ಅಸ್ಸಾಂ ಪ್ರವಾಹ ಪರಿಸ್ಥಿತಿ ಸುಧಾರಿಸಿದ್ರೂ 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಈಗ ಕೊಂಚ ಸುಧಾರಿಸಿದೆ, ಕಳೆದ 24 ಗಂಟೆಯಲ್ಲಿ ಯಾವುದೇ ಸಾವು – ನೋವುಗಳು ಸಂಭವಿಸಿಲ್ಲ. ಆದಾಗ್ಯೂ ಇಲ್ಲಿನ 6 ಜಿಲ್ಲೆಗಳ ಸುಮಾರು 4.45 ಲಕ್ಷಕ್ಕೂ ಹೆಚ್ಚು ಮಂದಿ ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲೇ ದಿನದೂಡುವಂತಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ಹೇಳಿದೆ. ASDMA ಬಿಡುಗಡೆ ಮಾಡಿದ ವರದಿ, ಶಿವಸಾಗರ್, ಗೋಲಾಘಾಟ್, ಚರೈದಿಯೋ, ಜೋರ್ಹಾಟ್, ನಾಗಾಂವ್ ಹಾಗೂ ಕಾಮರೂಪ್ (ಮೆಟ್ರೋಪಾಲಿಟನ್) ಜಿಲ್ಲೆಗಳ ಒಟ್ಟು 4,45,495 ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೋಲಾಘಾಟ್ […]

‘ಇದು ಕೇವಲ ಆರಂಭ ಅಷ್ಟೇ’ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೀಗಂದಿದ್ಯಾಕೆ?

ನವದೆಹಲಿ: ಜಂತರ್ ಮಂತರ್‌ನಲ್ಲಿ 37 ದಿನಗಳ ಕಾಲ ನಡೆದ ಪ್ರತಿಭಟನೆಯನ್ನು ಅಂತ್ಯಗೊಳಿಸಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ವಿಡಿಯೋ ಸಂದೇಶದ ಮೂಲಕ ಬೆಂಬಲಿಗರು ಹಾಗೂ ಟೀಕಾಕಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಜೊತೆಗೆ, ಪಕ್ಷದ ಹೋರಾಟ ಇನ್ನಷ್ಟೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಮುನ್ನಡೆಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆ […]

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್‌ ಜೋಶಿ ನೇಮಕ

ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಇಂದು ಸಂಜೆ ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಿದೆ. ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಪ್ರಲ್ಹಾದ್ ಜೋಷಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಸದ್ಯ ಆಹಾರ ಮತ್ತು ನಾಗರಿಕ ಪೂರೈಕೆ […]

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಪ್ರಧಾನ್‌, ಕಳೆದ ಹತ್ತು ದಿನಗಳಿಂದ ಏನೆಲ್ಲ ನಡೆಯಿತೋ ಅದನ್ನು ಕಂಡು ಬೇಸರವಾಗಿದೆ ಎಂದಿದ್ದಾರೆ. ‘ಮೊದಲ ದಿನದಿಂದಲೇ ನಾನು ಜವಾಬ್ದಾರಿ ಹೊತ್ತುಕೊಂಡಿದ್ದೇನೆ. ಈ ಸವಾಲಿನ ಪರಿಸ್ಥಿತಿಯಿಂದ ಹಿಂದೆ ಸರಿದಿಲ್ಲ’ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ‘ಜಂತರ್‌ ಮಂತರ್‌ ಹಾಗೂ ದೇಶದಾದ್ಯಂತ ದೇಶ ವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯುವಂತಾಗಬಾರದು’ ಎಂದೂ ಹೇಳಿದ್ದಾರೆ. ಮೇ 3ರಂದು ನಡೆದಿದ್ದ […]

ಕೊನೆಗೂ ರಾಜೀನಾಮೆ ನೀಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್:ಯುವ ಸಮೂಹದ ಬೇಡಿಕೆಗಳಿಗೆ ಮಂಡಿಯೂರಿದ ಕೇಂದ್ರ

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆಯುತ್ತಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ (ಇಂದು) ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ದೊಡ್ಡ ಬೇಡಿಕೆಗೆ ಕೇಂದ್ರ ಸರಕಾರ ಮಂಡಿಯೂರಿದೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ […]