ್ಕಾರ

ನವದೆಹಲಿ: ಕಳೆದ 15 ದಿನಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೆಹಲಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದ ಉತ್ತರ ಪ್ರದೇಶದ 19 ವರ್ಷದ ಯುವತಿಯ ಅಂತ್ಯ ಸಂಸ್ಕಾರವನ್ನು ಪೊಲೀಸರು ಮನೆಯವರಿಗೂ ತಿಳಿಸದೆ ರಾತ್ರೋರಾತ್ರಿ ಮಾಡಿ ಮುಗಿಸಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಯುವತಿಯ ಪೋಷಕರು, ಸಂಬಂಧಿಕರನ್ನು ಮನೆಯಲ್ಲಿಯೇ ಕೂಡಿಹಾಕಿದ್ದಾರೆ ಎನ್ನಲಾಗಿದೆ. ರಾತ್ರಿಯಲ್ಲಿ ಸೆರೆಹಿಡಿಯಲಾದ ದೃಶ್ಯಗಳಲ್ಲಿ ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿದ್ದು, ಯುವತಿಯ ಮೃತ ದೇಹವನ್ನು ಕೊಂಡೊಯ್ಯುವಾಗ ಮಹಿಳಾ ಸಂಬಂಧಿಕರನ್ನು ಪಕ್ಕಕ್ಕೆ ಸರಿಸಿದ ಪೊಲೀಸರು, ಅಂತಿಮ ದರ್ಶನಕ್ಕೂ ಅವಕಾಶ ನೀಡದೆ ನೇರವಾಗಿ ಶವಸಂಸ್ಕಾರಕ್ಕೆ ಕರೆದೊಯ್ಯುತ್ತಾರೆ. […]