ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸಹಿತ 32 ಮಂದಿ ದೋಷಮುಕ್ತ

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 28 ವರ್ಷದ ಸುದೀರ್ಘ ವಿಚಾರಣೆಯ ನಂತ್ರ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯ ಬುಧವಾರ ತನ್ನ ತೀರ್ಪು ಪ್ರಕಟಿಸಿದ್ದು, ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾಭಾರತಿ ಸೇರಿ 32 ಜನರಿಗೆ ಕ್ಲೀನ್ ಚೀಟ್ ನೀಡಿದೆ. ಸಿಬಿಐ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರು ತೀರ್ಪು ಪ್ರಕಟಿಸಿದ್ದು, ಇದು ಪೂರ್ವ ನಿಯೋಜಿತ ಕೃತ್ಯವಲ್ಲ, ಅವರನ್ನು ಆರೋಪಿಗಳು ಎನ್ನಲು ಯಾವುದೇ ಸಾಕ್ಷ್ಯಗಳಿಲ್ಲ. ಎಲ್ಲಾ ಆರೋಪಿಗಳನ್ನು ಆರೋಪ ಮುಕ್ತ ಘೋಷಿಸಿ […]

ಗಾಳಿಯ ಮೂಲಕ ಕೊರೊನಾ ಹರಡುವಿಕೆ: ಸಿಸಿಎಂಬಿ ಸಂಸ್ಥೆಯಿಂದ ಅಧ್ಯಯನ

ಹೈದರಾಬಾದ್: ಕೊರೊನಾ ಸೋಂಕಿತ ವ್ಯಕ್ತಿಯಿಂದ ಕೊರೊನಾ ವೈರಸ್‌ ಗಾಳಿಯಲ್ಲಿ ಸೇರಿಕೊಳ್ಳುತ್ತದೆಯೇ?. ಗಾಳಿಯಲ್ಲಿ ವೈರಸ್ ಹರಡುವುದಾದರೆ ಎಷ್ಟು ಸಮಯದವರೆಗೆ ಅದು ಜೀವಂತವಾಗಿರುತ್ತದೆ ಎಂಬ ನಿಟ್ಟಿನಲ್ಲಿ ಹೈದರಾಬಾದ್‌ನ ಸಿಎಸ್‌ಐಆರ್‌–ಸೆಂಟರ್ ಫಾರ್‌ ಸೆಲ್ಯುಲಾರ್‌ ಅಂಡ್ ಮಾಲಿಕ್ಯುಲರ್ ಬಯಾಲಜಿ (ಸಿಸಿಎಂಬಿ) ಸಂಸ್ಥೆ ಅಧ್ಯಯನ ಆರಂಭಿಸಿದೆ. ಗಾಳಿ ಮೂಲಕವೂ ಕೊರೊನಾ ವೈರಸ್‌ ಹರಡುತ್ತದೆ ಎಂದು ವಿಶ್ವದ ವಿವಿಧ ದೇಶಗಳ 200ಕ್ಕೂ ಹೆಚ್ಚು ಜನ ವಿಜ್ಞಾನಿಗಳು ವಿಶ್ವ ಆರೋಗ್ಯ ಸಂಸ್ಥೆಗೆ ಎರಡು ತಿಂಗಳ ಹಿಂದೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈ ಅಧ್ಯಯನ ಹೆಚ್ಚಿನ ಮಹತ್ವ […]

ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಶಿರೋಮಣಿ ಅಕಾಲಿದಳ

ನವದೆಹಲಿ: ಶಿರೋಮಣಿ ಅಕಾಲಿದಳ (ಎಸ್‌ಎಡಿ) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಜತೆಗಿನ ಸುದೀರ್ಘ ಕಾಲದ ಸಂಬಂಧವನ್ನು ಕಡಿದುಕೊಂಡಿದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗೆ ಶಿರೋಮಣಿ ಅಕಾಲಿ ದಳ ವಿರೋಧ ವ್ಯಕ್ತಪಡಿಸಿದ್ದು, ಅದೇ ವಿಚಾರವಾಗಿ ಪಕ್ಷದ ನಾಯಕಿ ಹರ್ಸಿಮ್ರತ್‌ ಕೌರ್‌ ಕೇಂದ್ರ ಸಚಿವ ಸ್ಥಾನಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ್ದರು. ಎನ್‌ಡಿಎ ಜತೆಗಿನ ಮೈತ್ರಿ ಕಡಿದುಕೊಂಡ ಬಗ್ಗೆ ಪಕ್ಷದ ಅಧ್ಯಕ್ಷ ಸುಖ್ಬಿರ್‌ ಸಿಂಗ್‌ ಬಾದಲ್‌ ಶನಿವಾರ ಘೋಷಿಸಿದರು. ಈ ಬಗ್ಗೆ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಒಮ್ಮತದಿಂದ ಈ ನಿರ್ಧಾರಕ್ಕೆ […]

ಭೂಕುಸಿತ: ಮಹಿಳಾ ಕ್ರಿಕೆಟ್ ಆಟಗಾರ್ತಿ ಮೃತ್ಯು, ಐವರು ಕಣ್ಮರೆ

ಮೇಘಾಲಯ: ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಭೂಕುಸಿತ ಉಂಟಾಗಿದ್ದು, ಇದರಿಂದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಜಿಯಾ ಅಹ್ಮದ್ ಮೃತಪಟ್ಟಿದ್ದಾರೆ. ಇತರ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಮಾವ್ನಿ ಪ್ರದೇಶದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ. ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಿಗಳಲ್ಲಿ ಮೇಘಾಲಯ ಪರ ಆಡಿದ್ದ ರಜಿಯಾ ಅವರ ಮೃತದೇಹವನ್ನು ಅವಶೇಷಗಳಡಿಯಿಂದ ಪತ್ತೆ ಹಚ್ಚಲಾಗಿದೆ. ಇನ್ನೂ ಐವರು ನಾಪತ್ತೆಯಾಗಿದ್ದಾರೆ ಎಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಲ್ವೆಸ್ಟರ್ […]

ನೂರೊಂದು ನೆನಪು ಎದೆಯಾಳದಲ್ಲಿ ಬಿಟ್ಟು ಹೋದ್ರು ಎಸ್ ಪಿ ಬಾಲಸುಬ್ರಹ್ಮಣ್ಯ

ಚೆನ್ನೈ: ನೂರೊಂದು ನೆನಪುಗಳನ್ನು ಅಭಿಮಾನಿಗಳ ಎದೆಯಾಳದಲ್ಲಿ ಅಮರವಾಗಿಸಿ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯ ಅವರು ನಿದ್ದೆ ಜಾರಿದ್ದಾರೆ. ಗಾನ ಗಂಧರ್ವ ಎಂದೇ ಖ್ಯಾತರಾದ ಎಸ್ ಪಿ ಬಾಲಸುಬ್ರಮಣ್ಯಂ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು. ಎಸ್ ಪಿಬಿ ಕಳೆದ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. 74 ವರ್ಷದ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. […]