ನ್ಯಾಯಾಂಗ ನಿಂದನೆ: 1 ರೂ. ದಂಡ ಪಾವತಿಸಿದ ಪ್ರಶಾಂತ್ ಭೂಷಣ್

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಭೂಷಣ್‌ ಅವರು ಸೋಮವಾರ ಪಾವತಿಸಿದರು. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್‌ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್‌, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಅದರಂತೆ ಇಂದು ಅವರು ದಂಡ ಪಾವತಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್‌ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ. […]

ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ

ನವದೆಹಲಿ: ಮಾಜಿ ಕೇಂದ್ರ ಸಚಿವ, ಆರ್ ಜೆಡಿ ಪಕ್ಷದ ಹಿರಿಯ ನಾಯಕರಾಗಿದ್ದ ರಘುವಂಶ್ ಪ್ರಸಾದ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ರಘುವಂಶ್ ಪ್ರಸಾದ್ ಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಕಾರಿಯಾಗದೆ  ಇಂದು ಅವರು ಮೃತಪಟ್ಟಿದ್ದಾರೆ. ರಘುವಂಶ್ ಪ್ರಸಾದ್ […]

ಉಸಿರಾಟದ ಸಮಸ್ಯೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ದಾಖಲು

ನವದೆಹಲಿ: ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದರಿಂದ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆ. 31ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣದಿಂದ ಶನಿವಾರ ರಾತ್ರಿ 11 ಗಂಟೆಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.  

ಗಾಯಕಿ ಅನುರಾಧಾ ಪೊಡವಾಲ್ ಅವರ ಪುತ್ರ ಆದಿತ್ಯ ಪೌಡ್ವಾಲ್ ನಿಧನ

ಮುಂಬೈ: ಹಿರಿಯ ಗಾಯಕಿ ಅನುರಾಧಾ ಪೊಡವಾಲ್ ಅವರ ಪುತ್ರ ಆದಿತ್ಯ ಪೌಡ್ವಾಲ್ (35) ಮುಂಬೈನಲ್ಲಿ ನಿಧನ ಹೊಂದಿದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಗಾಯಕ ಹಾಗೂ ಸಂಗೀತ ನಿರ್ದೇಶಕ ಶಂಕರ್‌ ಮಹಾದೇವನ್‌ ಟ್ವೀಟ್‌ ಮಾಡಿದ್ದಾರೆ. ನನ್ನ ಹಲವು ಪ್ರಾಜೆಕ್ಟ್‌ಗಳಲ್ಲಿ ಆದಿತ್ಯ ಕೆಲಸ ಮಾಡಿದ್ದರು. ಅವರ ಸಾವಿನ ಸುದ್ದಿ ಕೇಳಿ ನನಗೆ ಆಘಾತವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದೇವರು ದುಖ ಭರಿಸುವ ಶಕ್ತಿ ನೀಡಲಿ ಎಂದು ಶಂಕರ್‌ ಟ್ವೀಟ್‌ […]

ಬಡವರ ಕೈ ಬಲಪಡಿಸುವ ಮೂಲಕ ಬಡತನ ನಿರ್ಮೂಲನೆ ಮಾಡಬೇಕಿದೆ: ಪ್ರಧಾನಿ ಮೋದಿ

ನವದೆಹಲಿ: ಬಡತನವನ್ನು ಹೋಗಲಾಡಿಸಲು ನಾವು ಬಡವರನ್ನು ಬಲಪಡಿಸಬೇಕು. ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಮೂಲಕ ಅವರನ್ನು ಸಬಲೀಕರಣಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪಿಎಂಎವೈ ಅಡಿಯಲ್ಲಿ ಮಧ್ಯಪ್ರದೇಶದ ಗ್ರಾಮೀಣ ಭಾಗಗಳಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳ ಗೃಹಪ್ರವೇಶದ ವರ್ಚುವಲ್‌ ಸಮಾರಂಭದಲ್ಲಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಿ ಯೋಜನೆಯ ಕೆಲವು ಫಲಾನುಭವಿಗಳೊಂದಿಗೆ ಆನ್‌ಲೈನ್‌ ಮೂಲಕ ಸಂವಹನ ನಡೆಸಿದರು.