ನನಗೆ ಗಾಂಜಾ ಬೇಡ, ಮಾಲ್ ಬೇಕೆಂದಿದ್ದ ಖ್ಯಾತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ

ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ಸುತ್ತ ಗಿರ್ಕಿ ಹೊಡೆಯುತ್ತಿದ್ದ ಡ್ರಗ್ಸ್ ದಂಧೆ ಪ್ರಕರಣ ಇದೀಗ ನಟಿ ದೀಪಿಕಾ ಪಡುಕೋಣೆಯ ಕೊರಳಿಗೂ ಸುತ್ತಿಕೊಂಡಿದೆ. ಬಾಲಿವುಡ್ ಗೆ ಅಂಟಿರುವ ಡ್ರಗ್ಸ್ ಜಾಲದ ಬಗ್ಗೆ ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ)ಯು ತನಿಖೆಯನ್ನು ತೀವ್ರಗೊಳಿಸಿದ್ದು, 2017ರಲ್ಲಿ ದೀಪಿಕಾ ಮಾಡಿರುವ ವಾಟ್ಸ್ಆ್ಯಪ್ ಸಂದೇಶ ವಿನಿಮಯ ಈಗ ಬಹಿರಂಗಗೊಂಡಿದೆ. ‘ಡಿ’ ಮತ್ತು ‘ಕೆ’ ಎಂಬ ಅಕ್ಷರದಲ್ಲಿ ಸಂದೇಶ ವಿನಿಮಯವಾಗಿದ್ದು, ‘ಡಿ’ ಎಂದರೆ ದೀಪಿಕಾ ಪಡುಕೋಣೆ ಮತ್ತು ‘ಕೆ’ ಎಂದರೆ ಕರೀಷ್ಮಾ ಪ್ರಕಾಶ್ ಎಂದು ಹೇಳಲಾಗಿದೆ. […]
ಕೃಷಿ ಮಸೂದೆಗಳು ರೈತ ವಿರೋಧಿಯಲ್ಲ: ಪ್ರಧಾನಿ ಮೋದಿ

ನವದೆಹಲಿ: ರಾಜ್ಯಸಭೆಯಲ್ಲಿ ಅನುಮೋದನೆಗೊಂಡಿರುವ ಕೃಷಿ ಮಸೂದೆಗಳು ರೈತ ವಿರೋಧಿಯಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನೂತನ ಕೃಷಿ ಮಸೂದೆಗಳು ಇಂದಿನ ಕಾಲಕ್ಕೆ ಪ್ರಸ್ತುತವಾಗಿದ್ದು, ಇದರಿಂದ ರೈತರಿಗೆ ಉತ್ತಮ ಅನುಕೂಲವಿದೆ. ಆದರೆ ಈ ಮಸೂದೆಗಳ ಬಗ್ಗೆ ವಿರೋಧಪಕ್ಷಗಳು ಅಪಪ್ರಚಾರ ನಡೆಸುತ್ತಿವೆ ಎಂದು ಅವರು ಇಂದು ತಿಳಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ, ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ ಮುಂದುವರಿಯುತ್ತದೆ ಎಂಬುದಾಗಿ ರೈತರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದರು.
ಪ್ರಜಾಸತ್ತಾತ್ಮಕ ಭಾರತದ ದನಿ ಹತ್ತಿಕ್ಕುವ ಕೆಲಸ ಮುಂದುವರಿದಿದೆ: ರಾಹುಲ್ ಗಾಂಧಿ ಕಿಡಿ

ನವದೆಹಲಿ: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸುವ ವೇಳೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಕಾಂಗ್ರೆಸ್ ನ ಮೂರು ಸದಸ್ಯರು ಸಹಿತ ಒಟ್ಟು ಎಂಟು ಸದಸ್ಯರನ್ನು ಅಮಾನತು ಮಾಡಲಾಗಿತ್ತು. ರಾಜ್ಯಸಭೆಯ ಎಂಟು ಸದಸ್ಯರನ್ನು ಅಮಾನತು ಮಾಡಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಜಾಸತ್ತಾತ್ಮಕ ಭಾರತದ ದನಿ ಹತ್ತಿಕ್ಕುವ ಕೆಲಸ ಮುಂದುವರಿದಿದೆ. ಸಂಸದರಿಗೆ ಮೊದಲು ಮಾತನಾಡುವ ಅವಕಾಶ ನಿರಾಕರಿಸಲಾಯಿತು. ನಂತರ ಅವರನ್ನು ಅಮಾನತು ಮಾಡಲಾಯಿತು ಎಂದು ವಾಗ್ದಾಳಿ ನಡೆಸಿದ್ದಾರೆ. […]
ಇಂದಿನಿಂದ ಮರಳುನಾಡಿನಲ್ಲಿ ಐಪಿಎಲ್ ಜಾತ್ರೆ ಶುರು: ಉದ್ಘಾಟನಾ ಪಂದ್ಯದಲ್ಲಿ ಮುಂಬೈ- ಚೆನ್ನೈ ತಂಡಗಳ ಸೆಣಸಾಟ

ಅಬುಧಾಬಿ: ಕೊರೊನಾ ಆತಂಕ, ಅಡೆತಡೆಗಳ ನಡುವೆಯೇ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ಉಣಬಡಿಸಲು ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 (ಐಪಿಎಲ್ ) ಕ್ರಿಕೆಟ್ ಟೂರ್ನಿ ಇಂದಿನಿಂದ ಶುರುವಾಗಲಿದೆ. ಅಬುಧಾಬಿಯ ಅಲ್ ಝಯೀದ್ ಕ್ರೀಡಾಂಗಣದಲ್ಲಿ ನಡೆಯುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇದರೊಂದಿಗೆ 53 ದಿನಗಳ ಐಪಿಎಲ್ ಕ್ರಿಕೆಟ್ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರೇಕ್ಷಕರಿಲ್ಲದ ಜಾತ್ರೆ: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ಪಂದ್ಯಗಳಿಗೆ ಜನರನ್ನು ನಿರ್ಬಂಧಿಸಲಾಗಿದ್ದು, […]
ಎನ್ ಡಿಎ ಮೈತ್ರಿಕೂಟದಲ್ಲಿ ಬಿಕ್ಕಟ್ಟು: ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ರಾಜೀನಾಮೆ

ನವದೆಹಲಿ: ಕೃಷಿ ಮಸೂದೆಯನ್ನು ವಿರೋಧಿಸಿ ಕೇಂದ್ರ ಆಹಾರ ಸಂಸ್ಕರಣ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ಗುರುವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರಬಂದಿದ್ದಾರೆ. ಕೌರ್ ಅವರು ಎನ್ ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಶಿರೋಮಣಿ ಅಕಾಲಿ ದಳದ ಸಂಸದೆ. ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ಕೃಷಿ ಮಸೂದೆಗೆ ವಿರೋಧ […]