ಡ್ರಗ್ಸ್ ದಂಧೆ: ನಟಿ ರಿಯಾ ಚಕ್ರವರ್ತಿಗೆ ಎನ್ ಸಿಬಿಯಿಂದ ನೋಟಿಸ್ ಜಾರಿ

ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ ನಟಿ ರಿಯಾ ಚಕ್ರವರ್ತಿಗೆ ದಿನದಿಂದ ದಿನಕ್ಕೆ ಬೀಗಿಗೊಳ್ಳುತ್ತಿದ್ದು, ರಿಯಾಳ ಆತಂಕ ಮತ್ತಷ್ಟು ಹೆಚ್ಚಾಗಿದೆ. ಇದೀಗ ಡ್ರಗ್ಸ್ ದಂಧೆಯ ನಂಟಿನ ಆರೋಪದಡಿ ರಿಯಾ ಚಕ್ರವರ್ತಿಗೆ ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಎನ್ ಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಎನ್‌ಸಿಬಿ ಕಸ್ಟಡಿಯಲ್ಲಿ ಇರುವ ರಿಯಾ ಚಕ್ರವರ್ತಿ ಸಹೋದರ ಶೋವಿಕ್‌, ಸ್ಯಾಮುಯೆಲ್ ಮಿರಾಂಡ ಹಾಗೂ ದೀಪೇಶ್‌ ಸಾವಂತ್ ವಿಚಾರಣೆ […]

ಡ್ರಗ್ಸ್ ದಂಧೆ: ನಟ ಸುಶಾಂತ್‌ ಸಿಂಗ್‌ ಮನೆಕೆಲಸದಾಳು ದೀಪೇಶ್‌ ಸಾವಂತ್‌ ಬಂಧನ

ಮುಂಬೈ: ಡ್ರಗ್ಸ್ ದಂಧೆಯ ನಂಟಿನ ಆರೋಪದಡಿ ನಟ ಸುಶಾಂತ್‌ ಸಿಂಗ್‌ ಅವರ ಮನೆಗೆಲಸದ ಸಹಾಯಕ ದೀಪೇಶ್‌ ಸಾವಂತ್‌ನನ್ನು ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಇಂದು ರಾತ್ರಿ ಬಂಧಿಸಿದ್ದಾರೆ. ಮಾದಕವಸ್ತುಗಳ ಸೇವನೆ, ಸಂಗ್ರಹ ಮತ್ತು ಸಾಗಾಟಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೀಪೇಶ್‌ ಸಾವಂತ್ ನ ಪಾತ್ರ ಇರುವ ಬಗ್ಗೆ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದ ಎನ್‌ಸಿಬಿಯು ದೀಪೇಶ್‌ನ ಹೇಳಿಕೆ ಮತ್ತು ಡಿಜಿಟಲ್‌ ಸಾಕ್ಷ್ಯಗಳ ಆಧಾರದ ಮೇಲೆ ಆತನನ್ನು ಬಂಧಿಸಿದೆ ಎಂದು ತಿಳಿದುಬಂದಿದೆ.

ಸಾಲಗಾರರಿಗೆ ಸಿಹಿಸುದ್ದಿ: ಸಾಲ ಮರುಪಾವತಿ ಅವಧಿ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ಬ್ಯಾಂಕ್ ಸಾಲ ಸೇರಿದಂತೆ ವಿವಿಧ ರೀತಿಯ ಇಎಂಐ ಪಾವತಿದಾರರಿಗೆ ಸುಪ್ರೀಂ ಕೋರ್ಟ್ ಇಂದು ಸಿಹಿ ಸುದ್ದಿನೀಡಿದೆ. ಸಾಲ ಮರುಪಾವತಿ ಮಾಡುವ ಅವಧಿಯನ್ನು ಮುಂದೂಡಿಕೆ ಮಾಡಿ ಸಾಲಗಾರರ ಹೊರೆಯನ್ನು ಸುಪ್ರೀಂ ಕೋರ್ಟ್ ಇಳಿಸಿದೆ. ಈ ವರ್ಷದ ಆ.31 ರವರೆಗೆ ವಸೂಲಾಗದ ಸಾಲ ಎಂದು ಘೋಷಿಸಿಲ್ಲದ ಸಾಲ ಖಾತೆಗಳನ್ನು ಮುಂದಿನ ಆದೇಶದವರೆಗೆ ಎನ್ ಪಿಎ ಆಗಿ ಘೋಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಇದು ಕೊರೊನಾದಿಂದ ಸಂಕಷ್ಟದಲ್ಲಿರುವ ಸಾಲಗಾರರಿಗೆ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಕೋವಿಡ್‌ ಪಿಡುಗಿನಿಂದಾದ […]

ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಆರೋಪಿ ನಟಿ ರಿಯಾ ಚಕ್ರವರ್ತಿ ಸಹೋದರ ಶೌವಿಕ್‌‌ ಚಕ್ರವರ್ತಿ, ಸುಶಾಂತ್‌ ಮ್ಯಾನೇಜರ್ ಸಾಮ್ಯುಯೆಲ್ ಮಿರಾಂದ್‌ ಅರೆಸ್ಟ್

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಟಿ ರಿಯಾ ಚಕ್ರವರ್ತಿ ಸಹೋದರ ಶೌವಿಕ್‌‌ ಚಕ್ರವರ್ತಿ, ಸುಶಾಂತ್‌ ಅವರ ಮ್ಯಾನೇಜರ್ ಸಾಮ್ಯುಯೆಲ್ ಮಿರಾಂದ್‌ ಅವರನ್ನು ಮಾದಕವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ಅಧಿಕಾರಿಗಳು ಇಂದು ರಾತ್ರಿ ಬಂಧಿಸಿದ್ದಾರೆ. ಇವಬ್ಬರಿಗೆ ಡ್ರಗ್ಸ್ ಪೆಡ್ಲರ್ ಜತೆಗೆ ಸಂಪರ್ಕ ಇರುವುದು ಖಚಿತಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಂಧನ ಮಾಡಿದ್ದಾರೆ. ಎನ್‌ಸಿಬಿ ತಂಡವು ಇಂದು ಬೆಳಿಗ್ಗೆ 6.30 ರಿಂದ ಸಾಂತಕ್ರೂಸ್‌ನಲ್ಲಿರುವ ಶೌವಿಕ್‌ ಮನೆ ಮತ್ತು ಅಂಧೇರಿಯಲ್ಲಿರುವ ಮಿರಾಂದ್‌ ಮನೆಯಲ್ಲಿ […]

ಪ್ರಧಾನಿ ಮೋದಿಗೆ ಇ ಮೇಲ್ ಮೂಲಕ ಜೀವ ಬೆದರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇ ಮೇಲ್ ಮೂಲಕ ದುಷ್ಕರ್ಮಿಗಳು ಬೆದರಿಕೆ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಈ ಮೇಲ್ ನಲ್ಲಿ ‘Kill Narendra Modi’ ಎಂಬ ಸಂದೇಶ ಕಳುಹಿಸಿ ಪ್ರಧಾನಿ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎನ್ನಲಾಗಿದೆ. ಗೃಹ ಸಚಿವಾಲಯ ಈ ಬೆದರಿಕೆ ಇ ಮೇಲ್ ನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಧಾನಿ ಮೋದಿಗೆ ರಕ್ಷಣೆ ನೀಡುವ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ಜತೆ […]