ಟಾಟಾ ಮೋಟಾರ್ಸ್ ನ ನೂತನ ಟಾಟಾ ನೆಕ್ಸಾನ್ XM (S) ವೇರಿಯೆಂಟ್ ಕಾರು ಮಾರುಕಟ್ಟೆಗೆ ಲಾಂಚ್

ಮುಂಬೈ: ಭಾರತದಲ್ಲಿ ಕಾರು ತಯಾರಿಕಾ ಕಂಪೆನಿಗಳ ಪೈಕಿ ಟಾಟಾ ಮೋಟಾರ್ಸ್‌ಗೆ ಅಗ್ರಸ್ಥಾನವಿದೆ. ಟಾಟಾ ಕಾರುಗಳ ಪೈಕಿ ನೆಕ್ಸಾನ್ ಮಾರಾಟದಲ್ಲಿ ದಾಖಲೆ ಬರೆದಿದ್ದು, ಇದೀಗ ನೆಕ್ಸಾನ್ ಕಾರಿನಲ್ಲಿ ಮತ್ತೊಂದು ವೇರಿಯೆಂಟ್ ಬಿಡುಗಡೆಯಾಗಿದೆ. ಟಾಟಾ ನೆಕ್ಸಾನ್ XM (S) ವೇರಿಯೆಂಟ್ ಕಾರು ಮಾರುಕಟ್ಟೆ ಪ್ರವೇಶಿಸಿದೆ. ಭಾರತದಲ್ಲಿ ಲಭ್ಯವಿರುವ ಅತಿ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಸನ್ ರೂಫ್ ಫೀಚರ್ಸ್ ಹೊಂದಿದ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನೂತನ ಟಾಟಾ ನೆಕ್ಸಾನ್ XM (S) ವೇರಿಯೆಂಟ್ ಕಾರಿನ ಬೆಲೆ 8.36 ಲಕ್ಷ ರೂಪಾಯಿಯಿಂದ […]

ಜಿಡಿಪಿ ಕುಸಿತಕ್ಕೆ ನೋಟು ಅಮಾನ್ಯೀಕರಣವೇ ಕಾರಣ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಕಳೆದ 40 ವರ್ಷಗಳಲ್ಲಿ ಶೇಕಡಾ 23.9ರಷ್ಟು ಕುಸಿದಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು 2016ರ ನವೆಂಬರ್ 8ರಂದು ಕೈಗೊಂಡ ನೋಟು ಅಮಾನ್ಯೀಕರಣ ನಿರ್ಧಾರವೇ ಪ್ರಮುಖ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ವಿಡಿಯೋ ಹೇಳಿಕೆ ಮೂಲಕ ಟೀಕಿಸಿರುವ ಅವರು, ನೋಟು ಅಮಾನ್ಯೀಕರಣದಿಂದ ದೇಶದ ಜಿಡಿಪಿ ತಳಮಟ್ಟಕ್ಕೆ ಇಳಿದಿದೆ ಎಂದು ಗುಡುಗಿದ್ದಾರೆ. ದೇಶದ ಬಡವರು, ರೈತರು, ಅಸಂಘಟಿತ ವಲಯಗಳ ಮೇಲೆ ದಾಳಿ ನಡೆಸುತ್ತಿರುವ […]

ಪಬ್ಜಿ ಸಹಿತ 118 ಚೀನಾದ ಆ್ಯಪ್ ಗಳಿಗೆ ನಿಷೇಧ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಚೀನಾದ ಮೊಬೈಲ್ ಆ್ಯಪ್ ಗಳ ವಿರುದ್ಧ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಸಮರ ಸಾರಿದೆ. ಪಬ್ಜಿ, ಪಬ್ಜಿ ಮೊಬೈಲ್ ಲೈಟ್, ವಿಚಾಟ್ ವರ್ಕ್‌, ವಿಚಾಟ್ ರೀಡಿಂಗ್ ಸೇರಿದಂತೆ 118 ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಹಿಂದೆ ಎರಡು ಬಾರಿ ಒಟ್ಟು ಚೀನಾದ ನೂರಕ್ಕೂ ಹೆಚ್ಚು ಆ್ಯಪ್‌ಗಳ ಮೇಲೆ ನಿಷೇಧ ಹೇರಲಾಗಿತ್ತು. ದೇಶದ ರಕ್ಷಣೆ, ಸಾರ್ವಭೌಮತ್ವ, ಸಮಗ್ರತೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು 118 ಆ್ಯಪ್‌ಗಳನ್ನು ನಿಷೇಧಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಬಿಹಾರ: ಜೀತನ್ ರಾಮ್ ಮಾಂಝಿ ಪಕ್ಷ ಎನ್‌ಡಿಎ ಮೈತ್ರಿ ಒಕ್ಕೂಟಕ್ಕೆ ಸೇರ್ಪಡೆ

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ನಡೆಯುವ ಸಾಧ್ಯತೆಗಳಿದ್ದು, ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಬಿಹಾರ ರಾಜಕೀಯದಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ನೇತೃತ್ವದ ಎಚ್‌ಎಎಂ(ಎಸ್‌) ಪಕ್ಷವು ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಎನ್‌ಡಿಎ ಮೈತ್ರಿ ಒಕ್ಕೂಟದೊಂದಿಗೆ ಸೇರ್ಪಡೆಯಾಗಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ಪಕ್ಷದ ಮುಖಂಡ ಮಾಂಝಿ ಅವರು ಗುರುವಾರ ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ವಕ್ತಾರ ಡ್ಯಾನಿಷ್ ರಿಜ್ವಾನ್ […]

ಬ್ರಹ್ಮಶ್ರೀ ನಾರಾಯಣ ಗುರು ದೂರದೃಷ್ಟಿಯ ದಾರ್ಶನಿಕ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಬ್ರಹ್ಮಶ್ರೀ ನಾರಾಯಣ ಗುರು ದೂರದೃಷ್ಟಿಯ ದಾರ್ಶನಿಕ. ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುತ್ತೇನೆ. ಅವರ ಜೀವನ, ಕಲೆಗಳು ಆಧ್ಯಾತ್ಮಿಕತೆ ಹಾಗೂ ಸಮಾಜ ಸುಧಾರಣೆಯ ಉತ್ತಮ ಮಿಶ್ರಣವಾಗಿದೆ. ಅವರು ಶಿಕ್ಷಣ ಮತ್ತು ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಬುಧವಾರ ನಾರಾಯಣಗುರುಗಳ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು. ಬಳಿಕ ಟ್ವೀಟ್ ಮಾಡಿರುವ ಅವರು, ಕೇರಳದಲ್ಲಿ ಜನಿಸಿದ್ದ ಶ್ರೀ ನಾರಾಯಣ […]